ಚಳ್ಳಕೆರೆ | ಕೆಲವೇ ಕೆಲವು ಶ್ರೀಮಂತರ ಕೈಯಲ್ಲಿ ನಗರಸಭೆ ಮಳಿಗೆಗಳು; ಕರವೇ ಮುರಳಿ ಕಿಡಿ

Date:

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ನಗರದಲ್ಲಿರುವ ನಗರಸಭೆ ಮಳಿಗೆಗಳು ಕೆಲವೇ ಕೆಲವು ಶ್ರೀಮಂತರ ಕೈವಶದಲ್ಲಿದ್ದು, ಅವರು ನಗರಸಭೆಯ ಆದಾಯಕ್ಕೆ ಮಾರಕವಾಗಿದ್ದಾರೆ ಎಂದು ಚಳ್ಳಕೆರೆ ನಗರದ ಕನ್ನಡ ರಕ್ಷಣಾ ವೇದಿಕೆಯ ಸಂಘಟನಾ ಕಾರ್ಯದರ್ಶಿ ಮುರಳಿ ಕಿಡಿಕಾರಿದ್ದಾರೆ.

ನಗರದಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿ, “ನಗರಸಭೆಯ ವಾಣಿಜ್ಯ ಮಳಿಗೆಗಳಿಂದ ಸರಿಯಾದ ಬಾಡಿಗೆ ಸಿಕ್ಕರೆ, ನಗರದ ಅಭಿವೃದ್ಧಿಗೆ ವಿನಿಯೋಗಿಸಬಹುದು. ಆದರೆ ಅಲ್ಲಿರುವ ಬಾಡಿಗೆದಾರರು ಅನೇಕ ವರ್ಷಗಳಿಂದ ತಮ್ಮ ಆಸ್ತಿಗಳಂತೆ ಆದಾಯವನ್ನು ಅನುಭವಿಸುತ್ತಿದ್ದಾರೆ” ಎಂದರು.

“ಲಕ್ಷಾಂತರ ರೂಪಾಯಿ ಬಾಡಿಗೆ ಬರುವ ಜಾಗದಲ್ಲಿ, ಕೇವಲ ₹500, ₹1000ಕ್ಕೆ ಬಾಡಿಗೆಗೆ ಪಡೆದು, ಅದನ್ನೂ ಸರಿಯಾಗಿ ನಗರಸಭೆಗೆ ಪಾವತಿಸದೆ, ಲಕ್ಷಾಂತರ ರೂಪಾಯಿಗಳನ್ನು ಬಾಕಿ ಉಳಿಸಿಕೊಂಡಿದ್ದಾರೆ. ಇವರುಗಳು ನಗರಸಭೆಗೆ ಮತ್ತು ನಗರದ ಅಭಿವೃದ್ಧಿಗೆ ಮಾರಕವಾಗಿದ್ದಾರೆ” ಎಂದು ಕಿಡಿಕಾರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಇದೇ ವಿಷಯ ಖಂಡಿಸಿ ಹಲವಾರು ಸಂಘ-ಸಂಸ್ಥೆಗಳು, ಸಾಮಾಜಿಕ ಕಳಕಳಿಯ ಮುಖಂಡರು, ಬಹುತೇಕ ವರ್ಷಗಳಿಂದ ಹಲವು ರೀತಿಯ ಹೋರಾಟ ಮಾಡಿಕೊಂಡು ಬರುತ್ತಿದ್ದರೂ ಕೂಡಾ ಈವರೆಗೆ ಯಾವುದೇ ಪ್ರಯೋಜನವಾಗಿಲ್ಲ. ಆದರೆ ಇತ್ತೀಚೆಗೆ  ಹೋರಾಟಗಾರರ ಫಲದಿಂದ ಮತ್ತು ಶಾಸಕರ ಹಿತಾಸಕ್ತಿಯಿಂದ, ಉತ್ತಮ ನೌಕರರ ಸಹಕಾರದಿಂದ, ಚಳ್ಳಕೆರೆ ನಗರದ ಅಭಿವೃದ್ಧಿ ದೃಷ್ಟಿಯಿಂದ ವ್ಯಾಪಾರಸ್ಥರನ್ನು ಖಾಲಿ ಮಾಡಿಸುವ ಒಂದು ದಿಟ್ಟ ಹೆಜ್ಜೆಯನ್ನು ಇಟ್ಟಿದ್ದಾರೆ. ಶಾಸಕರ ಹಾಗೂ ನಗರಸಭೆಯ ಅಧಿಕಾರಿಗಳ ದಿಟ್ಟ ಕ್ರಮ ಶ್ಲಾಘನೀಯ” ಎಂದು ಅಭಿನಂದಿಸಿದರು.

