ಚಾಮರಾಜನಗರ | ಶಾಲಾ ಕೊಠಡಿಗೆ ನುಗ್ಗಿದ ಕರಡಿ

Date:

ರಾತ್ರಿ ವೇಳೆ ಕರಡಿಯೊಂದು ಶಾಲಾ ಕೊಠಡಿಗೆ ನುಗ್ಗಿ, ಪೀಠೋಪಕರಣಗಳನ್ನು ಹಾನಿ ಮಾಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದಿದೆ.

ತಾಲೂಕಿನ ಸಂದನಪಾಳ್ಯದಲ್ಲಿರುವ ಸಂತ ಅಂಥೋಣಿ ಪ್ರೌಢಶಾಲೆಯಲ್ಲಿ ಗುರುವಾರ ರಾತ್ರಿ ಘಟನೆ ನಡೆಸಿದೆ. ಶಿಕ್ಷಕರ ವಿಶ್ರಾಂತಿ ಕೊಠಡಿಯ ಬಾಗಿಲು ಮುರಿದು ಕರಡಿ ಒಳ ನುಗ್ಗಿದೆ. ಕೊಠಡಿಯಲ್ಲಿ ಆಹಾರ ಪದಾರ್ಥಗಳನ್ನು ತಿಂದು, ಪೀಠೋಪಕರಗಳನ್ನು ಮುರಿದು ಹಾಕಿದೆ. ಕರಡಿ ದಾಳಿಯ ದೃಶ್ಯಗಳು ಶಾಕೆಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿವೆ ಎಂದು ತಿಳಿದುಬಂದಿದೆ.

ಮುರುದಿನ (ಶುಕ್ರವಾರ) ಶಾಲೆಯ ಮುಖ್ಯಶಿಕ್ಷಕ ಶಾಲೆಗೆ ಬಂದಾಗ ಘಟನೆ ನಡೆದಿರುವುದು ಗೊತ್ತಾಗಿದೆ. ಅವರು ಕೊಠಡಿಯನ್ನು ಪರಿಶೀಲನೆ ನಡೆಸಿದ್ದು, ಪುಸ್ತಕ, ಆಹಾರ ಸಾಮಗ್ರಿಗಳು ಹಾಗೂ ಪೀಠೋಪಕರಣಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿರುವುದು ಕಂಡುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಳಿಕ, ಅವರು ಸಿಸಿಟಿವಿ ಪರಿಶೀಲಿಸಿದ್ದು, ಕರಡಿ ದಾಳಿ ಮಾಡಿರುವುದು ಗೊತ್ತಾಗಿದೆ. ಮುಖ್ಯಶಿಕ್ಷಕರು ಘಟನೆ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿಗಳು ಬಂದು ಪರಿಶೀಲನೆ ನಡೆಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...