ಕರಾವಳಿ ಗಡಿ ಗ್ರಾಮಗಳಲ್ಲಿ ‘ವೈಬ್ರಂಟ್ ವಿಲೇಜ್ ಪ್ರೋಗಾಮ್’ ಜಾರಿಗೆ ಕೇಂದ್ರ ಚಿಂತನೆ: ಅಬ್ದುಲ್ ಅಹದ್

Date:

ಅರುಣಾಚಲ ಪ್ರದೇಶ ಸೇರಿದಂತೆ ದೇಶದ ಗಡಿಗಳಲ್ಲಿರುವ ಹಳ್ಳಿಗಳ ಜನರು ವಲಸೆ ಹೋಗದಂತೆ ತಡೆಯುವ ಮತ್ತು ಗ್ರಾಮಗಳಿಗೆ ಮೂಲ ಸೌಕರ್ಯಗಳನ್ನು ಒದಗಿಸುವ ಕೇಂದ್ರ ಸರ್ಕಾರದ ವೈಬ್ರಂಟ್ ವಿಲೇಜ್ ಪ್ರೋಗಾಮ್‌ ಕರ್ನಾಟಕ ಕರಾವಳಿ ಗಡಿಯಲ್ಲಿಯೂ ಅನುಷ್ಠಾನಕ್ಕೆ ತರಲು ಚಿಂತನೆ ನಡೆಯುತ್ತಿದೆ. ಈ ಸಂಬಂಧ ಕರಾವಳಿ ಕಾವಲು ಪೊಲೀಸ್ ಅಧಿಕಾರಿಗಳು ಇಲ್ಲಿನ ಗ್ರಾಮಗಳ ಬಗ್ಗೆ ಅಧ್ಯಯನ ಮಾಡಿ ವರದಿಯನ್ನು ಕೇಂದ್ರಕ್ಕೆ ಕಳುಹಿಸಲಾಗಿದೆ ಎಂದು ಮಲ್ಪೆ ಕರಾವಳಿ ಕಾವಲು ಪೊಲೀಸ್ ಅಧೀಕ್ಷಕ ಅಬ್ದುಲ್ ಅಹದ್ ತಿಳಿಸಿದ್ದಾರೆ.

ಉಡುಪಿ ಪತ್ರಿಕಾ ಭವನ ಸಮಿತಿಯ ವತಿಯಿಂದ ಆಗಸ್ಟ್‌ 22ರಂದು ಪತ್ರಿಕಾ ಭವನದಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದರು.

“ಮಾದಕ ದ್ರವ್ಯ ಸಾಗಾಟ ಪ್ರಕರಣಗಳು ನಮ್ಮ ವ್ಯಾಪ್ತಿಯ ಸಮುದ್ರ ತೀರದಲ್ಲಿ ಈವರೆಗೆ ಕಂಡುಬಂದಿಲ್ಲ. ಇದು ಹೆಚ್ಚು ದುಬಾರಿಯಾಗಿರುವುದರಿಂದ ದುಷ್ಕರ್ಮಿಗಳು ಸಮುದ್ರ ತೀರದಲ್ಲಿ ಇವುಗಳನ್ನು ಸಾಗಿಸುವುದಿಲ್ಲ. ಆದರೂ ನಾವು ಜಾಗೃತರಾಗಿದ್ದು, ಕಾರ್ಯ ನಿರ್ವಹಿಸುತ್ತಿದ್ದೇವೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮಾದಕ ದ್ರವ್ಯ ಎಂಬುದು ಸಾಮಾಜಿಕ ಪಿಡುಗು ಮಾತ್ರವಲ್ಲದೆ ದೇಶದ ಭದ್ರತೆಗೆ ದೊಡ್ಡ ಮಾರಕವಾಗಿದೆ. ಹಾಗಾಗಿ ಇದರ ವಿರುದ್ಧ ಎಲ್ಲರೂ ಒಗ್ಗೂಡಿ ಕೆಲಸ ಮಾಡಬೇಕಾಗಿದೆ. ಬೀಚ್‌ಗಳಲ್ಲಿ ಗಾಂಜಾ ಸೇವನೆ ಮತ್ತು ಗಾಂಜಾ ಮಾರಾಟಕ್ಕೆ ಸಂಬಂಧಿಸಿದಂತೆ ಹಲವು ಪ್ರಕರಣಗಳನ್ನು ದಾಖಲಿಸಿ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ” ಎಂದು ಹೇಳಿದರು.

