ಕಾವೇರಿ ನೀರು ಬಿಡುವ ಆದೇಶ ಒಪ್ಪಲು ಸಾಧ್ಯವಿಲ್ಲ: ಮಾಜಿ ಸಿಎಂ ಬೊಮ್ಮಾಯಿ

Date:

  • ‘ತಮಿಳುನಾಡಿಗೆ 5 ಸಾವಿರ ಕ್ಯೂಸೆಕ್ಸ್ ನೀರು ಬಿಡಲು ಸರ್ಕಾರಕ್ಕೆ ಆದೇಶ’
  • ‘ಸರ್ಕಾರ ಕೂಡಲೇ ಸುಪ್ರೀಂ ಕೋರ್ಟ್‌ಗೆ ಹೋಗಿ ಮನವರಿಕೆ ಮಾಡಲಿ’

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಸಿಡಬ್ಲ್ಯೂಎಂಎ ಆದೇಶದಂತೆ ತಮಿಳುನಾಡಿಗೆ ಪ್ರತಿದಿನ 5 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ರಾಜ್ಯ ಸರ್ಕಾರಕ್ಕೆ ಮಾಡಿರುವ ಆದೇಶ ಪಾಲನೆ ಮಾಡಲು ಸಾಧ್ಯವಿಲ್ಲದ ಒಂದು ಆಜ್ಞೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ತಮಿಳುನಾಡಿಗೆ 5 ಸಾವಿರ ಕ್ಯೂಸೆಕ್ ಕಾವೇರಿ ನೀರು ಬಿಡಲು ಕರ್ನಾಟಕಕ್ಕೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮತ್ತೆ ಆದೇಶ ಮಾಡಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿ, “ರಾಜ್ಯ ಸರ್ಕಾರ ಕೂಡಲೇ ಸುಪ್ರೀಂ ಕೋರ್ಟ್‌ಗೆ ಹೋಗಿ ನೀರನ್ನು ಬಿಡಲು ಸಾಧ್ಯವಿಲ್ಲದ ಕಾರಣವನ್ನು ಮನವರಿಕೆ ಮಾಡಿಕೊಡಬೇಕು” ಎಂದು ಒತ್ತಾಯಿಸಿದ್ದಾರೆ.

“ಈ ಆಜ್ಞೆ ಬರುವ ಮುಂಚೆ ನೀರು ಬಿಡಲು ಪ್ರಾರಂಭ ಮಾಡಿರುವ ರಾಜ್ಯ ಸರ್ಕಾರ ತನ್ನ ಕೈಯನ್ನು ತಾನೇ ಕಟ್ಟಿಸಿಕೊಂಡಿದೆ. ಕೂಡಲೇ ನೀರು ನಿಲ್ಲಿಸಿ ಸುಪ್ರೀಂ ಕೋರ್ಟ್ ನಲ್ಲಿ ರಾಜ್ಯದ ಜನತೆಗೆ ನ್ಯಾಯ ಒದಗಿಸಲು ಕಾನೂನಾತ್ಮಕ ಹೋರಾಟ ಮಾಡಬೇಕು” ಎಂದು ಆಗ್ರಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸೆ. 12ರ ಆದೇಶ ಪುನರ್‌ ಉಚ್ಚರಣೆ

ನವದೆಹಲಿಯ ಸಿಡಬ್ಲ್ಯೂಎಂಎ ಕಚೇರಿಯಲ್ಲಿ ಸೋಮವಾರ ನಡೆದ ಕಾವೇರಿ ನದಿ ನೀರು ನಿರ್ವಹಣಾ ಸಮಿತಿ ಸಭೆಯಲ್ಲಿ ಕರ್ನಾಟಕ್ಕೆ ಐದು ಸಾವಿರ ಕ್ಯೂಸೆಕ್‌ ನೀರು ಹರಿಸಲು ಮತ್ತೆ ಆದೇಶ ಹೊರಡಿಸಲಾಗಿದೆ.

ಸೆಪ್ಟೆಂಬರ್ 12ರ ಆದೇಶದಂತೆ 15 ದಿನ ನಿತ್ಯ ಐದು ಸಾವಿರ ಕ್ಯೂಸೆಕ್‌ ನೀರು ಹರಿಸಲು ಕರ್ನಾಟಕ್ಕೆ ಸೂಚಿಸಲಾಗಿದ್ದು, ಕಾವೇರಿ ನೀರು ನಿಯಂತ್ರಣ ಮಂಡಳಿ ಸಮಿತಿಯ ಆದೇಶ ಪಾಲನೆ ಮಾಡಲೇಬೇಕು ಎಂದು ಸಭೆಯಲ್ಲಿ ಖಡಕ್‌ ಆಗಿ ಸೂಚನೆ ನೀಡಲಾಗಿದೆ.

ಈ ಮೂಲಕ ಕಾವೇರಿ ನೀರು ನಿಯಂತ್ರಣ ಸಮಿತಿ ಈ ಹಿಂದೆ ನೀಡಿದ್ದ ಇದೇ ಆದೇಶವನ್ನು ಈಗ ಮತ್ತೊಮ್ಮೆ ಪುನರ್‌ ಉಚ್ಚರಿಸಿದೆ. ಇದರಿಂದ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದ್ದು, ಸರ್ಕಾರ ಯಾವ ತೀರ್ಮಾನ ತೆಗೆದುಕೊಳ್ಳಲಿದೆ ಎಂದು ಕಾದುನೋಡಬೇಕು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...