ಮೈಸೂರು | ಜನರ ವಿರುದ್ಧ ಕೇಂದ್ರ ಸರ್ಕಾರ ಯುದ್ಧ ಘೋಷಿಸಿದೆ: ತೀಸ್ತಾ ಸೆಟಲ್ವಾಡ್‌

Date:

ದೇಶದ ಎಲ್ಲ ಸಮುದಾಯಗಳ ವಿರುದ್ಧ ಕೇಂದ್ರ ಸರ್ಕಾರ ಯುದ್ಧ ಘೋಷಿಸಿದೆ. ಜನರ ಹೋರಾಟವನ್ನು ಹತ್ತಿಕ್ಕುತ್ತಿದೆ. ರೈತರನ್ನು ಶತ್ರಗಳನ್ನಾಗಿ ನೋಡುತ್ತಿದೆ ಎಂದು ಮಾನವ ಹಕ್ಕುಗಳ ಹೋರಾಟಗಾರ್ತಿ ತೀಸ್ತಾ ಸೆಟಲ್ವಾಡ್‌ ಆತಂಕ ವ್ಯಕ್ತಪಡಿಸಿದ್ದಾರೆ.

ಮೈಸೂರಿನಲ್ಲಿ ಪ ಮಲ್ಲೇಶ್‌ ಅವರ 90ನೇ ಜನ್ಮದಿನದ ಸ್ಮರಣೆ ಅಂಗವಾಗಿ ಪ್ರಗತಿಪರ ಸಂಘಟನೆಗಳ ಒಕ್ಕೂಟ ಆಯೋಜಿಸಿದ್ದ ‘ಪ ಮಲ್ಲೇಶ್-90’ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “2014ರಿಂದ ದೇಶದ ಜನರು ನಿರಂಕುಶವಾದಿ, ಸರ್ವಾಧಿಕಾರಿ ಆಡಳಿತದ ಕಪಿಮುಷ್ಟಿಯಲ್ಲಿ ಸಿಲುಕಿದ್ದಾರೆ. ಆರ್‌ಎಸ್‌ಎಸ್‌ಗೆ ಸಂವಿಧಾನವೇ ಸಮಸ್ಯೆಯಾಗಿದೆ. ಕೇಂದ್ರ ಸರ್ಕಾರವು ಸಂವಿಧಾನ ಸೌಧದ ಇಟ್ಟಿಗೆಗಳನ್ನು ಕೆಡವುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಆರ್‌ಎಸ್‌ಎಸ್‌ನ ಹೆಡಗೇವಾರ್‌, ಗೋಳ್ವಾಲ್ಕರ್‌ ಸಿದ್ಧಾಂತದ ಆಧಾರ ಮೇಲೆ ಕೇಂದ್ರ ಸರ್ಕಾರ ಆಳ್ವಿಕೆ ನಡೆಸುತ್ತಿದೆ. ಜಾತಿ ಆಧಾರಿತ ಮನುಸ್ಮೃತಿಯನ್ನು ಜಾರಿಗೊಳಿಸಲು ಹವಣಿಸುತ್ತಿದೆ. ಪ್ರಜಾಪ್ರಭುತ್ವದ ಆಧಾರದಲ್ಲಿ ಅಧಿಕಾರಕ್ಕೆ ಬಂದು, ಪ್ರಜಾಪ್ರಭುತ್ವ ವ್ಯವಸ್ಥಗೆ ಸಂವಿಧಾನ ನೀಡಿರುವ ಮೂಲಭೂತ ಹಕ್ಕುಗಳು, ರಾಜ್ಯನಿರ್ದೇಶಕ ತತ್ವಗಳನ್ನು ಕೆಡವುತ್ತಿದೆ. ಮುಂದಿನ ಚುನಾವಣೆಕ್ಕೆ ಈ ಸರ್ಕಾರವನ್ನು ಮಣಿಸಿ, ಪ್ರಜಾಪ್ರಭುತ್ವವನ್ನು ಮರಳಿ ಕಟ್ಟಬೇಕು” ಎಂದು ಕರೆ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಹಾರಾಷ್ಟ್ರದ ಪುಣೆಯಲ್ಲಿ ಹತ್ಯೆಗಳು ನಡೆಯುತ್ತಲೇ ಇವೆ. ಮಣಿಪುರದಲ್ಲಿ ಹಿಂಸಾಚಾರಕ್ಕೆ ನೂರಾರು ಜನರು ಬಲಿಯಾಗಿದ್ದಾರೆ. 12,000 ಜನರು ನಿರಾಶ್ರಿತರಾಗಿದ್ದಾರೆ. ಸರ್ಕಾರವು ಚಳುವಳಿಗಳನ್ನೇ ಇಲ್ಲವಾಗಿಸಿ, ದಮನ ಮಾಡುತ್ತಿದೆ” ಎಂದರು.

ಈ ಸುದ್ದಿ ಓದಿದ್ದೀರಾ?: ಹಸಿವು ಮುಕ್ತ ರಾಜ್ಯ, ದೇಶ ನಿರ್ಮಾಣಕ್ಕೆ ಕಾಂಗ್ರೆಸ್‌ ಹೊರಟಿದೆ: ಸಿಎಂ ಸಿದ್ದರಾಮಯ್ಯ

ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರೊ. ರವಿವರ್ಮ ಕುಮಾರ್, “ಕಳೆದ ಹತ್ತು ವರ್ಷಗಳಲ್ಲಿ ಪ್ರಧಾನಿ ಸಂಸತ್ತಿನ ಪ್ರಶ್ನೆಗಳಿಗೆ ಉತ್ತರ ಕೊಟ್ಟಿಲ್ಲ. ಸರ್ಕಾರವನ್ನು ಪ್ರಶ್ನಿಸುವ ವಿರೋಧ ಪಕ್ಷಗಳ ಸದಸ್ಯರನ್ನು ಸಂಸತ್ತಿನಿಂದ ಹೊರಗಿಡಲಾಗುತ್ತಿದೆ. ಸಿಬಿಐ, ಇಡಿಗಳ ಮೂಲಕ ಪ್ರಶ್ನಿಸುವವರ ಮೇಲೆ ದಾಳಿ ನಡೆಸಲಾಗುತ್ತಿದೆ” ಎಂದು ಕಿಡಿಕಾರಿದರು.

“ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಸಂಸತ್‌ ಭವನ ಮತ್ತು ರಾಮಮಂದಿರ ಉದ್ಘಾಟನೆಗೆ ಕರೆಯದೆ ಅವಮಾನಿಸಿದೆ. ಕೇಂದ್ರ ಸರ್ಕಾರ ಮತ್ತು ಬಿಜೆಪಿ ಪರ ತೀರ್ಪು ನೀಡುವ ನ್ಯಾಯಾಧೀಶರು, ತಮ ನಿವೃತ್ತಿಯ ನಂತರ ರಾಜ್ಯಪಾಲರಾಗುವಂತಹ ಪರಿಸ್ಥಿತಿ ಈಗಿನದ್ದಾಗಿದೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...