ಚಾಮರಾಜನಗರ | ‘ಹಸಿರು ನಾಳೆ ಮಲೆ ಮಹದೇಶ್ವರ ಬೆಟ್ಟ’ ನೂತನ ಯೋಜನೆಗೆ ತ್ರಿಪಕ್ಷೀಯ ಒಡಂಬಡಿಕೆ

Date:

ಪ್ರಸಿದ್ದ ಯಾತ್ರಾ ಕ್ಷೇತ್ರ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ ಮೂರು ವರ್ಷಗಳ ಅವಧಿಯಲ್ಲಿ ಸಮಗ್ರ ತ್ಯಾಜ್ಯ ನಿರ್ವಹಣೆಯ ಉದ್ದೇಶದ ಸಲುವಾಗಿ “ಹಸಿರು ನಾಳೆ, ಮಲೆ ಮಹದೇಶ್ವರ ಬೆಟ್ಟ” ಎಂಬ ಮಹತ್ತರ ಯೋಜನೆ ಅನುಷ್ಠಾನಕ್ಕಾಗಿ ತ್ರಿಪಕ್ಷೀಯ ಒಡಂಬಂಡಿಕೆ ಮಾಡಿಕೊಳ್ಳಲಾಗಿದೆ.

ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಶಿಲ್ಪಾನಾಗ್, ಮೈಸೂರು ಕಾವೇರಿ ಪ್ರಾದೇಶಿಕ ಸಂಸ್ಥೆಯ ಉಪಾಧ್ಯಕ್ಷ ತ ಮ ವಿಜಯ ಭಾಸ್ಕರ್, ಜಿಲ್ಲಾ ಪಂಚಾಯತ್ ಸಿಇಒ ಮೋನಾ ರೋತ್ ಅವರ ಸಮ್ಮುಖದಲ್ಲಿ ಮಲೈ ಮಹದೇಶ್ವರ ಸ್ವಾಮಿ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಎ ಇ ರಘು, ಮೈಸೂರು ಕಾವೇರಿ ಪ್ರಾದೇಶಿಕ ಸಂಸ್ಥೆಯ ಕಾರ್ಯ ನಿರ್ವಾಹಕ ನಿರ್ದೇಶಕ ಅಶ್ರಪ್ ಉಲ್ ಹಸನ್ ಹಾಗೂ ಮಲೆ ಮಹದೇಶ್ವರ ಬೆಟ್ಟ ಗ್ರಾಮ ಪಂಚಾಯಿತಿ ಪಿಡಿಒ ಕಿರಣ್ ಯೋಜನೆ ಅನುಷ್ಠಾನದ ಒಪ್ಪಂದಕ್ಕೆ ಸಹಿ ಹಾಕಿದರು.

‘ಹಸಿರು ನಾಳೆ, ಮಲೆ ಮಹದೇಶ್ವರ ಬೆಟ್ಟ’ (ಗ್ರೀನ್ ಟುಮಾರೊ, ಎಂಎಂ ಹಿಲ್) ಯೋಜನೆಯು ಮೂರು ವರ್ಷಗಳದ್ದಾಗಿದ್ದು, ತ್ಯಾಜ್ಯ ನಿರ್ವಹಣೆಯ ಎಲ್ಲ ವಿಭಾಗಗಳಲ್ಲಿ ಸಮರ್ಪಕವಾಗಿ ಯೋಜನೆ ಅನುಷ್ಠಾನವಾಗಲಿದೆ. ಎಲ್ಐಸಿ, ಹೆಚ್ಎಫ್ಎಲ್ ಸಂಸ್ಥೆಯು ಯೋಜನೆಗೆ ಅಗತ್ಯವಾದ ಅನುದಾನದ ನೆರವು ನೀಡಲಿದ್ದು, ಮೈಕಾಪ್ಸ್ ಸಂಸ್ಥೆಯು ಯೋಜನೆ ಅನುಷ್ಠಾನ ನಿರ್ವಹಣೆ ಹೊತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಯೋಜನೆಯು ಮಲೆ ಮಹದೇಶ್ವರ ಬೆಟ್ಟವನ್ನು ಹಸಿರುಮಯವಾಗಿಸುವ ಖಾತರಿಯೊಂದಿಗೆ ಅಗತ್ಯವಿರುವ ಸಮಗ್ರ ತ್ಯಾಜ್ಯ ನಿರ್ವಹಣೆ ಯೋಜನೆ, ತ್ಯಾಜ್ಯ ಸಂಗ್ರಹ ವ್ಯವಸ್ಥೆಯನ್ನು ಸುಸ್ಥಿರಗೊಳಿಸುವ, ತ್ಯಾಜ್ಯ ಸಂಗ್ರಹಣೆಯಿಂದ ಬರುವ ಆದಾಯವನ್ನು ಸ್ಥಳೀಯವಾಗಿ ನೀಡುವುದು ಸೇರಿದಂತೆ ಒಟ್ಟಾರೆ ವೈಜ್ಞಾನಿಕವಾಗಿ ತ್ಯಾಜ್ಯ ನಿರ್ವಹಣೆ ಮಾಡುವ ಉದ್ದೇಶ ಹೊಂದಿದೆ.

