ಬೆಳಗಾವಿ | ರಾಜಹಂಸಗಡ ಕೋಟೆಯಲ್ಲಿ ಕೇಬಲ್ ಕಾರ್ ಯೋಜನೆ; ಕೇಂದ್ರದ ಅಸ್ತು

Date:

ಬೆಳಗಾವಿಯಿಂದ 16 ಕಿ.ಮೀ ದೂರದಲ್ಲಿರುವ ರಾಜಹಂಸಗಡ ಕೋಟೆಯಲ್ಲಿ ಕೇಬಲ್ ಕಾರ್ ನಿರ್ಮಿಸುವ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ.

ಯೋಜನೆ ಬಗ್ಗೆ ಬೆಳಗಾವಿ ದಕ್ಷಿಣ ಶಾಸಕ ಅಭಯ್‌ ಪಾಟೀಲ್‌ ಅವರು ಕೇಂದ್ರ ರಸ್ತೆ ಮತ್ತು ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರನ್ನು ದೆಹಲಿಯಲ್ಲಿ ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಬಳಿಕ ಮಾತನಾಡಿದ ಅಭಯ್ ಪಾಟೀಲ್, “ಕೇಬಲ್‌ ಕಾರ್‌ ಯೋಜನೆಗೆ ಕೇಂದ್ರ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. 60 ಕೋಟಿ ರೂಪಾಯಿಯ ಯೋಜನೆಗೆ ಅಗತ್ಯವಿರುವ ಕ್ರಮ ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ” ಎಂದಿದ್ದಾರೆ.

“ಯೋಜನಾ ವರದಿ ಸ್ವೀಕರಿಸಿ, ಡಿಸೆಂಬರ್‌ಗೆ ಮೊದಲ ಕಂತಿನ ಹಣ ಬಿಡುಗಡೆ ಮಾಡುವ ಬಗ್ಗೆ ಕೇಂದ್ರ ಸಚಿವರು ಭರವಸೆ ನೀಡಿದ್ದಾರೆ. ಜನವರಿ ನಂತರ ಕಾಮಗಾರಿ ಪ್ರಾರಂಭಿಸಲಾಗುವುದು” ಎಂದು ಶಾಸಕ ಪಾಟೀಲ್‌ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಯೋಜನೆಯಿಂದ ರಾಜಹಂಸಗಡ ಕೋಟೆಯು ಬೆಳಗಾವಿ ಮತ್ತು ಸುತ್ತಮುತ್ತಲಿನ ಜಿಲ್ಲೆಗಳಿಗೆ ಮಾತ್ರವಲ್ಲ, ನೆರೆಯ ಮಹಾರಾಷ್ಟ್ರ ಮತ್ತು ಗೋವಾದ ಜನರಿಗೆ ಪ್ರಮುಖ ಪ್ರವಾಸಿ ತಾಣವಾಗಲಿದೆ” ಎನ್ನುತ್ತಾರೆ ಶಾಸಕರು.

ಕಳೆದ ಕೆಲವು ವರ್ಷಗಳಿಂದ ಕೇಬಲ್ ಕಾರ್ ಯೋಜನೆ ಸಂಬಂಧ ಶಾಸಕ ಪಾಟೀಲ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳೊಂದಿಗೆ ಪತ್ರ ವ್ಯವಹಾರ ನಡೆಸುತ್ತಿದ್ದಾರೆ. 2019ರಲ್ಲಿ ರಾಜ್ಯ ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಯೋಜನೆಯ ಸಾಧ್ಯತೆಗಳನ್ನು ಪರಿಶೀಲಿಸಿದ್ದರು. 2021ರಲ್ಲಿ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಯೋಜನೆಯನ್ನು ಕೈಗೆತ್ತಿಕೊಂಡರು. ಆದರೆ, ಅದು ಸಾಕಾರಗೊಳ್ಳಲಿಲ್ಲ. ಎರಡು ಕಿಲೋ ಮೀಟರ್‌ ಉದ್ದದ ಕೇಬಲ್‌ ಕಾರ್‌ ಯೋಜನೆ ಬೆಳಗಾವಿಯ ವ್ಯಾಪಾರಹೆಚ್ಚಿಸಲು ಮತ್ತು ಸ್ಥಳೀಯ ಯುವಕರಿಗೆ ಉದ್ಯೋಗಾವಕಾಶ ಸೃಷ್ಟಿಸಲು ಸಹಾಯಕವಾಗಿದೆ ಎಂದು ಶಾಸಕರು ಮಾಹಿತಿ ನೀಡಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...