500 ಸಿಟಿಟಿವಿ ಅಳವಡಿಕೆ

“ಭದ್ರತೆಯ ದೃಷ್ಠಿಯಿಂದ ಸಾರ್ವಜನಿಕರ ಸಹಭಾಗಿತ್ವದಲ್ಲಿ ಅಭಿಯಾನದ ಮೂಲಕ ಕಾರವಾರದಿಂದ ಮಂಗಳೂರುವರೆಗಿನ ಕರಾವಳಿ ತೀರದಲ್ಲಿ 500ಕ್ಕೂ ಅಧಿಕ ಕಡೆಗಳಲ್ಲಿ ಸಿಸಿಟಿವಿಯನ್ನು ಆಳವಡಿಸಲಾಗಿದೆ. ಖಾಸಗಿ ವ್ಯಕ್ತಿಗಳು ನಮ್ಮ ಮನವಿಗೆ ಸ್ಪಂದಿಸಿದ್ದು, ಸಮುದ್ರದ ದಿಕ್ಕಿನ ಕಡೆಗೂ ತಮ್ಮ ಮನೆ, ಕಟ್ಟಡಗಳಲ್ಲಿ ಸಿಟಿಟಿವಿ ಅಳವಡಿಸಿಕೊಂಡಿದ್ದಾರೆ” ಎಂದು ಎಸ್‌ಪಿ ಅಬ್ದುಲ್ ಅಹದ್ ತಿಳಿಸಿದರು.

“ಕರಾವಳಿ ಕಾವಲು ಪೊಲೀಸ್ ಸಮುದ್ರದಲ್ಲಿ 12 ನಾಟಿಕಲ್ ಮೈಲ್(20 ಕಿಮೀ) ಹಾಗೂ ನೆಲದಲ್ಲಿ 500 ಮೀಟರ್ ಸಿಆರ್‌ಝಡ್ ಪ್ರದೇಶದಲ್ಲಿ ಕಾರ್ಯ‌ ನಿರ್ವಹಿಸುತ್ತದೆ. ಭದ್ರತೆ ದೃಷ್ಠಿಯಿಂದ ರೆಸಾರ್ಟ್‌ಗಳಲ್ಲಿ ತಂಗಿರುವ ವಿದೇಶಿಯವರ ಬಗ್ಗೆ ಮಾಹಿತಿ ಸಂಗ್ರಹಿಸುವ ಕಾರ್ಯ ಮಾಡಲಾಗುತ್ತದೆ. ಅದೇ ರೀತಿ ಬಂದರುಗಳಲ್ಲಿಯೂ ತಪಾಸಣೆ ಮಾಡಲಾಗುತ್ತದೆ. ದೇಶದ ಭದ್ರತೆ ವಿಚಾರದಲ್ಲಿ ಎಲ್ಲರೂ ನಮಗೆ ಉತ್ತಮ ಸಹಕಾರ ನೀಡುತ್ತಾರೆ” ಎಂದರು.

“ಇಲಾಖೆಯಲ್ಲಿ ಡ್ರೋನ್ ಹಾಗೂ ಬೋಟುಗಳಿವೆ. ಬೇಕಾದ ಎಲ್ಲ ರೀತಿಯ ಸೌಲಭ್ಯಗಳನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಒದಗಿಸುತ್ತಿವೆ. ಮಳೆಗಾಲದಲ್ಲಿ ಸಮುದ್ರ ಪ್ರಕ್ಷುಬ್ಧವಾಗಿದ್ದಾಗ ದ್ವೀಪಗಳಲ್ಲಿನ ಚಟುವಟಿಕೆಗಳನ್ನು ವೀಕ್ಷಿಸಲು ಡ್ರೋನ್‌ಗಳನ್ನು ಬಳಸಿಕೊಳ್ಳುತ್ತೇವೆ. ಇಲಾಖೆಗೆ ಇನ್ನು ಹೆಚ್ಚಿನ ಡ್ರೋನ್ ಬರುವ ಸಾಧ್ಯತೆ ಇದೆ. ಸಾಗರ ರಕ್ಷಕ ದಳದಲ್ಲಿ 1200ಕ್ಕೂ ಅಧಿಕ ಮಂದಿ ಕಾರ್ಯ ನಿರ್ವಹಿಸುತ್ತಿದ್ದಾರೆ” ಎಂದು ಹೇಳಿದರು.

