ಚಾಮರಾಜನಗರ | ಗೋಪಾಲಸ್ವಾಮಿ ಬೆಟ್ಟದಲ್ಲಿ ಚಿತ್ರೀಕರಣ ನಿಷೇಧ

Date:

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಡ್ರೋಣ್ ಹಾಗೂ ಕ್ಯಾಮೆರಾ ಬಳಿಸಿ ಚಿತ್ರೀಕರಣ ಮಾಡುವುದನ್ನು ನಿಷೇಧಿಸಲಾಗಿದೆ. ಗುಂಡ್ಲುಪೇಟೆ ತಹಶೀಲ್ದಾರ್ ಟಿ ರಮೇಶ್‌ಬಾಬು ಅವರು ನಿಷೇಧ ಆದೇಶ ಹೊರಡಿಸಿದ್ದಾರೆ.

ಬೆಟ್ಟವು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಯಲ್ಲಿದೆ. ಬೆಟ್ಟದಲ್ಲಿರುವ ದೇವಾಲಯಕ್ಕೆ ಹೆಚ್ಚು ಪ್ರವಾಸಿಗರು ಭೇಟಿ ನೀಡುತ್ತಿದ್ದಾರೆ. ಸಂಜೆ ವೇಳೆ, ಕಾಡಾನೆಗಳು ಹೇವಾಲಯದ ಸುತ್ತಮುತ್ತ ಓಡಾಡುತ್ತವೆ. ಪ್ರವಾಸಿಗರು ಅವುಗಳ ಬಳಿ ತೆರಳಿ ಫೋಟೋ ತೆಗೆಯುವುದು, ವಿಡಿಯೋ ಮಾಡುವುದು, ಸೆಲ್ಫಿ ತೆಗೆದುಕೊಳ್ಳುವುದು ಮಾಡುತ್ತಿದ್ದಾರೆ. ಕಾಡಾನೆಗಳು ಜನರ ಮೇಲೆ ದಾಳಿ ಮಾಡಿದರೆ ತೊಂದರೆಯಾಗುತ್ತದೆ. ಹೀಗಾಗಿ, ದೇವಾಲಯ ಮತ್ತು ಬೆಟ್ಟದಲ್ಲಿ ಚಿತ್ರೀಕರಣ ನಿಷೇಧಿಸಲಾಗಿದೆ ಎಂದು ತಹಶೀಲ್ದಾರ್‌ ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ.

ಭಕ್ತರು ಪೂಜನಾ ಸ್ಥಳವೆಂದು ಭಾವಿಸಿದರುವ ಹಿಮವದ್ ಗೋಪಾಲಸ್ವಾಮಿ ಬೆಟ್ಟವು ಪ್ರವಾಸಗರ ಅಚ್ಚುಮೆಚ್ಚಿನ ತಾಣವೂ ಆಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...