ಚಾಮರಾಜನಗರ | ‘ಬಾರುಕೋಲು’ ರಾಸುಗಳಿಗಷ್ಟೇ ಅಲ್ಲಾ, ಸರ್ಕಾರ ದಾರಿ ತಪ್ಪಿದಾಗಲು ದಂಡನಾಸ್ತ್ರವೇ: ರಾಕೇಶ್ ಟಿಕಾಯತ್

Date:

ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸಾಮೂಹಿಕ ನಾಯಕತ್ವದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ವತಿಯಿಂದ ಶುಕ್ರವಾರ ಜಿಲ್ಲಾಧಿಕಾರಿ ಆವರಣದಲ್ಲಿ ಪ್ರೊ. ಎಂ.ಡಿ. ನಂಜುಂಡಸ್ವಾಮಿ ಅವರ 90ನೇ ಜನ್ಮದಿನದ ಅಂಗವಾಗಿ ‘ಸ್ವಾಭಿಮಾನದೆಡೆಗೆ ಹಸಿರು ಸೇನಾನಿಗಳ ಕಾಲ್ನಡಿಗೆ ಹಾಗೂ ರೈತ ಸಮಾವೇಶ’ದಲ್ಲಿ ಮಾತನಾಡಿದ, ಭಾರತೀಯ ಕಿಸಾನ್ ಯೂನಿಯನ್ ರಾಷ್ಟ್ರೀಯ ವಕ್ತಾರ ರಾಕೇಶ್ ಟಿಕಾಯತ್, ‘ರಾಸುಗಳಿಗೆ ಬಾರುಕೋಲು ಚಡಿ ಏಟು ನೀಡಿ ದಾರಿ ತಪ್ಪದಂತೆ ಎಚ್ಚರಿಸುವ ಹಾಗೆಯೇ, ಸರ್ಕಾರಗಳು ದಾರಿ ತಪ್ಪಿದಾಗ ಬಾರುಕೋಲು ಚಡಿ ಏಟು ಕೊಟ್ಟು ಸರಿ ದಾರಿಗೆ ತರುವಂತಾಗಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಆಳುವ ಸರ್ಕಾರಗಳ ರೈತ ವಿರೋಧಿ ನಿಲುವುಗಳು ರೈತರ ಬದುಕಿನ ಮೇಲೆ ಗದಪ್ರಹಾರ ನಡೆಸಿದೆ. ಇದೇ ರೀತಿ ಮುಂದುವರೆದರೆ ಸಂಘರ್ಷದ ದಿನಗಳು ಎದುರಾಗುವ ಸಾಧ್ಯತೆಯಿದ್ದು ಈಗಲೇ ರೈತ ಸಮುದಾಯ ಸಂಘಟಿತರಾಗಿ ಚಳವಳಿಗೆ ಸಿದ್ದವಾಗುವಂತೆ ಕರೆ ನೀಡಿದರು. ಅಮೆರಿಕ-ಭಾರತ ನಡುವಿನ ವ್ಯಾಪಾರ ಒಪ್ಪಂದ ದೇಶದ ಕೃಷಿ ಕ್ಷೇತ್ರಕ್ಕೆ ಮಾರಕವಾಗಲಿದೆ. ಅನ್ನದಾತರ ಆತ್ಮಹತ್ಯೆ ನಿಲ್ಲಬೇಕು. ಅಭಿವೃದ್ದಿ ಹೆಸರಿನಲ್ಲಿ ರೈತರ ಅನುಮತಿಯಿರದೆ ಭೂ ಸ್ವಾಧೀನ ಪಡೆಸಿಕೊಳ್ಳುವುದನ್ನು ನಿಲ್ಲಿಸಿ, ಡಾ. ಸ್ವಾಮಿನಾಥನ್ ವರದಿಯಂತೆ ಎಲ್ಲಾ ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ನಿಗದಿ ಮಾಡಬೇಕು. ಕೇಂದ್ರ ಸರ್ಕಾರ
ತರಮಾಡುತ್ತಿರುವ ವಿದ್ಯುಚ್ಚಕ್ತಿ ಮಸೂದೆ-2025, ಸ್ಮಾರ್ಟ್ ಮೀಟರ್ ಯೋಜನೆ, ಬೀಜ ಮಸೂದೆ-2025ನ್ನು ತಕ್ಷಣವೇ ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ಎಪಿಎಂಸಿ ಮುಂಭಾಗದಿಂದ ಆರಂಭವಾದ ಜಾಥಾ ಸುಲ್ತಾನ್ ಶೇರ್ ವೃತ್ತ, ದೊಡ್ಡಂಗಡಿ, ಚಿಕ್ಕಂಗಡಿ ಬೀದಿ, ಸಂತೆಮರಳ್ಳಿ ವೃತ್ತ, ಭುವನೇಶ್ವರಿ ವೃತ್ತ, ಬಿ ರಾಚಯ್ಯ ಜೋಡಿ ರಸ್ತೆ ಮಾರ್ಗವಾಗಿ ತೆರಳಿ ಜಿಲ್ಲಾಧಿಕಾರಿ ಶ್ರೀರೂಪ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ವಿಶೇಷ ಸುದ್ದಿ ಓದಿದ್ದೀರಾ? ಅಂತಾರಾಷ್ಟ್ರೀಯ ಬಿಗ್ ಕ್ಯಾಟ್ ಅಲಯನ್ಸ್ ಶೃಂಗಸಭೆ ನಾಗರಹೊಳೆ-ಬಂಡೀಪುರದಲ್ಲಿ : ಹಿಂದಿರುವ ಹುನ್ನಾರವೇನು?

ಸಮಾವೇಶದಲ್ಲಿ ನಟ ಅಶೋಕ್, ಯದುವೀರ್ ಸಿಂಗ್, ರೈತ ನಾಯಕಿ ಚುಕ್ಕಿ ನಂಜುಂಡಸ್ವಾಮಿ, ಪ್ರೊ. ರವಿವರ್ಮ ಕುಮಾರ್, ಯಶವಂತ್, ಹೊನ್ನೂರು ಪ್ರಕಾಶ್, ಕೆ.ಟಿ. ಗಂಗಾಧರ್, ಗ್ಯಾರೆಂಟಿ ರಾಮಣ್ಣ, ಅನಸೂಯಮ್ಮ, ರಾಮಣ್ಣ ಕೆಂಚಲೆರ, ಮಂಜು ಕಿರಣ್, ಮಲ್ಲಿಕಾರ್ಜುನ, ನಿವೃತ್ತ ಪೊಲೀಸ್ ಅಧಿಕಾರಿ ಆರ್ಕೆಶ್ ಇದ್ದರು.

ಈ ಸುದ್ದಿ ಓದಿದ್ದೀರಾ? ‘ಸ್ವಚ್ಛ ಮೈಸೂರು’ ಜಾಗೃತಿಗಾಗಿ ಬೃಹತ್ ಸೈಕಲ್ ಜಾಥಾ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...