ಚಾಮರಾಜನಗರ | ಮಲೆ ಮಹದೇಶ್ವರ ಬೆಟ್ಟ ದೀಪಾವಳಿ: ಮುಂಜಾಗ್ರತಾ ಕ್ರಮಕ್ಕೆ ಡಿಸಿ ಆದೇಶ

Date:

ಹನೂರು ತಾಲೂಕಿನಲ್ಲಿರುವ ಯಾತ್ರಾ ಕ್ಷೇತ್ರ ಮಲೆ ಮಹದೇಶ್ವರ ಸ್ವಾಮಿ, ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ 2024 ಅಕ್ಟೋಬರ್ 29ರಿಂದ ನವೆಂಬರ್ 2ರವರೆಗೆ ಜರುಗಲಿರುವ ದೀಪಾವಳಿ ಜಾತ್ರಾ ಮಹೋತ್ಸವದ ಅಂಗವಾಗಿ ಮುಂಜಾಗರೂಕತಾ ಕ್ರಮ ಕೈಗೊಳ್ಳುವಂತೆ ಚಾಮರಾಜನಗರದಲ್ಲಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಬೇರೆ ಜಿಲ್ಲೆ ಹಾಗೂ ಹೊರ ರಾಜ್ಯಗಳಿಂದ ಲಕ್ಷಾಂತರ ಭಕ್ತಾಧಿಗಳು ಪ್ರತಿ ವರ್ಷ ಸೇರುತ್ತಾರೆ. ವಾಹನ ಸಂಚಾರಕ್ಕೆ ಅಡಚಣೆ, ಅಪಘಾತಗಳು ಉಂಟಾಗುವ ಹಾಗೂ ಕಾನೂನು ಸುವ್ಯವಸ್ಥೆಗೆ ತೊಡಕಾಗುವ ಸಂಭವವಿರುತ್ತದೆ. ಈ ಹಿನ್ನೆಲೆಯಲ್ಲಿ ಹನೂರು ತಾಲೂಕಿನ ಕೌದಳ್ಳಿ ಗ್ರಾಮದ ಪ್ರಕಾಶ್ ಗಾರ್ಡ್‌ನಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುವ ಎಲ್ಲಾ ಮಾದರಿಯ ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳನ್ನು (ಆಟೋ ರಿಕ್ಷಾ ಮತ್ತು ಗೂಡ್ಸ್ ವಾಹನಗಳು ಸೇರಿದಂತೆ) ಪ್ರವೇಶವನ್ನು ದಿನಾಂಕ 29-10-2024 ರಿಂದ 02-11-2024 ರವರೆಗೆ ಸಂಪೂರ್ಣ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ವಾಹನ ಪಾರ್ಕಿಂಗ್‌ಗೆ ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಮತ್ತು ದ್ವಿಚಕ್ರ ಮತ್ತು ಆಟೋರಿಕ್ಷಾ ವಾಹನ ಸವಾರರು ನಿಲುಗಡೆ ಸ್ಥಳದಿಂದ ಮಲೈ ಮಹದೇಶ್ವರ ಬೆಟ್ಟಕ್ಕೆ ತೆರಳಲು ಬೇಕಾದ ಸಾರಿಗೆ ಸೌಲಭ್ಯವನ್ನು ವ್ಯವಸ್ಥೆ ಮಾಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಲು ಉಲ್ಲೇಖ(1)ರ ಪತ್ರದಲ್ಲಿ ಪೊಲೀಸ್ ಅಧೀಕ್ಷಕರು, ಚಾಮರಾಜನಗರ ಜಿಲ್ಲೆ, ಹಾಗೂ ಉಲ್ಲೇಖ(2)ರ ಪತ್ರದಲ್ಲಿ ಕಾರ್ಯದರ್ಶಿಗಳು ಶ್ರೀ ಮಲೈ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಕ್ಷೇತ್ರ ಪ್ರಾಧಿಕಾರ ಮಲೈ ಮಹದೇಶ್ವರ ಬೆಟ್ಟ ಹನೂರು ತಾಲೂಕು ಇವರಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಫಲಶೃತಿ | ಬೆಳಗಾವಿ: ಶಾಲಾ ಶೌಚಾಲಯ ಸಮಸ್ಯೆ; ತಾತ್ಕಾಲಿಕ ಪರಿಹಾರ ಕಲ್ಪಿಸಿದ ಅಧಿಕಾರಿಗಳು

ಮಲೆ ಮಹದೇಶ್ವರ ಬೆಟ್ಟದ ರಸ್ತೆಯು ಅರಣ್ಯ ಪ್ರದೇಶ ಹಾಗೂ ತುಂಬಾ ಕಡಿದಾದ ತಿರುವುಗಳಿಂದ ಕೂಡಿದ್ದು ವಾಹನ ದಟ್ಟಣೆ ಹೆಚ್ಚಾಗುವ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಸದರಿ ರಸ್ತೆಯ ಸಂಚಾರದಲ್ಲಿ ವಾಹನಗಳ ಸಂಚಾರ ನಿಷೇಧಿಸಿ, ಕರ್ನಾಟಕ ಮೋಟಾರು ವಾಹನಗಳ ಕಾಯ್ದೆ 1988ರ ಸೆಕ್ಷನ್ 115, ಕರ್ನಾಟಕ ಮೋಟಾರು ವಾಹನಗಳ ನಿಯಮಾವಳಿ 1989ರ ನಿಯಮ 221-ಎ(5)ರ ಹಾಗೂ ಕರ್ನಾಟಕ ಸಂಚಾರ ನಿಯಂತ್ರಣ ಕಾಯ್ದೆ 1960ರ ಸೆಕ್ಷನ್ 3ರ ಪ್ರಕಾರ ಮುಂಜಾಗೃತಾ ಕ್ರಮವಾಗಿ ಆದೇಶ ಹೊರಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾನಾಗ್ ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...