ಚಾಮರಾಜನಗರ | ಮಕ್ಕಳ ಕಲಿಕಾ ಸಾಮರ್ಥ್ಯ ಹೆಚ್ಚಿಸಲು ಸುಧಾರಣಾ ಕ್ರಮ ಕೈಗೊಳ್ಳಿ; ಜಿಲ್ಲಾಧಿಕಾರಿ ಶಿಲ್ಪಾನಾಗ್

Date:

ಮಕ್ಕಳ ಕಲಿಕಾ ಸಾಮರ್ಥ್ಯ ಹೆಚ್ಚಿಸಲು ಸುಧಾರಣಾ ಕ್ರಮ ಕೈಗೊಳ್ಳಿ ಎಂದು ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾನಾಗ್ ಶಿಕ್ಷಣ ಇಲಾಖೆಯ ಪ್ರೌಢಶಾಲಾ ಶಿಕ್ಷಕರಿಗೆ ಸಲಹೆ ನೀಡಿದರು.

ಚಾಮರಾಜನಗರದ ಜಿಲ್ಲಾಡಳಿತ ಭವನದಲ್ಲಿರುವ ಹಳೇ ಕೆಡಿಪಿ ಸಭಾಂಗಣದಲ್ಲಿ ಶಾಲಾ ಶಿಕ್ಷಣ ಇಲಾಖೆಯಿಂದ ಎಸ್ಎಸ್ಎಲ್‌ಸಿ ಪರೀಕ್ಷೆ ಫಲಿತಾಂಶ ಸುಧಾರಣಾ ಕ್ರಮಗಳ ಪ್ರಗತಿ ಪರಿಶೀಲನೆ ಹಾಗೂ ಮಾರ್ಗದರ್ಶನ ಕುರಿತು ಹಮ್ಮಿಕೊಂಡಿದ್ದ ‘ಜಿಲ್ಲಾಮಟ್ಟದ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಭೆ’ಯಲ್ಲಿ ಮಾತನಾಡಿದರು.

“ಪ್ರತಿ ವಿದ್ಯಾರ್ಥಿಗೆ ಎಸ್ಎಸ್ಎಲ್‌ಸಿ ಪರೀಕ್ಷೆ ಪ್ರಮುಖ ಘಟ್ಟವಾಗಿದ್ದು, ಕಲಿಕೆಯಲ್ಲಿ ಹಿನ್ನೆಡೆ ಕಂಡಿರುವ ಮಕ್ಕಳ ಕಲಿಕಾ ಸಾಮರ್ಥ್ಯ ಹೆಚ್ಚಳಕ್ಕೆ ಸುಧಾರಣಾ ಕ್ರಮಗಳನ್ನು ಕೈಗೊಳ್ಳಬೇಕು. ಎಲ್ಲ ಕ್ಷೇತ್ರದಲ್ಲಿಯೂ ಒತ್ತಡ ಇರುವಂತೆ ಶಿಕ್ಷಣ ಕ್ಷೇತ್ರದಲ್ಲಿಯೂ ಒತ್ತಡದ ಪರಿಸ್ಥಿತಿಯಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ತಂದೆ ಅಥವಾ ತಾಯಿಯಿಲ್ಲದ ಮಕ್ಕಳು, ಶಾಲೆಗಳಲ್ಲಿ ಶಿಕ್ಷಕರ ಕೊರತೆ, ಸಾಮಾಜಿಕ ಸಮಸ್ಯೆ, ಕಲಿಕೆಗೆ ಅವಶ್ಯವಾದ ಮೂಲ ಸೌಲಭ್ಯಗಳಿಲ್ಲದಿರುವುದು ಸೇರಿದಂತೆ ಇತರೆ ಕಾರಣಗಳಿಂದ ಮಕ್ಕಳ ವಿದ್ಯಾಭ್ಯಾಸ ಕುಂಠಿತವಾಗಲಿದೆ. ಈ ಎಲ್ಲ ಸಮಸ್ಯೆಗಳನ್ನು ಮೀರಿ ಮಕ್ಕಳಿಗೆ ಉತ್ತಮ ಭವಿಷ್ಯವನ್ನು ರೂಪಿಸಬೇಕಾದ ಮಹತ್ತರ ಜವಾಬ್ದಾರಿ ಶಿಕ್ಷಕರ ಮೇಲಿದೆ. ಪ್ರತಿಯೊಬ್ಬ ಶಿಕ್ಷಕರು ಈ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು. ಪೋಷಕರನ್ನೂ ಕೂಡಾ ಪ್ರೇರೇಪಿಸುವ ಕೆಲಸವಾಗಬೇಕು” ಎಂದು ಸೂಚಿಸಿದರು. ‌

