ಚಾಮರಾಜನಗರ | ವಾಲ್ಮೀಕಿ ಜಯಂತಿ, ಗ್ರಾಮೀಣ ದಸರಾ ನೆಡೆಸಲು ಪೂರ್ವಭಾವಿ ಸಭೆ

Date:

ವಾಲ್ಮೀಕಿ ಜಯಂತಿ, ಗ್ರಾಮೀಣ ದಸರಾ ಹಾಗೂ ಜನತಾದರ್ಶನ ನಡೆಸಲು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಪಟ್ಟಣದ ತಾಲೂಕು ಸಭಾ ಭವನದಲ್ಲಿ ಶಾಸಕ ಗಣೇಶ್ ಪ್ರಸಾದ್ ನೇತೃತ್ವದಲ್ಲಿ ಪೂರ್ವಭಾವಿ ಸಭೆ ನಡೆಸಿದರು.

ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕರು “ವಾಲ್ಮೀಕಿ ಜಯಂತಿ ವಿಚಾರವಾಗಿ ನಾಯಕ ಸಮಾಜದ ಯಜಮಾನರುಗಳ ತೀರ್ಮಾನದಂತೆ ಅಕ್ಟೋಬರ್ 28ರಂದು ಗುಂಡ್ಲುಪೇಟೆ ತಾಲೂಕು ಕಚೇರಿಯಲ್ಲಿ ಸರಳವಾಗಿ ಆಚರಣೆ ಮಾಡಲಾಗುತ್ತದೆ. ಹಾಗೂ ಸಮಾಜದ ಹಿರಿಯರ ಮತ್ತು ಮುಖಂಡರ ಅಪೇಕ್ಷೆಯಂತೆ ನಾಯಕ ಸಮುದಾಯದ ಸ್ವಾಮೀಜಿ ಮತ್ತು ಸಚಿವರುಗಳು ಸೇರಿದಂತೆ ದಿನಾಂಕ ನಿಗದಿ ಪಡಿಸಿ ತಾಲೂಕಿನಲ್ಲಿ ಬಹಳ ಅದ್ದೂರಿಯಾಗಿ ವಾಲ್ಮೀಕಿ ಜಯಂತಿ ಆಚರಣೆ ಮಾಡಲಾಗುತ್ತದೆ” ಎಂದು ತಿಳಿಸಿದರು.

