ಚಾಮರಾಜನಗರ | ರಾಜರು ಕೊಟ್ಟಿರುವ ಭೂಮಿಯನ್ನು ಕಿತ್ತುಕೊಳ್ಳಲ್ಲ: ಪ್ರಮೋದಾದೇವಿ ಒಡೆಯರ್

Date:

ಚಾಮರಾಜನಗರ ಜಿಲ್ಲೆಯಲ್ಲಿ ರಾಜರು ದಾನವಾಗಿ ಕೊಟ್ಟಿರುವ ಭೂಮಿಯನ್ನು ಯಾವುದೇ ಕಾರಣಕ್ಕೂ ಜನರಿಂದ ಕಿತ್ತುಕೊಳ್ಳುವುದಿಲ್ಲ. ಈ ಬಗ್ಗೆ ಆತಂಕ ಬೇಡ ಎಂದು ರಾಜವಂಶಸ್ಥೆ ಪ್ರಮೋದಾದೇವಿ ಹೇಳಿದರು.

ಜಿಲ್ಲೆಯಲ್ಲಿ ಮೈಸೂರು ರಾಜಮನೆತರದ ಹೆಸರಿನಲ್ಲಿರುವ 5 ಸಾವಿರ ಎಕರೆ ಖಾಸಗಿ ಸ್ವತ್ತಿಗೆ ಖಾತೆ ಮಾಡಿಸಿಕೊಳ್ಳುವ ವಿಚಾರವಾಗಿ ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಕಂದಾಯ ಗ್ರಾಮಗಳನ್ನು ಮಾಡುವುದಾಗಿ ಚಾಮರಾಜನಗರ ಜಿಲ್ಲಾಡಳಿತ ಹೇಳಿದೆ. ಅದರಲ್ಲಿ ನಮಗೆ ಸೇರಿದ ಜಾಗವೂ ಇದೆ. ಹಾಗಾಗಿ ನಮ್ಮಲ್ಲಿರುವ ದಾಖಲೆಗಳ ಆಧಾರದ ಮೇಲೆಯೇ ಜಿಲ್ಲಾಧಿಕಾರಿ, ತಹಶೀಲ್ದಾರ್‌ ಹಾಗೂ ರಾಜ್ಯ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ. ಕಂದಾಯ ಗ್ರಾಮ ಮಾಡುವ ಬಗ್ಗೆ ನಮಗೂ ಮಾಹಿತಿ ನೀಡಿದ್ದರೆ ಇಷ್ಟು ಗೊಂದಲ ಸೃಷ್ಟಿಯಾಗುತ್ತಿರಲಿಲ್ಲ” ಎಂದರು.

“ಮಹಾರಾಜರು ದಾನವಾಗಿ ಕೊಟ್ಟಿರುವ ಭೂಮಿ ಕೊಟ್ಟಿದ್ದರೆ ಆ ಬಗ್ಗೆ ಯಾವುದೇ ತಕರಾರಿಲ್ಲ. ಈ ಬಗ್ಗೆ ಯಾವುದೇ ಪ್ರಶ್ನೆಗಳಿದ್ದರೂ ಆ ಭಾಗದ ಗ್ರಾಮಸ್ಥರು ನಮ್ಮನ್ನು ನೇರವಾಗಿ ಭೇಟಿಯಾಗಬಹುದು. ಒಂದು ವೇಳೆ ಅದು ನಮ್ಮ ಜಾಗವೇ ಆಗಿದ್ದರೂ ಸಂಬಂಧಿಸಿದವರಿಗೆ ಉಳುಮೆ ಮಾಡಲು ಜಮೀನು ಕೊಡಲಾಗುತ್ತದೆ. ಜಮೀನು ವಿಷಯದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳಲಾಗುತ್ತದೆ. ಗ್ರಾಮಸ್ಥರಿಗೆ ಯಾವುದೇ ರೀತಿ ತೊಂದರೆ ಕೊಡುವುದಿಲ್ಲ” ಎಂದು ಪುನರುಚ್ಚರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ: ಚಾಮರಾಜನಗರ | ಏ. 24 ರಂದು ಮಲೆ ಮಹದೇಶ್ವರ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...