ಚಾಮರಾಜನಗರ 16

“ಎಸ್ಎಸ್ಎಲ್‌ಸಿ ಪರೀಕ್ಷೆ 1, 2 ಮತ್ತು 3ರ ಪರೀಕ್ಷೆಗಳಲ್ಲಿ ಚಾಮರಾಜನಗರ ತಾಲೂಕು ಹೊರತುಪಡಿಸಿ ಉಳಿದ ತಾಲೂಕುಗಳಲ್ಲಿನ ಫಲಿತಾಂಶ ತೃಪ್ತಿಕರವಾಗಿದೆ. ಜಿಲ್ಲಾ ಕೇಂದ್ರವಾಗಿರುವ ಚಾಮರಾಜನಗರ ಫಲಿತಾಂಶದಲ್ಲಿ ಸಾಕಷ್ಟು ಹಿನ್ನೆಡೆ ಅನುಭವಿಸಿದೆ. ಇದು ಬದಲಾಗಬೇಕು. ಪೋಷಕರ ಸಹಕಾರ ಹಾಗೂ ಮಕ್ಕಳ ಬುದ್ಧಿಶಕ್ತಿಯ ರಚನೆ ವಿಶ್ಲೇಷಣೆಯಾಗಬೇಕು” ಎಂದು ತಿಳಿಸಿದರು.

“ಜಿಲ್ಲೆಯಲ್ಲಿ ಮಕ್ಕಳ ಕಲಿಕಾ ಸುಧಾರಣೆಗೆ ಅಗತ್ಯವಿರುವ ಮೂಲಸೌಲಭ್ಯಗಳು, ವಸತಿ ವ್ಯವಸ್ಥೆ, ಕಲಿಕಾ ವಾತಾವರಣ, ಪ್ರಶ್ನೆಪತ್ರಿಕೆಗಳ ಮಾದರಿ ಪತಿಕೆಗಳನ್ನು ಒದಗಿಸಲು ಆಧ್ಯತೆ ನೀಡಲಾಗುವುದು. ಅಲ್ಲದೆ ವಿವಿಧ ಇಲಾಖೆಗಳ ವಸತಿ ಶಾಲೆಗಳಿಗೆ ಆಯಾ ಇಲಾಖೆ ಅಧಿಕಾರಿಗಳೊಂದಿಗೆ ಖುದ್ದಾಗಿ ಭೇಟಿ ನೀಡಿ ಕಲಿಕಾ ಹಿನ್ನಡೆ ಕಂಡುಬಂದಿರುವ ಮಕ್ಕಳು, ಶಿಕ್ಷಕರು, ಪೋಷಕರೊಂದಿಗೆ ಸಂವಾದ ನಡೆಸಿ ಫಲಿತಾಂಶ ಹೆಚ್ಚಳಕ್ಕೆ ಪ್ರೇರೇಪಿಸಲಾಗುವುದು. ಒಟ್ಟಾರೆ ಮಕ್ಕಳ ಕಲಿಕಾ ಸಾಮರ್ಥ್ಯ ವೃದ್ಧಿಗೆ ಶಿಕ್ಷಣ ಇಲಾಖೆ ಕೈಗೊಳ್ಳುವ ಸುಧಾರಣಾ ಕ್ರಮಗಳಿಗೆ ಜಿಲ್ಲಾಡಳಿತ ಸಂಪೂರ್ಣ ಸಹಕಾರ ನೀಡಲಿದೆ” ಎಂದು ಜಿಲ್ಲಾಧಿಕಾರಿ ಹೇಳಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್ ಮಾತನಾಡಿ, “ಫಲಿತಾಂಶದಲ್ಲಿ ಹಿನ್ನಡೆಯಾಗಿರುವ ಶಾಲೆಗಳಲ್ಲಿ ಮುಖ್ಯವಾಗಿ ಯಾವ ವಿಷಯಗಳ ಕಲಿಕೆಯಲ್ಲಿ ಮಕ್ಕಳು ಹಿಂದೆ ಉಳಿದಿದ್ದಾರೆ ಎಂಬುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಅಧಿಕಾರಿಗಳು ನೀಡಬೇಕು. ಎಸ್ಎಸ್ಎಲ್‌ಸಿ ಫಲಿತಾಂಶ ಸುಧಾರಣೆಗಾಗಿ ಇಲಾಖೆ ಅಳವಡಿಸಿಕೊಂಡಿರುವ ಕಾರ್ಯಕ್ರಮಗಳನ್ನು ಜಾರಿಗೊಳಿಸಿ ಉತ್ತಮ ಫಲಿತಾಂಶ ನೀಡುವಂತೆ ಪ್ರೇರೇಪಿಸಬೇಕು. ಶಾಲೆಗೆ ಗೈರುಹಾಜರಿ, ಸರಾಸರಿ ಕಲಿಕೆಯಲ್ಲಿ ಹಿಂದುಳಿದ ಮಕ್ಕಳನ್ನು ಗುರುತಿಸಿ ಪೋಷಕರಿಗೆ ಅರಿವು ಮೂಡಿಸಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಅ.20ರಂದು ಸೀರತ್ ಅಭಿಯಾನದ ಸರ್ವಧರ್ಮ ಸಮಾವೇಶ

ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ರಾಮಚಂದ್ರರಾಜೇ ಅರಸ್ ಮಾತನಾಡಿ, “ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಅಧಿಕಾರಿಗಳು ಶೈಕ್ಷಣಿಕ ವರ್ಷ ಆರಂಭದಿಂದಲೂ ಬಹಳ ಆಸಕ್ತಿ ವಹಿಸಿ ಮಕ್ಕಳ ಕಲಿಕಾ ವೃದ್ಧಿಗೆ ಮಾರ್ಗದರ್ಶನ ನೀಡುತ್ತಿದ್ದಾರೆ. ಜಿಲ್ಲೆಯು ಅಳವಡಿಸಿಕೊಂಡಿರುವ 14 ಹಾಗೂ 20 ಅಂಶಗಳ ಕಾರ್ಯಕ್ರಮಗಳ ಅಂಶಗಳನ್ನು ಜಿಲ್ಲಾಧಿಕಾರಿಯವರು ರಾಜ್ಯ ಸರ್ಕಾರದ ಗಮನಕ್ಕೆ ತಂದಿದ್ದಾರೆ. ಜಿಲ್ಲೆಯ ಕುಂದು ಕೊರತೆಗಳನ್ನು ಪರಿಹರಿಸಲು ಮುಂದಾಗಿದ್ದಾರೆ. ಕಳೆದ ಬಾರಿಯ ನ್ಯೂನತೆಗಳನ್ನು ಸರಿಪಡಿಸಿಕೊಂಡು ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ಉತ್ತಮ ಫಲಿತಾಂಶ ನೀಡಲು ಎಲ್ಲರ ಪರಿಶ್ರಮ ಅವಶ್ಯವಾಗಿದೆ” ಎಂದರು.

ಡಯಟ್ ಪ್ರಾಂಶುಪಾಲ ಕಾಶೀನಾಥ್, ಕ್ಷೇತ್ರ ಶಿಕ್ಷಣಾಧಿಕಾರಿ ಹನುಮಶೆಟ್ಟಿ, ಟಿ ಆರ್ ಸ್ವಾಮಿ, ಮಂಜುಳ, ಗುರುಲಿಂಗಯ್ಯ, ನಂಜುಂಡಯ್ಯ, ಶಾಲಾ ಶಿಕ್ಷಣ ಇಲಾಖೆಯ ಶಿಕ್ಷಣಾಧಿಕಾರಿ ಮಲ್ಲಿಕಾರ್ಜುನ್ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...