ಸೀ(ಸಮುದ್ರ) ಅಂಬ್ಯುಲೆನ್ಸ್ ಅಗತ್ಯ

“ಕರ್ನಾಟಕ ಕರಾವಳಿಗೆ ಸೀ ಅಂಬ್ಯುಲೆನ್ಸ್‌ನ ಅಗತ್ಯ ಬಹುತೇಕವಾಗಿದ್ದು, ಇದನ್ನು ಒದಗಿಸುವ ಬಗ್ಗೆ ಸರ್ಕಾರದ ಮಟ್ಟದಲ್ಲಿ ಚರ್ಚೆಗಳು ನಡೆಯುತ್ತಿವೆ. ಇಲಾಖೆಗೆ ಸಂಬಂಧಿಸಿದಂತೆ ಕೋಡಿಕನ್ಯಾನದಲ್ಲಿರುವ 25 ಎಕರೆ ಜಾಗದಲ್ಲಿ ಕೋಸ್ಟಲ್ ಸೆಕ್ಯೂರಿಟಿ ತರಬೇತಿ ಕೇಂದ್ರ, ಆಸ್ಪತ್ರೆಗಳನ್ನು ಹಲವು ಕಡೆ ನಿರ್ಮಾಣ ಮಾಡಿ, ಸೋಲಾರ್ ಪ್ಲಾಂಟ್‌ಗಳನ್ನು ಸ್ಥಾಪಿಸಲು ಚಿಂತನೆಗಳು ನಡೆಯುತ್ತಿದೆ. ಈ ಕಾರ್ಯ ಹಂತ ಹಂತವಾಗಿ ನಡೆಯಲಿದೆ” ಎಂದು ಎಸ್‌ಪಿ ಮಾಹಿತಿ ನೀಡಿದರು.

“ಮಳೆಗಾಲದಲ್ಲಿ ಕೆಲವೊಂದು ರಕ್ಷಣಾ ಕಾರ್ಯಾಚರಣೆ ಸಂದರ್ಭ ಅಲೆಗಳ ಅಬ್ಬರ ಜೋರು ಇರುವಾಗ ನಮ್ಮ ಬೋಟು ಬಳಸಿಕೊಳ್ಳಲು ಸಾಧ್ಯವಾಗುವುದಿಲ್ಲ. ಆಗ ಮೀನುಗಾರರ ಬೋಟುಗಳನ್ನೇ ಬಳಸಿ ಕೊಳ್ಳಬೇಕಾಗುತ್ತದೆ. ಕಳೆದ ಬಾರಿ 13 ರಕ್ಷಣೆ ಕಾರ್ಯಾಚರಣೆಗಳನ್ನು ನಾವು ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಇಲಾಖೆಗೆ ಹೆಚ್ಚು ಸಾಮರ್ಥ್ಯದ ಬೋಟುಗಳು ತಲುಪಿದಲ್ಲಿ ಇಲ್ಲಿನ ಕೆಲವೊಂದು ಸಮಸ್ಯೆಗಳ ಪರಿಹಾರ ಕಾಣುತ್ತದೆ. ಇಲಾಖೆಗೆ ಬಲ ತುಂಬಿಸುವ ಕಾರ್ಯವನ್ನು ಸರ್ಕಾರ ಹಂತ‌ ಹಂತವಾಗಿ ಮಾಡುತ್ತಿದೆ” ಎಂದರು.‌

ಈ ಸುದ್ದಿ ಓದಿದ್ದೀರಾ? ಮೈಸೂರು | ವಾಹನ ತಪಾಸಣೆ ಹೆಸರಲ್ಲಿ ಹಗಲು ದರೋಡೆ; ಸ್ಥಳೀಯರ ಆರೋಪ

“ಸದಾ ಕಾಲ ಸಮುದ್ರದಲ್ಲಿರುವ ಮೀನುಗಾರರಿಂದ ಎಲ್ಲ ರೀತಿಯ ಸಹಕಾರ ನಮಗೆ ಸಿಗುತ್ತಿದೆ. ಇಲ್ಲಿನ ಮೀನುಗಾರರು ಯಾವಾಗಲೂ ತುಂಬಾ ಜಾಗರೂಕತೆಯಿಂದ ಎಚ್ಚರವಾಗಿರುತ್ತಾರೆ. ಯಾವುದೇ ಹೊಸ ಅಥವಾ ಅನುಮಾನಾಸ್ಪದ ಬೋಟುಗಳು ಕಂಡುಬಂದರೆ ಕೂಡಲೇ ನಮಗೆ ಮಾಹಿತಿ ನೀಡುತ್ತಾರೆ. ಮೀನುಗಾರರೇ ನಮ್ಮ ಬಹಳ ದೊಡ್ಡ ಶಕ್ತಿಯಾಗಿದ್ದಾರೆ” ಎಂದು ಎಸ್‌ಪಿ ಅಬ್ದುಲ್ ಅಹದ್ ತಿಳಿಸಿದರು.

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು, ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...