ಚಾಮರಾಜನಗರ | ಗೌರಿ – ಗಣೇಶ ಹಬ್ಬದ ಹಿನ್ನಲೆ; ಅಗತ್ಯ ಸೌಲಭ್ಯ ಒದಗಿಸಲು ಜಿಲ್ಲಾಧಿಕಾರಿ ಸೂಚನೆ

Date:

ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗೌರಿ ಗಣೇಶೋತ್ಸವ ಆಚರಣೆ ಸಂಬಂಧ ಅಧಿಕಾರಿಗಳು ಹಾಗೂ ನಗರದ ಶ್ರೀ ವಿದ್ಯಾಗಣಪತಿ ವಿದ್ಯಾಮಂಡಳಿ ಪದಾಧಿಕಾರಿಗಳು, ಮುಖಂಡರೊಂದಿಗೆ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಗೌರಿ – ಗಣೇಶ ಹಬ್ಬದ ಹಿನ್ನಲೆಯಲ್ಲಿ ಅಗತ್ಯ ಸೌಲಭ್ಯ ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಮುಂಬರುವ ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಗಣೇಶ ಪ್ರತಿಷ್ಠಾಪನೆ, ವಿಸರ್ಜನೆ, ಉತ್ಸವದಂತಹ ಕಾರ್ಯಕ್ರಮಗಳಿಗೆ ಅಧಿಕಾರಿಗಳು ಅನುಮತಿ ನೀಡುವ ಜೊತೆಗೆ ಹಬ್ಬದ ಸಂದರ್ಭದಲ್ಲಿ ಸುರಕ್ಷತೆ ಹಾಗೂ ಅಗತ್ಯ ಮೂಲ ಸೌಲಭ್ಯಗಳನ್ನು ಒದಗಿಸಿಕೊಡಬೇಕು. ಗೌರಿ ಗಣೇಶ ಪ್ರತಿಷ್ಠಾಪಿಸುವ ಆಯೋಜಕರಿಗೆ ಅನುಮತಿ ನೀಡುವ ಸಲುವಾಗಿ ಅಧಿಕಾರಿಗಳನ್ನೊಳಗೊಂಡ ಏಕಗವಾಕ್ಷಿ ಸಮಿತಿ ರಚಿಸಲಾಗಿದೆ. ಕಾರ್ಯಕ್ರಮಗಳ ಆಯೋಜಕರು ಆಯಾ ತಾಲೂಕು ವ್ಯಾಪ್ತಿಯ ಸಮಿತಿಯಿಂದ ಕಡ್ಡಾಯವಾಗಿ ಅನುಮತಿ ಪಡೆದುಕೊಳ್ಳಬೇಕು ಎಂದರು.

ಆಯೋಜಕರು ಅರ್ಜಿ ಸಲ್ಲಿಸಿದ ಕೂಡಲೇ ಪರಿಶೀಲಿಸಿ ತ್ವರಿತವಾಗಿ ಅನುಮತಿ ನೀಡಬೇಕು. ಯಾವುದೇ ಕಾರಣಕ್ಕೂ ವಿಳಂಬ ಧೋರಣೆ ಅನುಸರಿಸಬಾರದು. ಇ-ಮೇಲ್ ಮೂಲಕವು ಅರ್ಜಿ ಸಲ್ಲಿಸಿದ್ದಲ್ಲಿ ಪರಿಗಣಿಸಿ ಅನುಮತಿಸಬೇಕು. ಗಣೇಶ ಪ್ರತಿಷ್ಠಾಪನೆ, ವಿಸರ್ಜನೆ ಸ್ಥಳಗಳನ್ನು ಅಧಿಕಾರಿಗಳು ಪರಿಶೀಲಿಸಬೇಕು. ಗಣಪತಿ ವಿಸರ್ಜನೆಗಾಗಿ ನಿಗದಿ ಮಾಡಿರುವ ಸ್ಥಳಗಳಲ್ಲಿ ಅಗತ್ಯ ಸೌಕರ್ಯಗಳನ್ನು ಕಲ್ಪಿಸಬೇಕು. ಗಣಪತಿ ಮೆರವಣಿಗೆ ಮಾರ್ಗಗಳ ಬಗ್ಗೆ ಮುಂಚಿತವಾಗಿಯೇ ಮಾಹಿತಿ ಪಡೆದು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ಹಬ್ಬದ ವೇಳೆ ಕುಡಿಯುವ ನೀರು, ವಿದ್ಯುತ್, ಸ್ವಚ್ಚತೆ, ಸುರಕ್ಷತೆ ಬಗ್ಗೆ ಅಧಿಕಾರಿಗಳು ಹೆಚ್ಚಿನ ನಿಗಾವಹಿಸಬೇಕು ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಹಿಂದಿನ ವರ್ಷದಲ್ಲಿಯೂ ಚಾಮರಾಜನಗರ ಪಟ್ಟಣದಲ್ಲಿ ವಿದ್ಯಾಗಣಪತಿ ಮಂಡಳಿಯವರು ಪ್ರತಿಷ್ಠಾಪಿಸಿದ್ದ ಗಣಪತಿ ಕಾರ್ಯಕ್ರಮ ಹಾಗೂ ಉತ್ಸವ ಯಶಸ್ವಿಯಾಗಿ ನಡೆದಿದೆ. ಈ ಬಾರಿಯೂ ಜಿಲ್ಲಾಡಳಿತ ಪೊಲೀಸ್ ಇಲಾಖೆ ಎಲ್ಲ ಸಹಕಾರ ನೀಡಲಿದೆ. ಗಣಪತಿ ವಿಸರ್ಜನೆಗೆ ದೊಡ್ಡರಸನಕೊಳದಲ್ಲಿ ಅಗತ್ಯ ಸಿದ್ದತೆಗೆ ನಗರಸಭೆ ಅಧಿಕಾರಿಗಳು ಎಲ್ಲ ಕ್ರಮಗಳನ್ನು ಮುಂಚಿತವಾಗಿಯೇ ತೆಗೆದುಕೊಳ್ಳಬೇಕು ಎಂದು ಹೇಳಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ. ಟಿ. ಕವಿತಾ ಮಾತನಾಡಿ ಕಳೆದ ವರ್ಷ ನಗರದ ವಿದ್ಯಾಗಣಪತಿ ಮಂಡಳಿಯವರು ಸಹಕಾರ ನೀಡಿ ಗಣಪತಿ ಉತ್ಸವವನ್ನು ಕೈಗೊಂಡಿದ್ದರು. ಈ ಬಾರಿಯೂ ಗಣಪತಿ ಪ್ರತಿಷ್ಠಾಪನೆ ಮೆರವಣಿಗೆ ಸೇರಿದಂತೆ ಉತ್ಸವಕ್ಕೆ ನಮ್ಮ ಕಡೆಯಿಂದ ಎಲ್ಲ ಸಹಕಾರ ನೀಡಲಿದ್ದೇವೆ. ಪೊಲೀಸ್ ಇಲಾಖೆ ವತಿಯಿಂದ ಕೈಗೊಳ್ಳಬೇಕಿರುವ ಸಿದ್ದತೆಗಳನ್ನು ಮಾಡಲಿದ್ದೇವೆ ಎಂದರು.