ವಾಲ್ಮೀಕಿ ಭವನದ ವಿಷಯಕ್ಕೆ ಸಂಬಂಧಿಸಿದಂತೆ ಮಾತನಾಡಿದ ಶಾಸಕರು “ವಾಲ್ಮೀಕಿ ಭವನ ಕಾಮಗಾರಿ ಅಪೂರ್ಣಗೊಂಡಿದ್ದು, ಮುಂದಿನ ಎರಡು ಮೂರು ತಿಂಗಳಲ್ಲಿ ಸಚಿವರ ಜೊತೆಗೆ ಚರ್ಚೆ ಮಾಡಿ ಅನುದಾನ ಮಂಜೂರು ಮಾಡಲಾಗುವುದು” ಎಂದು ಹೇಳಿದ ಅವರು ವಾಲ್ಮೀಕಿ ಜಯಂತಿ ಆಚರಣೆ ದಿನ ಊಟ ಮತ್ತು ಶಾಮಿಯಾನದ ವ್ಯವಸ್ಥೆ ಮಾಡುವುದಾಗಿ ತಿಳಿಸಿದರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಗ್ರಾಮೀಣ ದಸರಾ ಅಕ್ಟೋಬರ್ 20ಕ್ಕೆ ದಿನಾಂಕ ನಿಗದಿಪಡಿಸಿದ ಬಳಿಕ ಸಾರ್ವಜನಿಕರು, ʼರಸ್ತೆಯಲ್ಲಿ ವಿದ್ಯುತ್ ಅಲಂಕಾರ ಮಾಡುವ ಬಗ್ಗೆ ತಿಳಿಸಿದರು. ಗುಂಡ್ಲುಪೇಟೆ ಗಡಿ ತಾಲೂಕು ಆಗಿರುವ ಕಾರಣ ಸ್ವಾಗತ ಕಮಾನು ಅಳವಡಿಸುವಂತೆ ಹಾಗೂ ಕಲಾತಂಡಗಳನ್ನು ಒಳಗೊಂಡಂತೆ ಕವಿಗೋಷ್ಠಿ, ರೈತರ ದಸರಾ ಹಬ್ಬದ ಮತ್ತಿತರ ಕಾರ್ಯಕ್ರಮಗಳನ್ನು ನಡೆಸಬೇಕುʼ ಎಂದು ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಶಾಸಕರು, “ಸರ್ಕಾರದಿಂದ ಗ್ರಾಮೀಣ ದಸರಾ ಆಚರಣೆಗೆ ಸಣ್ಣ ಪ್ರಮಾಣದ ಅನುದಾನ ಸಿಗಲಿದ್ದು, ಅದರ ಚೌಕಟ್ಟಿನಲ್ಲಿ ನಡೆಸಬೇಕು. ಅಲ್ಲದೇ ಗ್ರಾಮೀಣ ದಸರಾ ಸೇರಿದಂತೆ ಇತರ ಕಾರ್ಯಕ್ರಮಗಳು ಸಂಜೆ 4ರಿಂದ ರಾತ್ರಿ 10ರವರೆಗೆ ಜರುಗುವುದರಿಂದ 6 ಗಂಟೆಯೊಳಗೆ ಸಮಿತಿ ಕಾರ್ಯಕ್ರಮ ನಡೆಸುವ ಬಗ್ಗೆ ಪೂರ್ವ ತಯಾರಿ ಮಾಡಿಕೊಳ್ಳಬೇಕು” ಎಂದು ತಾಲೂಕು ದಂಡಾಧಿಕಾರಿಗಳಿಗೆ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಸಾರ್ವಜನಿಕ ಆಕ್ರೋಶಕ್ಕೆ ಮಣಿದ ಪೊಲೀಸ್ ಇಲಾಖೆ; ಮಹಿಷ ದಸರಾಗೆ ಸಮ್ಮತಿ

ಗ್ರಾಮೀಣ ಭಾಗದ ಪ್ರತಿಭೆಗಳನ್ನು ಬಳಸಿಕೊಂಡು ವೇದಿಕೆಯಲ್ಲಿ ಕಂಸಾಳೆ, ಡೊಳ್ಳು ಕುಣಿತ, ಗಾಯನ ಸೇರಿದಂತೆ ಇತರ ಕಾರ್ಯಕ್ರಮ ನಡೆಸಲು ತೀರ್ಮಾನಿಸಿದರು.

ಇದೇ ಸಂದರ್ಭದಲ್ಲಿ ಹಾಜರಿದ್ದ ತಾಲೂಕು ದಂಡಾಧಿಕಾರಿ ಟಿ ರಮೇಶ್ ಬಾಬು, ಸರ್ಕಲ್ ಇನ್ಸ್‌ಪೆಕ್ಟರ್ ಪರಶಿವಮೂರ್ತಿ, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ನಂಜುಂಡೇಗೌಡ, ಪುರಸಭೆ ಮುಖ್ಯ ಅಧಿಕಾರಿ ವಸಂತ್ ಕುಮಾರಿ, ಕಾರ್ಯನಿರ್ವಾಹಕ ಅಧಿಕಾರಿ ರಾಮಲಿಂಗಯ್ಯ, ಪುರಸಭೆ ಮಾಜಿ ಅಧ್ಯಕ್ಷರುಗಳಾದ ಪಿ ಗಿರೀಶ್ ಮತ್ತು ಮಲ್ಲೇಶ್, ಪುರಸಭೆ ಸದಸ್ಯ ಕುಮಾರ್ ಪಟ್ಟಬಿ, ವಕೀಲರ ಸಂಘದ ಅಧ್ಯಕ್ಷ ವೆಂಕಟೇಶ್, ಸಂಘ ಸಂಸ್ಥೆಯ ಅಧ್ಯಕ್ಷರುಗಳು ಸೇರಿದಂತೆ ಇತರರು ಇದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...