ಚಾಮರಾಜನಗರ | ಎಸ್ಎಸ್ಎಲ್‌ಸಿ, ಪಿಯುಸಿ ಪರೀಕ್ಷೆಗಳ ಸಮರ್ಪಕ ನಿರ್ವಹಣೆಗೆ ಸಿಇಓ ಸೂಚನೆ

Date:

ಚಾಮರಾಜನಗರ ಜಿಲ್ಲೆಯಲ್ಲಿ ಮಾರ್ಚ್ ತಿಂಗಳಲ್ಲಿ ನಡೆಯಲಿರುವ 2024-25ನೇ ಸಾಲಿನ ಎಸ್ಎಸ್ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ಸಕಲ ಸಿದ್ದತೆಗಳೊಂದಿಗೆ ಸಮರ್ಪಕವಾಗಿ ನಿರ್ವಹಿಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಸೂಚನೆ ನೀಡಿದರು.

ನಗರದ ಜಿಲ್ಲಾಡಳಿತದ ಸಭಾಂಗಣದಲ್ಲಿಂದು ನಡೆದ ಪ್ರೌಢ ಶಾಲಾ ಮುಖ್ಯ ಶಿಕ್ಷಕರು, ಪಿಯು ಕಾಲೇಜುಗಳ ಪ್ರಾಂಶಪಾಲರು, ಪರೀಕ್ಷಾ ಕಾರ್ಯಕ್ಕೆ ನಿಯೋಜಿತರಾದ ವಿವಿಧ ಇಲಾಖೆಗಳ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

“ಪರೀಕ್ಷೆಗಳಿಗೆ ಈಗಾಗಲೇ ವೇಳಾಪಟ್ಟಿ ಬಿಡುಗಡೆ ಮಾಡಲಾಗಿದೆ. ಪರೀಕ್ಷೆ ಕಾರ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು. ಪರೀಕ್ಷೆ ಸಂಬಂಧ ನೀಡಲಾಗಿರುವ ಸೂಚನೆ, ಮಾರ್ಗದರ್ಶನದ ಪ್ರಕಾರ ಕಟ್ಟುನಿಟ್ಟಾಗಿ ಕೆಲಸ ಮಾಡಬೇಕು ಎಂದರು. ಶಾಲಾ-ಕಾಲೇಜುಗಳಲ್ಲಿ ಉಳಿದಿರುವ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಶ್ರಮವಹಿಸಿ ಅಧ್ಯಯನ ಮಾಡಲು ಉತ್ತೇಜಿಸಬೇಕು. ಜಿಲ್ಲೆಗೆ ಉತ್ತಮ ಫಲಿತಾಂಶ ಹಾಗೂ ಉನ್ನತ ಸ್ಥಾನಕ್ಕೆ ಏರಲು ಪೂರಕವಾಗಿರುವಂತೆ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಬೇಕು. ವಿಶೇಷ ತರಗತಿಗಳ ಮೂಲಕ ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಸಜ್ಜುಗೊಳಿಸಬೇಕು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಪರೀಕ್ಷೆ ದಿನಾಂಕಗಳು ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯಿತಿಯಲ್ಲಿರುವ ಗ್ರಂಥಾಲಯಗಳನ್ನು ಬೆಳಗಿನ ವೇಳೆ ಬೇಗನೆ ತೆರೆಯುವ ಅವಶ್ಯವಿದ್ದಲ್ಲಿ ಸೂಕ್ತ ನಿರ್ದೇಶನ ನೀಡಲಾಗುವುದು. ಪೋಷಕರೊಂದಿಗೆ ಸಂಪರ್ಕದಲ್ಲಿದ್ದು ವಿದ್ಯಾರ್ಥಿಗಳಿಗೆ ಹೆಚ್ಚಿನ ಪ್ರೋತ್ಸಾಹ ನೀಡಬೇಕು” ಎಂದರು.

ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಮಾತನಾಡಿ, “ಎಸ್ಎಸ್ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಜಿಲ್ಲೆ ಗಣನೀಯವಾಗಿ ಸುಧಾರಣೆಯಾಗಬೇಕು. ಎಲ್ಲ ವಿದ್ಯಾರ್ಥಿಗಳು ಮೊದಲ ಪ್ರಯತ್ನದಲ್ಲಿಯೇ ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಲು ಶಿಕ್ಷಕರು ವಿಶೇಷ ಕಾಳಜಿ ತೆಗೆದುಕೊಂಡು ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಅಣಿಗೊಳಿಸಬೇಕು. ಪರೀಕ್ಷೆ ಕಾರ್ಯಗಳಿಗೆ ಈಗಾಗಲೇ ಎಲ್ಲ ಅಗತ್ಯ ತಂಡಗಳನ್ನು ನಿಯೋಜಿಸಲಾಗಿದೆ. ಪಾರದರ್ಶಕವಾಗಿ ಕಾರ್ಯ ನಿರ್ವಹಣೆಯಾಗಲಿದೆ. ಪರೀಕ್ಷಾ ಕೇಂದ್ರಗಳಲ್ಲಿ ಎಲ್ಲ ಮೂಲ ಸೌಕರ್ಯಗಳು ಇರಬೇಕು. ಯಾವುದೇ ಸಮಸ್ಯೆಗಳಿದ್ದರೆ ಕೂಡಲೇ ಗಮನಕ್ಕೆ ತರಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ಮಲೆ ಮಹದೇಶ್ವರ ಬೆಟ್ಟ ಜಾತ್ರಾ ಮಹೋತ್ಸವ; ಸಕಲ ಸಿದ್ಧತೆಗೆ ಡಿಸಿ ಸೂಚನೆ

ಸಭೆಯಲ್ಲಿ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಮಂಜುನಾಥ ಪ್ರಸನ್ನ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ರಾಮಚಂದ್ರ ರಾಜೇ ಅರಸ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಶಿಧರ್, ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆಯ ಪ್ರಾಂಶುಪಾಲ ಕಾಶಿನಾಥ್ ಹಾಗೂ ಇತರರು ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...