ಚಾಮರಾಜನಗರ | ಬಿಸಿಯೂಟ ಅಡುಗೆ ಸಿಬ್ಬಂದಿ ದಲಿತೆ; ಶಾಲೆಗೆ ಮಕ್ಕಳನ್ನು ಕಳಿಸದ ಪೋಷಕರು

Date:

ಚಾಮರಾಜನಗರ ತಾಲ್ಲೂಕಿನ ಹೊಮ್ಮ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ದಲಿತ ಮಹಿಳೆ ಬಿಸಿಯೂಟ ಸಿದ್ಧಪಡಿಸುತ್ತಾರೆ ಎನ್ನುವ ಕಾರಣಕ್ಕೆ ಪೋಷಕರು ತಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸದ ವಿಲಕ್ಷಣ ಘಟನೆ ಬೆಳಕಿಗೆ ಬಂದಿದೆ.

ದಲಿತ ಮಹಿಳೆ ಅಡುಗೆ ಮಾಡುತ್ತಾರೆ ಎನ್ನುವ ಕಾರಣಕ್ಕೆ ಶಾಲೆಯಿಂದ ವರ್ಗಾವಣೆ ಪತ್ರ ಪಡೆದು ಬೇರೊಂದು ಶಾಲೆಗೆ ಮಕ್ಕಳನ್ನು ಸೇರುಸುತ್ತಿದ್ದು, ಈಗ ಶಾಲೆಯಲ್ಲಿ ದಾಖಲಾತಿ ಸಂಖ್ಯೆ ಒಂದಕ್ಕೆ ಕುಸಿದಿದ್ದು ಶಾಲೆ ಮುಚ್ಚುವ ಹಂತಕ್ಕೆ ಬಂದು ನಿಂತಿದೆ.

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಸಮರ್ಪಕವಾಗಿ ನಡೆಯದ ಹಿನ್ನಲೆಯಲ್ಲಿ ಆಗಾಗ್ಗೆ ಪೋಷಕರು ಪ್ರತಿಭಟನೆ ಸಹ ಮಾಡಿದ್ದರು. 21 ವಿದ್ಯಾರ್ಥಿಗಳು ಇದ್ದ ಶಾಲೆಯಲ್ಲಿ 12 ಮಕ್ಕಳ ವರ್ಗಾವಣೆ ಪತ್ರ ಪಡೆದಿದ್ದಾರೆ. 5 ಮಕ್ಕಳು ವರ್ಗಾವಣೆ ಪತ್ರ ಕೋರಿ ಅರ್ಜಿ ಸಲ್ಲಿಸಿರುತ್ತಾರೆ. ಇನ್ನ ಶಾಲೆಯಲ್ಲಿ ಉಳಿದಿರುವ ಮಕ್ಕಳು ಕೇವಲ ಓರ್ವ ಮಾತ್ರ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರೋಸ್ಟರ್ ಪದ್ಧತಿ ಅನುಸಾರ ದಲಿತ ಮಹಿಳೆಯನ್ನು ಅಡುಗೆ ಸಿಬ್ಬಂದಿಯಾಗಿ ನೇಮಕ ಮಾಡಲಾಗಿದೆ. ಇದರಿಂದಾಗಿ ಶಾಲೆಯಲ್ಲಿ ಮಕ್ಕಳ ದಾಖಲಾತಿ ಸಂಖ್ಯೆ ದಿಢೀರ್ ಕುಸಿತಗೊಂಡಿದ್ದು. ಪಕ್ಕದ ಆಲೂರು ಊರಿನ ಶಾಲೆಗೆ ತೆರಳುತ್ತಿರುವುದು ಕಂಡುಬಂದಿದೆ. ಇದಕ್ಕೆಲ್ಲ ಕಾರಣ ಅಡುಗೆ ಸಿಬ್ಬಂದಿ ದಲಿತ ಮಹಿಳೆ ಎನ್ನುವ ಗಂಭೀರ ಆರೋಪ ಕೇಳಿ ಬಂದಿದೆ.