ಸಭೆಯಲ್ಲಿ ಹಾಜರಿದ್ದ ಮಂಡಳಿಯ ಪದಾಧಿಕಾರಿಗಳು, ಮುಖಂಡರು ಮಾತನಾಡಿ ಕಳೆದ ಬಾರಿಯೂ ಶಾಂತಿಯುತವಾಗಿ ಗಣೇಶ ಉತ್ಸವ ನಗರದಲ್ಲಿ ಜರುಗಿದೆ. ಜಿಲ್ಲಾಡಳಿತ, ಜಿಲ್ಲಾ ಪೊಲೀಸ್ ಇಲಾಖೆಗೆ ಧನ್ಯವಾದಗಳನ್ನು ಅರ್ಪಿಸುತ್ತೇವೆ. ಈ ಸಲವು ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ ನವರಾತ್ರಿಗೂ ಮೊದಲು ವಿಸರ್ಜನೆ ಕಾರ್ಯವನ್ನು ಹಮ್ಮಿಕೊಳ್ಳಲಿದ್ದೇವೆ. ರಸ್ತೆ ಸೌಕರ್ಯ, ಸ್ವಚ್ಚತೆ, ಬೀದಿ ದೀಪ, ವಿಸರ್ಜನಾ ಸ್ಥಳದಲ್ಲಿ ಅಗತ್ಯ ಸೌಲಭ್ಯಗಳನ್ನು ಒದಗಿಸಿಕೊಡುವಂತೆ ಮನವಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಕೊಡಗು | ಅಂಗನವಾಡಿ ಬಳಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆ

ಹೆಚ್ಚುವರಿ ಜಿಲ್ಲಾಧಿಕಾರಿ ಟಿ. ಜವರೇಗೌಡ, ಡಿವೈಎಸ್‍ಪಿ ಲಕ್ಷ್ಮಯ್ಯ, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ಕಿರಣ್, ಜಿಲ್ಲಾ ನಗರಾಭಿವೃದ್ದಿ ಕೋಶದ ಕಾರ್ಯಪಾಲಕ ಎಂಜಿನಿಯರ್ ಅಲ್ತಾಫ್, ತಹಶೀಲ್ದಾರರಾದ ಬಸವರಾಜು, ತನ್ಮಯ್, ನಗರಸಭಾ ಆಯುಕ್ತ ಎಸ್.ವಿ. ರಾಮದಾಸ್, ರಮೇಶ್, ಇನ್ನಿತರ ಅಧಿಕಾರಿಗಳು, ಗಣಪತಿ ಮಂಡಳಿಯ ಪದಾಧಿಕಾರಿಗಳಾದ ಬಾಲಸುಬ್ರಹ್ಮಣ್ಯ, ಮಹೇಶ್, ಶಿವಣ್ಣ, ಚಂದ್ರು, ಮನೋಜ್ ಪಟೇಲ್, ರಾಘವೇಂದ್ರ, ಬಂಗಾರು, ಶಿವು, ಕಿರಣ್, ಮಾದಣ್ಣ, ಪೃಥ್ವಿರಾಜ್, ನವೀನ್, ಅಶ್ವಿನ್, ಕೂಸಣ್ಣ, ಪ್ರವೀಣ್, ಸೇರಿದಂತೆ ಇನ್ನಿತರರು ಸಭೆಯಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...