ಚಾಮರಾಜನಗರ | ಕೃಷಿ ಇಲಾಖೆಯಲ್ಲಿ ಭ್ರಷ್ಟಾಚಾರ; ತಪ್ಪಿತಸ್ಥರ ವಿರುದ್ದ ತನಿಖೆಗೆ ಯರಿಯೂರು ರಾಜಣ್ಣ ಆಗ್ರಹ

Date:

ಕೃಷಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆಸಿರುವ ಕೊಳ್ಳೇಗಾಲ ಮತ್ತು ಹನೂರು ಸಹಾಯಕ ಕೃಷಿ ನಿರ್ದೇಶಕರು ಹಾಗೂ ಹನೂರು ತಾಲೂಕು ಲೊಕ್ಕನಹಳ್ಳಿ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ವಿರುದ್ದ ಸಮಗ್ರ ತನಿಖೆ ನಡೆಸಿ ಸೇವೆಯಿಂದ ಅಮಾನತುಗೊಳಿಸಬೇಕು ಎಂದು ದಲಿತ ಸಂಘರ್ಷ ಸಮಿತಿ ಚಾಮರಾಜನಗರ ಜಿಲ್ಲಾ ಸಂಚಾಲಕ ಸಿ ರಾಜಣ್ಣ ಯರಿಯೂರು ಒತ್ತಾಯಿಸಿದರು.

ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, “ಕೊಳ್ಳೇಗಾಲ ಹನೂರು ತಾಲೂಕುಗಳಲ್ಲಿ 2008-09 ರಿಂದ 2023-24ನೇ ಸಾಲಿನವರೆಗೂ  ಕಾರ್ಯನಿರ್ವಹಿಸಿರುವ ಅವಧಿಯಲ್ಲಿ ಜಲಾನಯನ ಅಭಿವೃದ್ಧಿ ಇಲಾಖೆಯಲ್ಲಿ ಅನೇಕ ಜನಪರ, ರೈತರು ಹಾಗೂ ಕೃಷಿಯೇತರರು, ಕೃಷಿ ಕಾರ್ಮಿಕರಿಗೆ ಹಾಗೂ ನಿರುದ್ಯೋಗ ಬಡ ಮಹಿಳೆಯರಿಗೆ ಅನೇಕ ಅನುಕೂಲಗಳು ಸಿಗಲೆಂದು ರೈತರು ಆರ್ಥಿಕವಾಗಿ ಸಬಲರಾಗಲು ಮಳೆ ಆಶ್ರಯ ಭೂಮಿಯಲ್ಲಿ ಅಂತರ್ಜಲ ಹೆಚ್ಚಿಸಲು ಮಣ್ಣು ಮತ್ತು ನೀರು ಸಂರಕ್ಷಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರ ನಾನಾ ಇಲಾಖೆಗಳ ಮೂಲಕ ಕೋಟ್ಯಾಂತರ ರೂ.ಅನುದಾನ ಬಿಡುಗಡೆ ಮಾಡಿದೆ” ಎಂದು ಹೇಳಿದರು.

“ಈ ಯೋಜನೆಗಳಲ್ಲಿ ನಡೆದಿರುವ ಎಲ್ಲ ಕಾಮಕಾರಿಗಳು ಸಂಪೂರ್ಣ ಕಳೆಪೆ ಕಾಮಗಾರಿಯಾಗಿದ್ದು, ಸಂಪೂರ್ಣ ಹಾಳಾಗಿರುತ್ತವೆ. ಕೆಲವು ಕಾಮಗಾರಿಗಳನ್ನು ಕೆಲಸ ಮಾಡದೆ ಪುಸ್ತಕ, ಪೇಪರ್‌ಗಳಲ್ಲಿ ಕೆಲಸ ತೋರಿಸಿ ನಕಲಿ ಬಿಲ್‌ಗಳನ್ನು ತಯಾರಿಸಿ ತಮಗಿಷ್ಟ ಬಂದ ಗುತ್ತಿಗೆದಾರರ ಹೆಸರಿನಲ್ಲಿ ಬಿಲ್ ಮಾಡಿಸಿ ಗುತ್ತಿಗೆದಾರರಿಗೆ ಇಂತಿಷ್ಟು ಎಂಬಂತೆ ಶೇಕಡಾವಾರು ಹಣ ನೀಡಿ, ಉಳಿಕೆ ಹಣವನ್ನು ಕೃಷಿ ಇಲಾಖೆಯಲ್ಲಿ ಭ್ರಷ್ಟಾಚಾರ ನಡೆಸಿರುವ ಕೊಳ್ಳೇಗಾಲ ಮತ್ತು ಹನೂರು ಸಹಾಯಕ ಕೃಷಿ ನಿರ್ದೇಶಕಿ ಸುಂದರಮ್ಮ ಹಾಗೂ ಹನೂರು ತಾಲೂಕು ಲೊಕ್ಕನಹಳ್ಳಿ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ವೆಂಕಟನಾಯಕ ಕಬಳಿಸಿದ್ದಾರೆ” ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ತಪ್ಪಿತಸ್ಥರ ವಿರುದ್ದ ಸಮಗ್ರ ತನಿಖೆ ನಡೆಸಿ, ಅವರನ್ನು ಸೇವೆಯಿಂದ ಅಮಾನತು ಮಾಡಬೇಕೆಂದು ಈಗಾಗಲೇ  ಸಂಬಂಧಪಟ್ಟ ಮೇಲಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿದೆ. ಜಿಲ್ಲಾಧಿಕಾರಿಯವರು ಈ ಕುರಿತು ತನಿಖೆ ಮಾಡಿಸಿ ಕ್ರಮಕೈಗೊಳ್ಳಬೇಕು” ಎಂದು ಯರಿಯೂರು ರಾಜಣ್ಣ ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ದಕ್ಷಿಣ ಕನ್ನಡ | ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ಯೋಜನೆ ರೂಪಿಸಿ: ಸಚಿವ ರಹೀಂ ಖಾನ್

ಪತ್ರಿಕಾಗೋಷ್ಟಿಯಲ್ಲಿ  ಜಿಲ್ಲಾ ಸಂಘಟನಾ ಸಂಚಾಲಕ ನಂಜುಂಡಸ್ವಾಮಿ, ದೊರೆಸ್ವಾಮಿ (ಜಾನಿ)  ತಾಲೂಕು ಸಂಚಾಲಕರುಗಳಾದ ಅನಿಲ್‌ಕುಮಾರ್ ಚಾಮರಾಜನಗರ,  ಮಂಜುಸ್ವಾಮಿ ಹನೂರು, ಸುರೇಂದ್ರಕೊಳ್ಳೇಗಾಲ, ರಂಗಸ್ವಾಮಿ ಗುಂಡ್ಲುಪೇಟೆ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...