ಚಾಮರಾಜನಗರ | ಬಾಂಬ್ ಬೆದರಿಕೆ : ಇ – ಮೇಲ್ ಸಂದೇಶ; ಕೆಲಕಾಲ ಆತಂಕ, ತಪಾಷಣೆ

Date:

ರಾಜ್ಯದ ವಿವಿಧೆಡೆ ‘ ಬಾಂಬ್‌ ಇಡಲಾಗಿದೆ ’ ಎಂದು ಸರ್ಕಾರಿ ಕಚೇರಿಗಳಿಗೆ ಬಂದ ‘ಇ–ಮೇಲ್‌’ ಸಂದೇಶ ಆತಂಕಕ್ಕೆ ಎಡೆ ಮಾಡಿತು.ಚಾಮರಾಜನಗರ ಜಿಲ್ಲಾಧಿಕಾರಿ ಕಚೇರಿ, ಮೈಸೂರಿನ ಪೊಲೀಸ್ ಆಯುಕ್ತರ ಕಚೇರಿ,ರಾಯಚೂರು ಜಿಲ್ಲಾಧಿಕಾರಿ ಕಚೇರಿಗಳಿಗೆ ಬೆದರಿಕೆಯ ಇ – ಮೇಲ್ ಸಂದೇಶಗಳು ಬಂದಿವೆ.

ಬಾಂಬ್‌ ನಿಷ್ಕ್ರಿಯ ದಳ ಹಾಗೂ ಶ್ವಾನ ದಳದ ಮೂಲಕ ಕಚೇರಿ, ಪ್ರಮುಖ ಸ್ಥಳಗಳ ತಪಾಸಣೆ ನಡೆಸಿದ ಪೊಲೀಸರು, ಆಯಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇನ್‌ಸ್ಪೆಕ್ಟರ್‌ಗಳ ನೇತೃತ್ವದಲ್ಲಿ ಪರಿಶೀಲನೆ ನಡೆಸಿದ್ದಾರೆ. ಇದೊಂದು ಹುಸಿ ಬೆದರಿಕೆಯಾಗಿದ್ದು ಭಯ ಪಡುವ, ಆತಂಕ ಪಡುವ ಅಗತ್ಯವಿಲ್ಲ ಎಂದು ಮೈಸೂರು ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಹೇಳಿಕೆ ನೀಡಿದ್ದಾರೆ.

ಬೆಳಿಗ್ಗೆ 7 -10 ರ ಸಮಯದಲ್ಲಿ ಅಜಿತ್ ಜಕ್ಕುಮೋಲಾ ಎಂಬ ಖಾತೆಯಿಂದ ಜಿಲ್ಲಾಧಿಕಾರಿ ಕಚೇರಿಯ ಅಧಿಕೃತ ಇ – ಮೇಲ್‌ಗೆ ಸಂದೇಶ ಬಂದಿದೆ. ಜಿಲ್ಲಾಧಿಕಾರಿ ಶಿಲ್ಪಾನಾಗ್ ಹಾಗೂ ಪೊಲೀಸ್ ಅಧೀಕ್ಷಕರಾದ ಬಿ.ಟಿ. ಕವಿತಾ ಕಚೇರಿಯ ಸಿಬ್ಬಂದಿಗಳನ್ನು ಹೊರ ಕಳುಹಿಸಿದ್ದಾರೆ. ಬಳಿಕ ಬಾಂಬ್ ನಿಷ್ಕ್ರಿಯ ದಳ ಹಾಗೂ ಶ್ವಾನದಳ ಜಿಲ್ಲಾಡಳಿತ ಭವನವನ್ನು ಪೂರ್ತಿ ತಪಾಸಣೆ ನಡೆಸಿದರು. ಆದರೆ, ಬಾಂಬ್ ಪತ್ತೆಯಾಗಲಿಲ್ಲ. ‘ ಮೇಲ್ನೋಟಕ್ಕೆ ಹುಸಿ ಬಾಂಬ್ ಬೆದರಿಕೆಯಂತೆ ಕಂಡುಬಂದಿದ್ದು ಮುಂಜಾಗ್ರತಾ ಕ್ರಮವಾಗಿ ಭವನಕ್ಕೆ ಭದ್ರತೆ ಹೆಚ್ಚಿಸಲಾಗಿದೆ ’ ಎಂದು ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಮೈಸೂರು | ವಖ್ಫ್ ತಿದ್ದುಪಡಿ ಕಾಯ್ದೆ ವಿರೋಧಿಸಿ ಬೃಹತ್ ಪ್ರತಿಭಟನಾ ಸಮಾವೇಶ : ಅಯೂಬ್ ಖಾನ್

ಜಿಲ್ಲಾಡಳಿತ ನೀಡಿರುವ ದೂರಿನ ಅನುಸಾರ ಸಿಇಎನ್‌ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸಂದೇಶ ರವಾನಿಸಿದವರ ಪತ್ತೆಗೆ ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...