ಚೈತ್ರಾ ವಂಚನೆ ಪ್ರಕರಣ | ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಲು ಮುಂದಾದ ಸಿಸಿಬಿ

Date:

ವಿಧಾನಸಭಾ ಚುನಾವಣಾ ಸಮಯದಲ್ಲಿ ಉದ್ಯಮಿಯೊಬ್ಬರಿಗೆ ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ನಂಬಿಸಿ ಐದು ಕೋಟಿ ರೂಪಾಯಿ ವಂಚನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಂಧನಕ್ಕೊಳಗಾಗಿರುವ ಆರೋಪಿ ಚೈತ್ರಾ ಕುಂದಾಪುರ ಮತ್ತವರ ಗ್ಯಾಂಗ್‌ನ ವಿಚಾರಣೆಯನ್ನು ಸಿಸಿಬಿ ಪೊಲೀಸರು ಪೂರ್ಣಗೊಳಿಸಿ, ಇದೀಗ ನ್ಯಾಯಾಲಯಕ್ಕೆ ಜಾರ್ಜ್‌ಶೀಟ್‌ ಸಲ್ಲಿಸಲು ಸಿದ್ಧತೆ ನಡೆಸಿದ್ದಾರೆ.

ಬಂಧನಕ್ಕೊಳಗಾಗಿರುವ ಪ್ರಮುಖ ಆರೋಪಿ ಚೈತ್ರಾ, ಶ್ರೀಕಾಂತ್, ಗಗನ್ ಕಡೂರ್, ಹಾಲಶ್ರೀ, ಧನರಾಜ್ ಸೇರಿದಂತೆ 7 ಆರೋಪಿಗಳ ವಿಚಾರಣೆಯನ್ನು ಸಿಸಿಬಿ ಪೊಲೀಸರು ಪೂರ್ಣಗೊಳಿಸಿದ್ದಾರೆ. ಸದ್ಯ ಇವರ ವಿರುದ್ಧ ದೋಷಾರೋಪ ಪಟ್ಟಿಯನ್ನು ಮುಂದಿನ ವಾರ ನ್ಯಾಯಾಲಯಕ್ಕೆ ಸಲ್ಲಿಸಲಿದೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಿಸಿಬಿ ಪೊಲೀಸರು 68 ಸಾಕ್ಷ್ಯಗಳನ್ನು ಕಲೆ ಹಾಕಿದ್ದಾರೆ. ಬರೋಬ್ಬರಿ ₹4 ಕೋಟಿ 11 ಲಕ್ಷ ಹಣವನ್ನು ರಿಕವರಿ ಮಾಡಿದ್ದಾರೆ. ಅಲ್ಲದೇ, ಆರೋಪಿಗಳ ವಂಚನೆ ಕುರಿತಾಗಿ ಪ್ರಾಥಮಿಕ ಸಾಕ್ಷ್ಯ, ಡಿಜಿಟಲ್ ಸಾಕ್ಷ್ಯ, ಸಾಂದರ್ಭಿಕ ಸಾಕ್ಷ್ಯ ಕಲೆಹಾಕಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಉದ್ದೇಶಪೂರ್ವಕವಾಗಿ ವ್ಯಕ್ತಿಯ ಮೇಲೆ ಸ್ಕಾರ್ಪಿಯೊ ಹತ್ತಿಸಿ ಹತ್ಯೆ: ಏನಿದು ಘಟನೆ?

ದೂರುದಾರ ಗೋವಿಂದ ಬಾಬು ಪೂಜಾರಿ ಬಳಿ ಇದ್ದ ಎಲ್ಲ ವಿಡಿಯೋ, ಆಡಿಯೋ ಹಾಗೂ ಇದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಸಿಸಿಬಿ ಪೊಲೀಸರು ಪಡೆದಿದ್ದಾರೆ. ವಂಚನೆಗೆ ಸಂಬಂಧಿಸಿದಂತೆ ದೂರುದಾರರಿಂದಲೇ ಬರೋಬ್ಬರೀ 10 ವಿಡಿಯೊಗಳನ್ನು ಪಡೆಯಲಾಗಿದೆ.

ಅಲ್ಲದೇ, ಆರೋಪಿಗಳ ಮೊಬೈಲ್ ಡೇಟಾ ರಿಟ್ರೀವ್ ಮಾಡಿ, ಮೊಬೈಲ್ ಚಾಟ್, ಕರೆಗಳ ಮೂಲಕ ಮಾಹಿತಿ ಪಡೆಯಲಾಗಿದೆ. ಈ ವರದಿಯನ್ನು ಕೂಡ ಚಾರ್ಜ್‌ಶೀಟ್​ನಲ್ಲಿ‌ ಸಿಸಿಬಿ ಪೊಲೀಸರು ಉಲ್ಲೇಖಿಸಿದ್ದಾರೆ.

ಸದ್ಯ ಆರೋಪಿಗಳು ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...