ಚಾಮರಾಜನಗರ | ಬಂಡೀಪುರ ಕಾಡಿನಲ್ಲಿ ಗುಂಡಿನ ಚಕಮಕಿ; ಬೇಟೆಗಾರನ ಸಾವು

Date:

ಕಡವೆ ಬೇಟೆಯಾಡಿದ ತಂಡ ಹಾಗೂ ಅರಣ್ಯ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಬೇಟೆಗಾರರ ತಂಡದಲ್ಲಿದ್ದ ಯುವಕನೊಬ್ಬ ಮೃತಪಟ್ಟಿರುವ ಘಟನೆ ಚಾಮರಾಜನಗರ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿಸಂರಕ್ಷಿತ ಪ್ರದೇಶದ ಮದ್ದೂರು ವಲಯದಲ್ಲಿ ನಡೆದಿದೆ.

ಗುಂಡ್ಲುಪೇಟೆ ತಾಲೂಕಿನ ಭೀಮನಬೀಡು ನಿವಾಸಿ ಮನು (27) ಮೃತಪಟ್ಟ ಯುವಕ. ಬಂದೂಕು ಹಾಗೂ ಇತರೆ ಶಸ್ತ್ರಾಸ್ತ್ರ ಹೊಂದಿದ್ದ 10 ಮಂದಿಯ ತಂಡ ಕಡವೆಯನ್ನು ಗುಂಡಿಕ್ಕಿ ಬೇಟೆಯಾಡಿದೆ.

ಕಾರ್ಯಾಚರಣೆ ಆರಂಭಿಸಿದ ಗಸ್ತಿನಲ್ಲಿದ್ದ ಸಿಬ್ಬಂದಿ ಹಾಗೂ ಕಳ್ಳಬೇಟೆ ತಡೆ ಶಿಬಿರದ ಸಿಬ್ಬಂದಿ, ಗಾಳಿಯಲ್ಲಿ ಗುಂಡು ಹಾರಿಸಿ ಶರಣಾಗುವಂತೆ ಸೂಚಿಸಿದರೂ, ಬೇಟೆಗಾರರು ಗುಂಡಿನ ದಾಳಿ ನಡೆಸಿದರು. ಅತ್ಮರಕ್ಷಣೆಗಾಗಿ ಸಿಬ್ಬಂದಿ ಪ್ರತಿದಾಳಿ ನಡೆಸಿದಾಗ ತಂಡದಲ್ಲಿದ್ದ ಮನುವಿಗೆ ಗುಂಡು ತಗುಲಿದೆ ಎಂದು ತಿಳಿದುಬಂದಿದ್ದು, ಉಳಿದ ಬೇಟೆಗಾರರು ಪರಾರಿಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಚಿಕ್ಕಮಗಳೂರು | ರಸ್ತೆ ಮಧ್ಯೆ ಹಸುವಿಗೆ ಢಿಕ್ಕಿ ಹೊಡೆದ ಬೈಕ್ ಸವಾರ; ವ್ಯಕ್ತಿ ಮೇಲೆ ಹರಿದ ಗ್ಯಾಸ್ ಲಾರಿ

ಎಸ್‌ಪಿ ಪದ್ಮಿನಿ ಸಾಹು ಹಾಗೂ ಅರಣ್ಯ ಸಂರಕ್ಷಣಾಧಿಕಾರಿ ರಮೇಶ್ ಕುಮಾರ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

120 ಕೆಜಿ ಕಡವೆ ಮಾಂಸ, ಒಂದು ಸಿಂಗಲ್ ಬ್ಯಾರೆಲ್ ಗನ್ ಸೇರಿದಂತೆ ಇತರೆ ಆಯುಧಗಳನ್ನು ವಶಕ್ಕೆ ಪಡೆದಿದ್ದು, ಪರಾರಿಯಾದವರ ಬಂಧನಕ್ಕೆ ಅರಣ್ಯ ಇಲಾಖೆ ಶೋಧ ಕಾರ್ಯ ನಡೆಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...