ಚಾಮರಾಜನಗರ | ಕಾಯಕ ಶರಣರ ವಚನಗಳು ಇಂದಿಗೂ ಪ್ರಸ್ತುತ: ಜ್ಞಾನಪ್ರಕಾಶ ಸ್ವಾಮೀಜಿ

Date:

ಕಾಯಕ ಶರಣರ ವಚನಗಳೇ ಇಂದಿನ ಸಂವಿಧಾನವಾಗಿದೆ. ಐವರೂ ಕೂಡ ಜಾತಿ, ಧರ್ಮ, ವರ್ಣ, ವರ್ಗವನ್ನು ಮೀರಿದವರು. ಅವರ ವಚನಗಳು ಇಂದಿಗೂ ಪ್ರಸ್ತುತ’ ಎಂದು ಮೈಸೂರಿನ ಉರಿಲಿಂಗಿ ಪೆದ್ದಿಮಠದ ಜ್ಞಾನಪ್ರಕಾಶ ಸ್ವಾಮೀಜಿ ಅಭಿಪ್ರಾಯಪಟ್ಟರು.

ಚಾಮರಾಜನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ವರನಟ ಡಾ. ರಾಜ್‌ಕುಮಾರ್ ಜಿಲ್ಲಾ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಶನಿವಾರ ಆಯೋಜಿಸಿದ್ದ ʼಕಾಯಕ ಶರಣರ ಜಯಂತಿʼ ಕಾರ್ಯಕ್ರಮದಲ್ಲಿ ಮಾತನಾಡಿದರು.

“ಬಸವಣ್ಣನವರ ಅನುಭವ ಮಂಟಪದಲ್ಲಿ ಎಲ್ಲ ವರ್ಗದ ಶರಣರಿದ್ದರು. ಅವರಲ್ಲಿ ಮಾದಾರ ಚನ್ನಯ್ಯ, ಸಮಗಾರ ಹರಳಯ್ಯ, ಉರಿಲಿಂಗಿಪೆದ್ದಿ, ಮಾದಾರ ದೂಳಯ್ಯ, ಡೋಹರ ಕಕ್ಕಯ್ಯ ಎಂಬ ಐವರು ಕಾಯಕ ಶರಣರು ಪ್ರಮುಖರಾಗಿದ್ದರು. ಅವರ ಜೀವನ ಹಾಗೂ ಮೌಲ್ಯಗಳನ್ನು ಸಮಾಜಕ್ಕೆ ಬಿತ್ತರಿಸುವ ನಿಟ್ಟಿನಲ್ಲಿ ಸರ್ಕಾರ ಶರಣರ ಜಯಂತಿ ಆಚರಣೆ ಮಾಡುತ್ತಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಈಗ ಜನರ ನಡೆ ಒಂದು ಕಡೆ, ನುಡಿ ಒಂದು ಕಡೆ ಇದೆ. ಬೇಡುವವರ ಸಂಖ್ಯೆ ಜಾಸ್ತಿಯಾಗಿದೆ. ನಡೆ, ನುಡಿ ಒಂದಾಗದ ಕಾರಣ ಆಸ್ಪತ್ರೆಗಳು, ಕಾಯಿಲೆಗಳು ಹೆಚ್ಚಾಗುತ್ತಿವೆ. ಗೂಗಲ್‌ನಿಂದಾಗಿ ಪುಸ್ತಕ ಸಂಸ್ಕೃತಿ ನಾಶವಾಗುತ್ತಿದೆ. ಮಾದಾರ ಚನ್ನಯ್ಯ ಅವರು ಕಾಯಕಕ್ಕೆ ಹೆಚ್ಚು ಗೌರವ ತಂದು ಕೊಟ್ಟರು. ಉರಿಲಿಂಗಿಪೆದ್ದಿ ಅವರ 366, ಮಾದಾರ ಚನ್ನಯ್ಯ 12, ಡೋಹಾರ ಕಕ್ಕಯ್ಯ 13, ಮಾದಾರ ದೂಳಯ್ಯ ಅವರ 33 ವಚನಗಳು ಲಭ್ಯವಿದ್ದು, ಇವುಗಳು ಮಾನವೀಯ ಮೌಲ್ಯಗಳನ್ನು ಹೊಂದಿವೆ” ಎಂದರು.

