ಚಾಮರಾಜನಗರ | ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಐವರಿಗೆ ಜಿಲ್ಲಾಧಿಕಾರಿ ನೋಟಿಸ್

Date:

ಪುರಸಭೆ ಅಧಕ್ಷ, ಉಪಾಧ್ಯಕ್ಷ ಆಯ್ಕೆ ಚುನಾವಣೆಯಲ್ಲಿ ಪಕ್ಷಾಂತರ ನಿಷೇಧ ಕಾಯ್ದೆ ಉಲ್ಲಂಘಿಸಿ, ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆಂಬ ಆರೋಪದ ಮೇಲೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಐವರಿಗೆ ಚಾಮರಾಜನಗರ ಜಿಲ್ಲಾಧಿಕಾರಿ ನೋಟಿಸ್‌ ನೀಡಿದ್ದಾರೆ.

ಗುಂಡ್ಲುಪೇಟೆ ಪುರಸಭೆ ಅಧಕ್ಷ, ಉಪಾಧ್ಯಕ್ಷ ಆಯ್ಕೆ ಚುನಾವಣೆಯಲ್ಲಿ ಬಿಜೆಪಿ ಚಿಹ್ನೆಯಿಂದ ಗೆದ್ದು ಪುರಸಭೆ ಸದಸ್ಯರಾದ ಕಿರಣ್, ಹೀನಾ ಕೌಶರ್, ರಮೇಶ್, ವೀಣಾ ಮಂಜುನಾಥ್, ರಾಣಿ ಲಕ್ಷ್ಮೀದೇವಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ್ದಾರೆಂದು ಆರೋಪಿಸಿ ಬಿಜೆಪಿ ಸದಸ್ಯರಾದ ಪಿ ಗಿರೀಶ್ ಹಾಗೂ ಕುಮಾರ್ ಎಸ್ ಪುರಸಭೆ ಮುಖ್ಯಾಧಿಕಾರಿ ಮೂಲಕ ಜಿಲ್ಲಾಧಿಕಾರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ನೋಟೊಸ್‌ ನೀಡಲಾಗಿದೆ.

ಗುಂಡ್ಲುಪೇಟೆ ಪುರಸಭೆಗೆ ಸೆಪ್ಟೆಂಬರ್‌ 4ರಂದು ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ನಡೆದಿದ್ದು, ಪಕ್ಷದ ಸಚೇತಕಾದೇಶ(ವಿಪ್) ಉಲ್ಲಂಘಿಸಿ, ಪಕ್ಷದ ವಿರುದ್ದವಾಗಿ ನಡೆದುಕೊಂಡಿರುವುದು ಕಂಡುಬಂದಿದೆ. ಕರ್ನಾಟಕ ಸ್ಥಳೀಯ ಪ್ರಾಧಿಕಾರಗಳ
(ಪಕ್ಷಾಂತರ ನಿಷೇಧ) ಅಧಿನಿಯಮ 1987ರ 3(1)(ಬಿ) ಅನ್ವಯ ದೂರುದಾರರರು ಪುರಸಭೆ ಸದಸ್ಯತ್ವ ಅನರ್ಹಗೊಳಿಸುವಂತೆ ಕೋರಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸದರಿ ತೀರ್ಮಾನಕ್ಕಾಗಿ ಪ್ರಸ್ತುತ ನೋಟಿಸ್ ನೀಡಲಾಗಿದ್ದು, ಒಂದು ವಾರದೊಳಗೆ ಉತ್ತರಿಸದಿದ್ದರೆ ಅನರ್ಹ ಭೀತಿ ಎದುರಿಸಬೇಕಾಗುತ್ತದೆ” ಎಂದು ಎಚ್ಚರಿಸಲಾಗಿದೆ.

“ಪುರಸಭೆ ಉಪಾಧ್ಯಕ್ಷೆ ಸೇರಿದಂತೆ ಐವರಿಗೆ ನೋಟಿಸ್ ನೀಡಿದ್ದು, ನೋಟಿಸ್ ತಲುಪಿದ ವಾರದೊಳಗೆ ಲಿಖಿತವಾಗಿ ಸಮಜಾಯಿಷಿ ಸಲ್ಲಿಸಬೇಕು. ಇಲ್ಲವಾದಲ್ಲಿ ಸಮಜಾಯಿಷಿ ಇಲ್ಲವೆಂದು ಪರಿಗಣಿಸಿ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು” ಎಂದು ಜಾರಿ ಮಾಡಿರುವುದಾಗಿ ತಿಳಿದುಬಂದಿದೆ.

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ಮನೆಯ ಸುತ್ತಮುತ್ತ ಸ್ವಚ್ಛವಾಗಿಟ್ಟು, ಡೆಂಘೀ ತಡೆಗಟ್ಟಿ: ಗ್ರಾ ಪಂ ಅಧ್ಯಕ್ಷ ಅರ್ ಡಿ ಉಲ್ಲಾಸ್

ಬಿಜೆಪಿ ಸದಸ್ಯ ಪಿ ಗಿರೀಶ್ ಈ ದಿನ.ಕಾಮ್ ಜೊತೆ ಮಾತನಾಡಿ, “ಮಾರಾಟವಾದ ಪುರಸಭೆ ಸದಸ್ಯರ ವಿರುದ್ದ ಅನರ್ಹ ತೂಗುಗತ್ತಿ ನೇತಾಡುತ್ತಿದೆ. ಜಿಲ್ಲಾಧಿಕಾರಿಗಳ ಮೇಲೆ ನಮಗೆ ಅಪಾರ ಗೌರವ ವಿಶ್ವಾಸವಿದೆ. ಪಕ್ಷಾಂತರ ಮಾಡಿ, ಪಕ್ಷ ವಿರೋಧಿ ಚಟುವಿಟಿಕೆ ಮಾಡಿದವರಿಗೆ ನೋಟಿಸ್ ನೀಡಿದ್ದಾರೆ. ಮುಂದೆ ಅವರನ್ನು ಅನರ್ಹಗೊಳಿಸುವ ನಂಬಿಕೆ ಇದೆ. ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ. ಈ ವಿಚಾರವಾಗಿ 30 ದಿನದಲ್ಲಿ ಅನರ್ಹವಾಗದಿದ್ದರೆ ಹೈಕೋರ್ಟ್ ಮೆಟ್ಟಿಲೇರಲು ಸಿದ್ದರಿದ್ದೇವೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...