ಮೈಕಾಪ್ಸ್ ಸಂಸ್ಥೆಯ ಉಪಾಧ್ಯಕ್ಷ ತ ಮ ವಿಜಯ ಭಾಸ್ಕರ್ ಮಾತನಾಡಿ, “ಕಾವೇರಿ ಪ್ರಾದೇಶಿಕ ಸಂಸ್ಥೆಯು ಕಾವೇರಿ ನದಿಯ ಜಿಲ್ಲೆಗಳಲ್ಲಿ ಬಹುಮುಖ್ಯ ಯೋಜನೆಗಳನ್ನು ಜಾರಿಗೆ ತರುವಲ್ಲಿ ಮುಂದಾಗಿದೆ. ದಕ್ಷಿಣ ಕರ್ನಾಟಕದ ಚಾಮರಾಜನಗರ ಜಿಲ್ಲೆಗೆ ಅನುಕೂಲವಾಗುವ ಇನ್ನೂ ಹೆಚ್ಚು ಪ್ರಾಜೆಕ್ಟ್‌ಗಳನ್ನು ತೆಗೆದುಕೊಳ್ಳಲಿದ್ದೇವೆ. ಅಧಿಕ ಕೆಲಸ ಕಾರ್ಯಗಳನ್ನು ಜಿಲ್ಲೆಯಲ್ಲಿ ಕೈಗೊಳ್ಳಲಿದ್ದೇವೆ” ಎಂದರು.

“ಪ್ರಸ್ತುತ ಮಲೆ ಮಹದೇಶ್ವರ ಬೆಟ್ಟದಲ್ಲಿ ಅನುಷ್ಠಾನ ಮಾಡಲಿರುವ ಮಹತ್ವದ ಹಸಿರು ಯೋಜನೆಯನ್ನು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಲೈ ಮಹದೇಶ್ವರ ಸ್ವಾಮಿ ಕ್ಷೇತ್ರಾಭಿವೃದ್ದಿ ಪ್ರಾಧಿಕಾರದ ಸಮನ್ವಯ ಸಹಕಾರದೊಂದಿಗೆ ಯಶಸ್ವಿಯಾಗಿ ಮಾಡೋಣ. ಈ ನಿಟ್ಟಿನಲ್ಲಿ ನಮ್ಮ ಸಂಸ್ಥೆ ಬದ್ದತೆಯಿಂದ ಕಾರ್ಯನಿರ್ವಹಿಸಲಿದೆ” ಎಂದರು.

ಜಿಲ್ಲಾಧಿಕಾರಿ ಶಿಲ್ಪಾನಾಗ್ ಮಾತನಾಡಿ, “ಮಲೆ ಮಹದೇಶ್ವರ ಬೆಟ್ಟಕ್ಕೆ ರಾಜ್ಯದ ವಿವಿಧ ಜಿಲ್ಲೆಗಳು ಅಲ್ಲದೇ ತಮಿಳುನಾಡಿನಿಂದಲೂ ಸಾಕಷ್ಟು ಭಕ್ತಾಧಿಗಳು ಬರುತ್ತಿದ್ದಾರೆ. ಜಾತ್ರಾ ಸಂದರ್ಭದಲ್ಲಂತು ತ್ಯಾಜ್ಯ ನಿರ್ವಹಣೆ ಬಹು ಸವಾಲಿನ ಕಾರ್ಯವಾಗಿದೆ. ಇದೀಗ ಮೈಕಾಪ್ಸ್ ಸಂಸ್ಥೆಯು ತ್ಯಾಜ್ಯ ನಿರ್ವಹಣೆ ಯೋಜನೆ ಅನುಷ್ಠಾನಕ್ಕೆ ಮುಂದಾಗಿರುವುದು ಅತ್ಯಂತ ಅಭಿನಂದನೀಯ ಹಾಗೂ ಉಪಯೋಗಿ ಕಾರ್ಯವಾಗಿದೆ” ಎಂದರು.

