ಚಾಮರಾಜನಗರ | ಕಿತ್ತೂರು ರಾಣಿ ಚೆನ್ನಮ್ಮನವರ ಧೈರ್ಯ, ಸಾಹಸ ನಮ್ಮೆಲ್ಲರಿಗೆ ಸ್ಪೂರ್ತಿ: ಜಿಲ್ಲಾಧಿಕಾರಿ ಶಿಲ್ಪಾನಾಗ್

Date:

ಕಿತ್ತೂರು ರಾಣಿ ಚೆನ್ನಮ್ಮನವರ ಧೈರ್ಯ, ಸಾಹಸ ನಮ್ಮೆಲ್ಲರಿಗೆ ಸ್ಪೂರ್ತಿಯಾಗಿದೆ ಎಂದು ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಹೇಳಿದರು.

ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ‘ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ’ ಕಾರ್ಯಕ್ರಮದಲ್ಲಿ ಮಾತನಾಡಿದರು.

“ಬ್ರಿಟೀಷರ ವಿರುದ್ಧ ದೇಶದ ರಕ್ಷಣೆಗಾಗಿ ಕೆಚ್ಚೆದೆಯಿಂದ ಹೋರಾಡಿದ ವೀರನಾರಿ ಕಿತ್ತೂರು ರಾಣಿ ಚೆನ್ನಮ್ಮ ಅವರ ಧೈರ್ಯ, ಸಾಹಸ, ಆದರ್ಶಗಳು ನಮ್ಮೆಲ್ಲರಿಗೂ ಸ್ಪೂರ್ತಿಯಾಗಿವೆ ಎಂದು ಜಿಲ್ಲಾಧಿಕಾರಿ ಶಿಲ್ಪಾನಾಗ್ ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕರ್ನಾಟಕಕ್ಕೆ, ಕನ್ನಡಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ಅವರ ಕೊಡುಗೆ ಅಪಾರವಾಗಿದೆ. ದೇಶಪ್ರೇಮಿಯಾಗಿದ್ದ ರಾಣಿ ಚೆನ್ನಮ್ಮ ನಾಡು, ನುಡಿಯ ಬಗ್ಗೆ ಗೌರವ ಹೊಂದಿದ್ದರು. ದೇಶದ ಜನರ ರಕ್ಷಣೆಗಾಗಿ ತನ್ನ ಪ್ರಾಣದ ಹಂಗು ತೊರೆದು ಬ್ರಿಟೀಷರ ವಿರುದ್ಧ ಹೋರಾಡಿದ ದಿಟ್ಟ ಮಹಿಳೆ ಚೆನ್ನಮ್ಮ. ಧೈರ್ಯ, ಶೌರ್ಯ, ಸಾಹಸಗಾಥೆ ಎಲ್ಲ ಮಹಿಳೆಯರಿಗೂ ಮಾದರಿಯಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಮಂಗಳೂರು | ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಆಟೋಗೆ ಪಿಕಪ್ ವಾಹನ ಡಿಕ್ಕಿ: ವಿದ್ಯಾರ್ಥಿನಿ ಮೃತ್ಯು; ಮೂವರಿಗೆ ಗಾಯ

“ಚೆನ್ನಮ್ಮ ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ಪಾಲಿಸುವ ಮೂಲಕ ಸರ್ಕಾರಿ ನೌಕರರು ಜನಸಾಮಾನ್ಯರಿಗೆ ಸೌಲಭ್ಯಗಳನ್ನು ದೊರಕಿಸುವ ನಿಟ್ಟಿನಲ್ಲಿ ಉತ್ತಮ ಆಡಳಿತದ ವಾತಾವರಣ ಕಲ್ಪಿಸಬೇಕು. ನಿಗದಿತ ಗುರಿ ಸಾಧನೆಗೆ ಎಲ್ಲರೂ ಕಾರ್ಯೋನ್ಮುಖರಾಗಬೇಕು. ಅದೇ ರಾಣಿ ಚೆನ್ನಮ್ಮ ಅವರಿಗೆ ನಾವುಗಳು ಸಲ್ಲಿಸುವ ಗೌರವವಾಗಿದೆ” ಎಂದು ಹೇಳಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ, ತಹಶೀಲ್ದಾರ್ ಗಿರಿಜಾ, ಜಿಲ್ಲಾ ಪಂಚಾಯತ್ ಸಹಾಯಕ ಕಾರ್ಯದರ್ಶಿ ಶ್ರೀಕಂಠರಾಜೇ ಅರಸ್, ಡಾ ಬಿ ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ರಾಜು, ಜಿಲ್ಲಾಮಟ್ಟದ ಅಧಿಕಾರಿಗಳು ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...