ಈ ಸುದ್ದಿ ಓದಿದ್ದೀರ? ಶಿವಮೊಗ್ಗ | ಜ.21ರಂದು ‘ಗಾಂಧಿ ಭಾರತ’ ಸಮಾವೇಶ: ಸಚಿವ ಮಧು ಬಂಗಾರಪ್ಪ

ಗೌರವಾಧ್ಯಕ್ಷ ಬೋಜರಾಜು ಮಾತನಾಡಿ, “ಬಾಡಿಗೆದಾರರ ವಿರುದ್ಧ ನಗರದ ನಾಗರಿಕರು, ಸಂಘ ಸಂಸ್ಥೆಯವರು, ಸಾಮಾಜಿಕ ಕಳಕಳಿಯುಳ್ಳ ಹೋರಾಟಗಾರರು, ನಗರ ಸಭೆ ಮತ್ತು ಶಾಸಕರ ಬೆಂಬಲಕ್ಕೆ ನಿಂತುಕೊಳ್ಳುವ ಮೂಲಕ ನೈತಿಕ ಸ್ಥೈರ್ಯ ತುಂಬಬೇಕು. ಇಲ್ಲಿರುವ ಬಾಡಿಗೆದಾರರು ಮಳಿಗೆಗಳನ್ನು ಖಾಲಿ ಮಾಡದಿದ್ದರೆ, ಇನ್ನೂ ಹೆಚ್ಚಿನ ಹೋರಾಟವನ್ನು ಮುಂದುವರೆಸುವ ಮೂಲಕ ಜಿಲ್ಲಾಧಿಕಾರಿ, ಸಂಬಂಧಪಟ್ಟ ಮಂತ್ರಿಗಳು ಮತ್ತು ಸರ್ಕಾರದ ಗಮನಸೆಳೆಯಬೇಕು” ಎಂದು ಸಂಘ-ಸಂಸ್ಥೆಗಳಿಗೆ ಮನವಿ ಮಾಡಿದರು.

“ಬಾಡಿಗೆದಾರರು ಕಾನೂನಾತ್ಮಕವಾಗಿ ಹೋರಾಟ ಮಾಡಲಿ, ಅದರಲ್ಲಿ ತಪ್ಪೇನಿಲ್ಲ. ಅದನ್ನು ಬಿಟ್ಟು ರಾಜಕೀಯವಾಗಿ ಮತ್ತು ಆಡಳಿತಾತ್ಮಕವಾಗಿ ಧಮ್ಕಿ ಹಾಕುವುದು ಸರಿಯಲ್ಲ. ಹಾಲಿ ಇರುವ ನಗರಸಭೆಯ ಆಸ್ತಿಗಳನ್ನು ಖಾಲಿ ಮಾಡಿಸಿ ಉತ್ತಮ ಗುಣಮಟ್ಟದ ವಾಣಿಜ್ಯ ಮಳಿಗೆಗಳನ್ನು ಪುನರ್ ನಿರ್ಮಾಣ ಮಾಡಿ ಅರ್ಹರಿಗೆ, ಬಡವರಿಗೆ, ನಿರುದ್ಯೋಗಿ ವಿದ್ಯಾವಂತರಿಗೆ ಬಾಡಿಗೆಗೆ ಕೊಟ್ಟರೆ ಸಾಮಾಜಿಕವಾಗಿ ಉತ್ತಮ ಬೆಳವಣಿಗೆಯಾಗಲಿದೆ” ಎಂದು ಅಭಿಪ್ರಾಯಪಟ್ಟರು.

ಕರವೇ ತಾಲೂಕಧ್ಯಕ್ಷ ಪಿ ಮಂಜುನಾಥ್, ಪ್ರಧಾನ ಕಾರ್ಯದರ್ಶಿ ಮರಿಕುಂಟೆ ಚಂದ್ರು, ಯುವಘಟಕದ ಅಧ್ಯಕ್ಷ ರವಿ, ಕಾರ್ಮಿಕ ಘಟಕ ಅಧ್ಯಕ್ಷರು ಮಂಜುನಾಥ್, ಪದಾಧಿಕಾರಿಗಳಾದ ರಾಜು ಹಾಗೂ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...