ಕೊಪ್ಪಳ | ವಿವಿಧ ಚೆಕ್‌ಪೋಸ್ಟ್‌ಗಳಿಗೆ ಜಿಲ್ಲಾ ಪಂಚಾಯತ್ ಸಿಇಓ ಭೇಟಿ; ತಪಾಸಣೆ

Date:

  • ಸಿಬ್ಬಂದಿಗಳಿಗೆ ನೀಡಲಾದ ಮೂಲಭೂತ ಸೌಕರ್ಯಗಳ ಪರಿಶೀಲನೆ
  • ಅಧಿಕಾರಿಗಳ ಹಾಗೂ ಸಿಬ್ಬಂದಿಗಳ ಕಾರ್ಯವೈಖರಿ ಬಗ್ಗೆ ಗಮನ

ವಿಧಾನಸಭೆ ಸಾರ್ವತ್ರಿಕ ಚುನಾವಣೆ ಘೋಷಣೆಯಾದ ಹಿನ್ನೆಲೆ, ರಾಜ್ಯದಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾಗಿದೆ. ಎಲ್ಲೆಡೆ ಹಲವಾರು ಚೆಕ್‌ಪೋಸ್ಟ್‌ಗಳನ್ನು ತೆರೆಯಲಾಗಿದ್ದು, ಚುನಾವಣಾ ಅಕ್ರಮಗಳು ನಡೆಯದಂತೆ ಎಚ್ಚರಿಕೆ ವಹಿಸಲಾಗಿದೆ. ಕೊಪ್ಪಳ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ರತ್ನಂ ಪಾಡೆಯ ಜಿಲ್ಲೆಯ ವಿವಿಧ ಚೆಕ್‌ಪೋಸ್ಟಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕೊಪ್ಪಳ ತಾಲೂಕಿನ ಮುನಿರಾಬಾದ್, ಕುಕನೂರ ತಾಲೂಕಿನ ಬನ್ನಿಕೊಪ್ಪ ಚೆಕ್‌ಪೋಸ್ಟ್‌ಗಳಿಗೆ ಭೇಟಿ ನೀಡಿ, ಚೆಕ್‌ಪೋಸ್ಟಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿಗಳೊಂದಿಗೆ ಚರ್ಚಿಸಿದ್ದಾರೆ. ಅವರಿಗೆ ನೀಡಲಾದ ಮೂಲಭೂತ ಸೌಕರ್ಯಗಳ ಕುರಿತು ವಿಚಾರಿಸಿದ್ದು, ಕಾರ್ಯವೈಖರಿಯ ಬಗ್ಗೆ ಪರಿಶೀಲಿಸಿದರು.

ಗಂಗಾವತಿ ತಾಲೂಕಿನ ಜಂಗಮರ್ ಕಲ್ಗುಡಿ ಗ್ರಾಮದ ಚೆಕ್‌ಪೋಸ್ಟ್‌ ಗೆ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಮಹಾಂತಗೌಡ ಪಾಟೀಲ್ ಭೇಟಿ ನೀಡಿ, ವಾಹನಗಳ ತಪಾಸಣೆ ನಡೆಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...