ಚಾಮರಾಜನಗರ | ದಲಿತರ ಜಮೀನುಗಳಲ್ಲಿ ರಸ್ತೆ ನಿರ್ಮಾಣ; ಕಾಮಗಾರಿ ಸ್ಥಗಿತಕ್ಕೆ ಛಲವಾದಿ ನಾರಾಯಣಸ್ವಾಮಿ ಸೂಚನೆ

Date:

ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹಿರೀಕಾಟಿ ಗ್ರಾಮಕ್ಕೆ ಭೇಟಿ ನೀಡಿ, ದಲಿತರ ಜಮೀನುಗಳಲ್ಲಿ ರಸ್ತೆ ನಿರ್ಮಾಣ ಮಾಡುತ್ತಿರುವ ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಾಜಿ ಶಾಸಕ ಸಿ ಎಸ್ ನಿರಂಜನ್ ಕುಮಾರ್ ಮತ್ತು ಮಾಜಿ ಸಚಿವ ಎನ್ ಮಹೇಶ್ ಜತೆಗೆ ಸ್ಥಳಕ್ಕೆ ಭೇಟಿ ನೀಡಿದ ಅವರು, ಸಂತ್ರಸ್ತರು ಹಾಗೂ ಅಧಿಕಾರಿಗಳಿಂದ ಮಾಹಿತಿ ಪಡೆದು ಪರಿಶೀಲನೆ ನಡೆಸಿದರು.

“ಹಲವಾರು ವರ್ಷಗಳಿಂದ ಕೃಷಿ ಚಟುವಟಿಕೆ ನಡೆಸಿಕೊಂಡು ಜೀವನ ಸಾಗಿಸುತ್ತಿದ್ದ ತಾಲೂಕಿನ ಹಿರೀಕಾಟಿ, ದೊಡ್ಡಹುಂಡಿ ಗ್ರಾಮದ ಬಡ ದಲಿತರ ಜಮೀನಲ್ಲಿ ಬಂಡಿದಾರಿ ನೆಪವೂಡ್ಡಿ ಅಕ್ರಮವಾಗಿ ರಸ್ತೆ ‌ನಿರ್ಮಾಣ ಮಾಡುವ ಮೂಲಕ ಪ್ರಭಾವಿಗಳು ಮಾನಸಿಕವಾಗಿ ಹಿಂಸೆ ನೀಡುತ್ತಿದ್ದು, ತಹಶೀಲ್ದಾರ್ ಹಾಗೂ ಬೇಗೂರು ಪೋಲಿಸರು ಆವರ ಕೈಗೊಂಬೆಗಳಂತೆ ವರ್ತಿಸುತ್ತಿದ್ದಾರೆ” ಎಂದು ಸಂತ್ರಸ್ತರು ದೂರಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಹಶೀಲ್ದಾರ್ ಅವರಿಂದ ಮಾಹಿತಿ ಪಡೆದು, “ಬಂಡಿದಾರಿ ನಿರ್ಮಾಣಕ್ಕೂ ನೀವು ಮಾಡಿರುವ ರಸ್ತೆಗೂ ಸೌಮ್ಯತೆಯಿದೆ. ಎಂಟು ಅಡಿಗಳಷ್ಟು ಇರುವ ದಾರಿಯನ್ನು ಅಧಿಕಾರಿಗಳು 40 ಅಡಿಗಳಷ್ಟು ವಿಸ್ತರಣೆ ಮಾಡಲು ಅಧಿಕಾರ ಕೊಟ್ಟಿದ್ದು ಯಾರು?” ಎಂದು ಛಲವಾದಿ ನಾರಾಯಣಸ್ವಾಮಿ ಪ್ರಶ್ನಿಸಿದ್ದಾರೆ.

“ದಲಿತರನ್ನು ಹೆದರಿಸಿ ರಾತ್ರೋರಾತ್ರಿ ರಸ್ತೆ ನಿರ್ಮಾಣ ಮಾಡುವ ಪ್ರಮೇಯವಾದರು ಏನಿತ್ತು? ನಕಾಶೆಯಲ್ಲಿ ದಾರಿ ಇರುವುದೇ ಖಾತ್ರಿಯಾಗಿದ್ದರೆ, ರೈತರಿಗೆ ನೋಟಿಸ್ ನೀಡದೆ ರಸ್ತೆ ನಿರ್ಮಾಣ ಮಾಡಿದ್ದಾದರೂ ಯಾಕೆ!? ಎಂದು ತಹಶೀಲ್ದಾರ್ ಅವರನ್ನು ತರಾಟೆಗೆ ತೆಗೆದುಕೊಂಡರು.‌

ಈ ಸುದ್ದಿ ಓದಿದ್ದೀರಾ? ಬೀದರ್‌ | ಸಿಎಂ ಸಿದ್ದರಾಮಯ್ಯ ವಿರುದ್ಧ ಷಡ್ಯಂತ್ರ ಆರೋಪ ; ಕಪ್ಪು ಬಟ್ಟೆ ಧರಿಸಿ ಮೌನ ಪ್ರತಿಭಟನೆ

“ನಾವು ರಾಜಕಾರಣಿಗಳು ತಾತ್ಕಾಲಿಕ. ನೀವು ಅಧಿಕಾರಿಗಳು ಶಾಶ್ವತ ಅಧಿಕಾರದಲ್ಲಿರುತ್ತೀರಿ, ಅಂಥದರಲ್ಲಿ ಯಾರನ್ನೋ ಓಲೈಸಲು ಅದಿಕಾರಿಗಳು ಗುತ್ತಿಗೆದಾರಂತೆ ವರ್ತಿಸುವುದು ಸರಿಯಲ್ಲ” ಎಂದು ತಾಕೀತು ಮಾಡಿದರು.

“ಈಗಲೇ ರಸ್ತೆ ನಿರ್ಮಾಣ ಕಾಮಗಾರಿಯನ್ನು ಸ್ಥಗಿತಗೊಳಿಸಬೇಕು, ದಲಿತರ ಮೇಲೆ ಅಧಿಕಾರ ದುರ್ಬಳಕೆ ಮಾಡಿಕೊಂಡು ದರ್ಪ ತೋರಿಸಲು ಮುಂದಾದರೆ ತುಂಬಾ ತೂಂದರೆ ಎದುರಿಸಬೇಕಾಗುತ್ತದೆ” ಎಂದು ತಹಶೀಲ್ದಾರ್ ಟಿ ರಮೇಶ್ ಬಾಬು, ವೃತ್ತ ನಿರೀಕ್ಷಕ ವನರಾಜ ಹಾಗೂ ಪಿಎಸ್ಐ ಚರಣ್ ಗೌಡ ಅವರಿಗೆ ಎಚ್ಚರಿಕೆ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...