ಶಿಕ್ಷಕ ಚಿನ್ನಸ್ವಾಮಿ ಮಾತನಾಡಿ ” ಈ ಹಿಂದೆ ಶಾಲೆಯಲ್ಲಿ ಶಿಕ್ಷಕರು ಸರಿಯಾಗಿ ಪಾಠ ಮಾಡುವುದಿಲ್ಲ ಎನ್ನುವ ಆರೋಪವಿತ್ತು. ಗ್ರಾಮಸ್ಥರು ದೂರು ಕೊಟ್ಟಿದ್ದರು. ನಂತರದಲ್ಲಿ ಇಬ್ಬರು ಶಿಕ್ಷಕರನ್ನು ಬೇರೆಡೆಗೆ ವರ್ಗಾವಣೆ ಮಾಡಲಾಗಿತ್ತು. ಶಾಲೆಯಲ್ಲಿ ಮಕ್ಕಳಿರದ ಕಾರಣ ಇಬ್ಬರು ಅಡುಗೆ ಸಹಾಯಕಿಯರನ್ನು ಕೆಲಸದಿಂದ ತೆಗೆದುಹಾಕಿದ್ದರು. ಆದರೆ, ದಿಢೀರ್ ಅಂತೇಳಿ ಶಾಲೆಯ ಮಕ್ಕಳು ವರ್ಗಾವಣೆ ಪತ್ರ ಪಡೆದು ಹೋಗುತ್ತಿರುವುದಕ್ಕೆ ಕಾರಣ ತಿಳಿಯುತ್ತಿಲ್ಲ ” ಎಂದಿದ್ದಾರೆ.

ದಲಿತ ಮಹಿಳೆ ಅಡುಗೆ ಸಿಬ್ಬಂದಿ ಎನ್ನುವ ಕಾರಣಕ್ಕೆ ಶಾಲೆಯ ಮಕ್ಕಳನ್ನು ಬೇರೆಡೆಗೆ ಪೋಷಕರು ಸೇರಿಸುತ್ತಿದ್ದಾರೆ ಎನ್ನುವ ಆರೋಪ ಕೇಳಿಬಂದಿದ್ದು, ಸ್ಥಳಕ್ಕೆ ಶಿಕ್ಷಣಾಧಿಕಾರಿ ಹನುಮಶೆಟ್ಟಿ, ಸಂತೆಮರಹಳ್ಳಿ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ತಾಜುದ್ದೀನ್ ಭೇಟಿ ನೀಡಿ ಪೋಷಕರ ಜೊತೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

ಈ ಸುದ್ದಿ ಓದಿದ್ದೀರಾ? ಕೊಡಗು | ಅತ್ತೂರು ಕೊಲ್ಲಿ ಹಾಡಿಗೆ ಶಾಸಕ ಎ. ಎಸ್. ಪೊನ್ನಣ್ಣ ಭೇಟಿ; ಸರ್ಕಾರದೊಂದಿಗೆ ಚರ್ಚಿಸುವ ಭರವಸೆ

ಡಿಡಿಪಿಐ ರಾಮಚಂದ್ರ ರಾಜೆ ಅರಸ್ ಮಾತನಾಡಿ ‘ ಬಿಇಓ, ಬಿ ಆರ್ ಸಿ ಶಾಲೆಗೆ ಭೇಟಿ ನೀಡಿ ಪೋಷಕರು ಹಾಗೂ ಶಿಕ್ಷಕರ ಜೊತೆ ಮಾತನಾಡಿ ಸಮಸ್ಯೆ ಬಗೆಹರಿಸಲು ಪ್ರಯತ್ನ ಮಾಡಿದ್ದಾರೆ.ನಾನು ಸಹ ಶಾಲೆಗೆ ಭೇಟಿ ಕೊಟ್ಟು ಮನವೊಲಿಸುವೆ ‘ ಎಂದಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...