ಚಾಮರಾಜನಗರ ಜಿಲ್ಲೆ ಯಳಂದೂರು ತಾಲೂಕಿನ ಬಿಳಿಗಿರಿರಂಗನಾಥಸ್ವಾಮಿ ದೇವಾಲಯ (ಬಿಆರ್‌ಟಿ) ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ವ್ಯಾಪ್ತಿಯ, ಬೈಲೂರು ವನ್ಯಜೀವಿ ವಲಯದ, ಪಿಜಿ ಪಾಳ್ಯ ಶಾಖೆಯ, ಬೆಳ್ಳಜೆ ಗಸ್ತಿನ ಅತ್ತಿಖಾನೆ ಎಸ್ಟೇಟ್ ಹಳ್ಳದಲ್ಲಿ ಹೆಣ್ಣು ಹುಲಿಯೊಂದು ಮೃತಪಟ್ಟಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಅಂದಾಜು 4 ರಿಂದ 5 ವರ್ಷ ಪ್ರಾಯದ ಹೆಣ್ಣು ಹುಲಿ ಮೃತಪಟ್ಟಿದೆ ಎಂದು ಅರಣ್ಯ ಇಲಾಖೆ ಮಾಹಿತಿ ನೀಡಿದ್ದು, ಹುಲಿಗಳ ಕಾದಾಟದಲ್ಲಿ ಈ ಹುಲಿ ಮೃತಪಟ್ಟಿರಬಹುದೆಂದು ಅರಣ್ಯ ಇಲಾಖೆಯ ಪ್ರಾಥಮಿಕ ವರದಿಯಲ್ಲಿ ತಿಳಿದುಬಂದಿದೆ.
ಈ ಸುದ್ದಿ ಓದಿದ್ದೀರಾ? ಹಾಸನ | ಆನೆ ದಾಳಿ; ಅರಣ್ಯ ಇಲಾಖೆ ಸಿಬ್ಬಂದಿ ಸಾವು
ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಅಧಿಕಾರಿಗಳ ತಂಡ ಭೇಟಿ ನೀಡಿ ಹುಲಿಯ ಕಳೇಬರದ ಮರಣೋತ್ತರ ಪರೀಕ್ಷೆ ನಡೆಸಿ ಸ್ಥಳದಲ್ಲೇ ಒಣಕಟ್ಟಿಗೆಯಿಂದ ಇದನ್ನು ಸುಟ್ಟಿದ್ದಾರೆ.




