ಚೈತ್ರಾ ಕುಂದಾಪುರರಂತಹ ಜನರ ಕೆಲಸ ಕೇವಲ ದುಡ್ಡು ಮಾಡೋದು: ಅರವಿಂದ ಬೆಲ್ಲದ

Date:

  • ಚೈತ್ರಾ ಕುಂದಾಪುರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಬೇಕು
  • ಬಿಜೆಪಿ ಸಿದ್ಧಾಂತದ ಪರ ಮಾತನಾಡಿದವರೆಲ್ಲ ಬಿಜೆಪಿಗರಾಗಲ್ಲ

ಚೈತ್ರಾ ಕುಂದಾಪುರ ಅಂತಹ ಜನರು ಎಲ್ಲ ಪಕ್ಷದಲ್ಲೂ ಇರುತ್ತಾರೆ. ದುಡ್ಡು ಮಾಡೋದು, ಜನರಿಗೆ ಮೋಸ ಮಾಡೋದು ಅವರ ಕೆಲಸ. ಇದು ಮೊದಲನೇ ಘಟನೆ ಅಲ್ಲ. ಮೋಸ ಹೋಗುವವರು ಇರುವವರೆಗೂ ಇಂತವರು ಇದ್ದೇ ಇರುತ್ತಾರೆ. ಈ ಬಗ್ಗೆ ನಮ್ಮ ಪಕ್ಷ ಮೊದಲೇ ತಿಳಿಸಿತ್ತು ಎಂದು ಬಿಜೆಪಿ ಶಾಸಕ ಅರವಿಂದ ಬೆಲ್ಲದ ಹೇಳಿದರು.

ಹುಬ್ಬಳ್ಳಿ ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, “ಎಲ್ಲೆಲ್ಲೋ ದುಡ್ಡು ಮಾಡಿದವರು, ಹೇಗೆ ರಾಜಕೀಯ ಮಾಡಬೇಕು ಅಂತ ಗೊತ್ತಿಲ್ಲದವರು ಈ ರೀತಿ ಮೋಸ ಹೋಗುತ್ತಾರೆ. ಇಂತಹ ಡಮ್ಮಿ ವ್ಯಕ್ತಿಗಳ ಜೊತೆಗೆ ಮೋಸ ಹೋಗತ್ತಾರೆ” ಎಂದರು.

“ಬಿಜೆಪಿ ಪಕ್ಷದ ಸಿದ್ಧಾಂತದ ಬಗ್ಗೆ ಮಾತನಾಡಿದವರೆಲ್ಲ ಬಿಜೆಪಿಗರಾಗಲ್ಲ. ಚೈತ್ರಾ ಕುಂದಾಪುರ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಬೇಕು. ನಮ್ಮಲ್ಲಿ ಟಿಕೆಟ್ ಪಡೆಯಲು ನೀತಿ ನಿಯಮಗಳು ಇವೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ‘ಈ ದಿನ’ ಸಂಪಾದಕೀಯ | ನಿದ್ದೆಯಿಂದ ಎದ್ದಿರುವ ನ್ಯೂಸ್ ಚಾನೆಲ್ ಒಕ್ಕೂಟ ಮರ್ಯಾದೆ ಉಳಿಸಿಕೊಳ್ಳಲಿ

“ಯಾವ ರಾಜಕೀಯ ಪಕ್ಷಗಳು ಇಂತಹ ಟೋಪಿ ಹಾಕುವವರನ್ನು ಬೆಳೆಸುವುದಿಲ್ಲ. ಟಿಕೆಟ್ ಆಕಾಂಕ್ಷಿಗಳ ಅಡ್ವಾಂಟೆಜ್ ತೆಗೆದುಕೊಳ್ಳುವ ಜನ ಇವರು” ಎಂದು ಚೈತ್ರಾ ಕುಂದಾಪುರ ವಿರುದ್ಧ ವಾಗ್ದಾಳಿ ನಡೆಸಿದರು.

ಜಗದೀಶ್‌ ಶೆಟ್ಟರ್‌ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಬೆಲ್ಲದ, “ಜಗದೀಶ್‌ ಶೆಟ್ಟರ್‌ ಅವರ ಹೇಳಿಕೆಗಳನ್ನು ಗಮನಿಸುತ್ತಿದ್ದರೆ ಅವರು ಇನ್ನೂ ನಮ್ಮ ಪಕ್ಷದ ಬಗ್ಗೆಯೇ ಚಿಂತೆ ಮಾಡುತ್ತಿದಾರೆ ಅನ್ನಿಸುತ್ತಿದೆ. ಅವರು ಮನಃಪೂರ್ವಕವಾಗಿ ಇನ್ನೂ ಕಾಂಗ್ರೆಸ್‌ ಸೇರಿಲ್ಲ ಅನ್ನಿಸುತ್ತೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...