“ಮಲೆ ಮಹದೇಶ್ವರ ಬೆಟ್ಟದ ಕ್ಷೇತ್ರದಲ್ಲಿ ಅತ್ಯಂತ ಯೋಜಿತ ಹಾಗೂ ವೈಜ್ಞಾನಿಕವಾಗಿ ತ್ಯಾಜ್ಯ ನಿರ್ವಹಣೆ ಮಾಡುವುದು ಅಗತ್ಯವಾಗಿತ್ತು. ಈ ನಿಟ್ಟಿನಲ್ಲಿ ಯೋಜನೆ ಕಾರ್ಯಗತಗೊಳಿಸಲು ಸರಿಯಾದ ಸಮಯಕ್ಕೆ ತ್ರಿಪಕ್ಷೀಯ ಒಪ್ಪಂದವಾಗಿದೆ. ಜಿಲ್ಲಾಡಳಿತವು ಪ್ರಾಧಿಕಾರ, ಅರಣ್ಯ ಇಲಾಖೆ ಸಹಯೋಗದೊಂದಿಗೆ ಪ್ಲಾಸ್ಟಿಕ್ ಮುಕ್ತ ಮಹದೇಶ್ವರ ಬೆಟ್ಟ ಎಂಬ ಕಾರ್ಯವನ್ನು ರೂಪಿಸಿದ್ದು, ಈ ದಿಸೆಯಲ್ಲಿ ಮುಂದಾಗಿದ್ದೆವು. ವೈಜ್ಞಾನಿಕ ತ್ಯಾಜ್ಯ ನಿರ್ವಹಣೆಯ ಮೂರು ವರ್ಷಗಳ ನೂತನ ಯೋಜನೆಯಿಂದ ಅನುಕೂಲವಾಗಲಿದೆ” ಎಂದು ಜಿಲ್ಲಾಧಿಕಾರಿ ತಿಳಿಸಿದರು.

“ಯೋಜನೆಗೆ ಅಗತ್ಯವಾದ ಎಲ್ಲ ಸಹಕಾರ ನೀಡಲಿದ್ದೇವೆ. ಎಲ್ಲ ಇಲಾಖೆಗಳು ಒಂದಾಗಿ ಕೆಲಸ ಮಾಡಲಿವೆ. ರಚನಾತ್ಮಕವಾಗಿ ಯೋಜನೆ ಫಲಪ್ರದವಾಗಲು ಅಧಿಕಾರಿಗಳು ಹೊಣೆಗಾರಿಕೆಯಿಂದ ಕಾರ್ಯ ನಿರ್ವಹಿಸಲಿದ್ದಾರೆ. ಹಸಿರು ಮಹದೇಶ್ವರ ಬೆಟ್ಟ ಯೋಜನೆ ಸಾಕಾರಕ್ಕಾಗಿ ಪ್ರತಿ ಹಂತದಲ್ಲಿಯೂ ಗಮನ ಹರಿಸಲಾಗುವುದು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಕೊಡಗು | ಮಕ್ಕಳ ಮಾನಸಿಕತೆ, ಬೌದ್ಧಿಕ ಜ್ಞಾನದ ಮೇಲೆ ಮೊಬೈಲ್ ತರಂಗಗಳ ದುಷ್ಪರಿಣಾಮ: ಡಾ ಸೌರೇಶ್ ಹೆಗಡೆ

ಕಾರ್ಯನಿರ್ವಾಹಕ ನಿರ್ದೇಶಕ ಅಶ್ರಪ್ ಉಲ್ ಹಸನ್ ಮಾತನಾಡಿ, “ಈಗಾಗಲೇ ಯೋಜನೆ ಸಂಬಂಧ ಭಾಗೀದಾರರ ಸಭೆ ನಡೆಸಲಾಗಿದೆ. ಸರ್ವೆ ಸಮೀಕ್ಷೆ ಕಾರ್ಯಗಳನ್ನು ಆರಂಭಿಸಲಾಗಿದೆ. ನಮ್ಮ ಸಂಸ್ಥೆಯಿಂದ ಸ್ಥಳೀಯರನ್ನು ಸಿಬ್ಬಂದಿಯಾಗಿ ನಿಯೋಜಿಸಿಕೊಂಡಿದ್ದೇವೆ. ಯೋಜನೆಗಾಗಿ ಅಗತ್ಯವಿರುವ ಸಹಕಾರವನ್ನು ಬಯಸುತ್ತೇವೆ” ಎಂದು ತಿಳಿಸಿದರು.

ಜಿಲ್ಲಾ ಪಂಚಾಯತ್ ಸಿಇಒ ಮೋನಾ ರೋತ್, ಮುಖ್ಯ ಯೋಜನಾಧಿಕಾರಿ ಕಿರಣ್ ಪಡ್ನೇಕರ್, ಮೈಕಾಪ್ಸ್ ಸಂಸ್ಥೆಯ ಕಾರ್ಯಕ್ರಮ ಅಧಿಕಾರಿ ಕೆ ಎಸ್ ವಿಶ್ವ ಕಿರಣ್ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...