“ಪ್ರಸ್ತುತದಲ್ಲಿ ನಾವು ಮನುಷ್ಯರ ಭಾರತ ಕಟ್ಟಬೇಕಿದೆ. ಭಾರತದ ಸಂವಿಧಾನ ಮಹತ್ತರವಾದದ್ದು. 12ನೇ ಶತಮಾನದಲ್ಲಿ ವಚನಗಳು ಹಾಗೂ ಬುದ್ದನ ಕಾಲದಲ್ಲಿ ತ್ರಿಪಿಟಕಗಳೇ ಸಂವಿಧಾನವಾಗಿದ್ದವು. ಸಮಸಮಾಜ ನಿರ್ಮಾಣಕ್ಕಾಗಿ ಶರಣರ ವಚನಗಳನ್ನು ಅಧ್ಯಯನ ಮಾಡಬೇಕು” ಎಂದು ಸ್ವಾಮೀಜಿ ಸಲಹೆ ನೀಡಿದರು.

ಶಾಸಕ ಸಿ ಪುಟ್ಟರಂಗಶೆಟ್ಟಿ ಮಾತನಾಡಿ, “ಪ್ರಸ್ತುತ ದಿನಗಳಲ್ಲಿ ಧರ್ಮದ ಹೆಸರಿನಲ್ಲಿ ಕಚ್ಚಾಟ ನಡೆಸಿ ಸಮಾಜದ ಶಾಂತಿ ಕದಡುತ್ತಿರುವುದು ವಿಪರ್ಯಾಸ. ಅಸ್ಪೃಶ್ಯತೆ ಹೋಗಲಾಡಿಸಲು ಸರ್ಕಾರ ಅನೇಕ ಕಾನೂನುಗಳನ್ನು ಜಾರಿಗೆ ತಂದಿದೆ. ಕಾಯಕ ಶರಣರ ವಚನಗಳ ಅಧ್ಯಯನದ ಮೂಲಕ ಸಮಾಜದಲ್ಲಿರುವ ಕಂದಾಚಾರ, ಜಾತಿ ಪದ್ಧತಿಗಳನ್ನು ಹೋಗಲಾಡಿಸಬೇಕು” ಎಂದು ಹೇಳಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಗೀತಾ ಹುಡೇದ ಮಾತನಾಡಿ, “12ನೇ ಶತಮಾನದಲ್ಲಿದ್ದ ಶರಣರು ಸಮಾಜದಲ್ಲಿದ್ದ ಅಂಕುಡೊಂಕುಗಳ ಕುರಿತು ಸರಳ ಭಾಷೆಯ ಮೂಲಕ ಸಾಮಾನ್ಯ ಜನರಿಗೆ ತಿಳಿಸುವ ಕಾರ್ಯ ಮಾಡಿದರು. ವಿದ್ಯಾರ್ಥಿಗಳು ಶರಣರ ವಚನಗಳನ್ನು ಅಧ್ಯಯನ ಮಾಡಬೇಕು. ಆಗ ಮಾತ್ರ ಪರಿಪೂರ್ಣ ವ್ಯಕ್ತಿತ್ವ ನಿರ್ಮಾಣವಾಗುತ್ತದೆ. ವಿದ್ಯಾರ್ಥಿಗಳು ಮೊಬೈಲ್ ಬಳಕೆ ಮಾಡುವುದನ್ನು ಕಡಿಮೆ ಮಾಡಿ ಓದಿನ ಕಡೆ ಗಮನ ಕೊಡಬೇಕು. ಹೆಚ್ಚೆಚ್ಚು ಪುಸ್ತಕಗಳನ್ನು ಅಧ್ಯಯನ ಮಾಡಬೇಕು” ಎಂದರು.

ಈ ಸುದ್ದಿ ಓದಿದ್ದೀರಾ? ರಾಯಚೂರು ಜಿಲ್ಲೆಯ ಅಭಿವೃದ್ಧಿ ಸಂಪೂರ್ಣ ಕಡೆಗಣಿಸಿದ್ದಾರೆ: ಪಾರಸಮಲ್ ಸುಖಾಣ

ಪ್ರಗತಿಪರ ಹೋರಾಟಗಾರ ಸಿ ಎಂ ಕೃಷ್ಣಮೂರ್ತಿ, ಕನ್ನಡಪರ ಹೋರಾಟಗಾರರು ನಾಗರಾಜು, ರವಿಕುಮಾರ್, ಕಲಾವಿದರುಗಳಾದ ದೊಡ್ಡಗವಿ ಬಸಪ್ಪ, ನಿಂಗಶೆಟ್ಟಿ, ಗಾಯಕ ಸಿ ಎಂ ನರಸಿಂಹಮೂರ್ತಿ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...