ಚಾಮರಾಜನಗರ | ಪಾದಯಾತ್ರಿಕನ ಬಲಿ ಪಡೆದಿದ್ದ ಚಿರತೆ ಸೆರೆ: ಮೃತನ ಕುಟುಂಬಕ್ಕೆ 5 ಲಕ್ಷ ರೂ. ಚೆಕ್‌ ವಿತರಣೆ

Date:

ಮಲೆ ಮಹದೇಶ್ವರ ಬೆಟ್ಟಕ್ಕೆ ಹೋಗುತ್ತಿದ್ದ ಪಾದಯಾತ್ರಿಕನ ಬಲಿ ಪಡೆದಿದ್ದ ಚಿರತೆಯನ್ನು ಅರಿವಳಿಕೆ ಚುಚ್ಚು ಮದ್ದು ನೀಡಿ ಸೆರೆ ಹಿಡಿಯುವಲ್ಲಿ ಚಾಮರಾಜನಗರ ಜಿಲ್ಲೆಯ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.

ಮಂಡ್ಯ ತಾಲೂಕಿನ ಚಿರನಹಳ್ಳಿ ಗ್ರಾಮದ ಪ್ರವೀಣ್​ ಹಾಗೂ ಸ್ನೇಹಿತರು ಜನವರಿ 21ರಂದು ಪಾದಯಾತ್ರೆಯ ಮೂಲಕ ತಾಳಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ಹೊರಟಿದ್ದರು. ರಂಗಸ್ವಾಮಿ ಒಡ್ಡಿನ ಸಮೀಪ ಪಾದಯಾತ್ರೆ ತೆರಳುತ್ತಿದ್ದ ಪ್ರವೀಣನ ಮೇಲೆ ಚಿರತೆ ದಾಳಿ ನಡೆಸಿ ಅರಣ್ಯಕ್ಕೆ ಎಳೆದೊಯ್ದು ಕೊಂದಿತ್ತು.

ಘಟನೆ ಬಳಿಕ ರಂಗಸ್ವಾಮಿ ಒಡ್ಡಿನ ಸಮೀಪ ಕಾಣಿಸಿಕೊಳ್ಳುತ್ತಿದ್ದ ಚಿರತೆ ಸೆರೆ ಹಿಡಿಯಲು ಎರಡು ಬೋನುಗಳನ್ನು ಇಡಲಾಗಿತ್ತು. ಬೋನಿನಲ್ಲಿ ಎರಡು ನಾಯಿಗಳನ್ನೂ ಕೂಡ ಕಟ್ಟಿ ಹಾಕಲಾಗಿತ್ತು. ಹಾಗೆಯೇ, ಚಿರತೆ ಕಾರ್ಯಪಡೆ, ಕೂಂಬಿಂಗ್, ಡ್ರೋನ್ ತಂಡ ಸ್ಥಳದಲ್ಲಿಯೇ ಇದ್ದು ಕಾರ್ಯಾಚರಣೆ ಕೈಗೊಂಡಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಲೆ ಮಹದೇಶ್ವರ ವನ್ಯಜೀವಿಧಾಮದ ಡಿಸಿಎಫ್​​ ಭಾಸ್ಕರ್​ ಹಾಗೂ ತಂಡ ಗುರುವಾರ ರಾತ್ರಿ 9.30ರ ಸುಮಾರಿಗೆ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡು ಪಶು ವೈದ್ಯಾಧಿಕಾರಿ ಡಾ. ಆದರ್ಶ್ ಅರಿವಳಿಕೆ ಚುಚ್ಚುಮದ್ದು ನೀಡುವ ಮೂಲಕ ಚಿರತೆ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಅರಿವಳಿಕೆ ಮೇಲಾಧಿಕಾರಿಗಳ ನಿರ್ದೇಶನದಂತೆ ಮುಂದಿನ ಕ್ರಮ ಕೈಗೊಳ್ಳಲ್ಲಿದ್ದಾರೆಂದು ತಿಳಿದುಬಂದಿದೆ.

ಈ ಸುದ್ದಿ ಓದಿದ್ದೀರಾ? ಉಡುಪಿ | ಪರ್ಯಾಯ ಮಹೋತ್ಸವದ ಚಾಲನೆ ವಿವಾದ ಇನ್ನೂ ತಣ್ಣಗಾಗಿಲ್ಲ, ಜಿಲ್ಲಾಧಿಕಾರಿ ನಡೆ ಸಂವಿಧಾನಬಾಹಿರವೇ?

ಚಿರತೆ ದಾಳಿಗೆ ಬಲಿಯಾದ ಪ್ರವೀಣ್ ಕುಟುಂಬಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ ವೆಂಕಟೇಶ್ ಪರಿಹಾರದ ಚೆಕ್ ವಿತರಿಸಿದರು. ಚಾಮರಾಜನಗರದ ಜಿಲ್ಲಾಡಳಿತ ಭವನದಲ್ಲಿ ಗುರುವಾರ ಸಂಜೆ ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಮೃತ ಪ್ರವೀಣ್ ತಾಯಿ ಸುಶೀಲಮ್ಮಗೆ 5 ಲಕ್ಷ ರೂ. ಚೆಕ್ ವಿತರಣೆ ಮಾಡಿ, ಮರಣೋತ್ತರ ಪರೀಕ್ಷೆ ವರದಿ ಬಂದ ಬಳಿಕ ಇನ್ನುಳಿದ 15 ಲಕ್ಷ ರೂಪಾಯಿ ನೀಡಲಾಗುವುದು ಎಂದರು. ಇದೇ ವೇಳೆ, ಸರ್ಕಾರ 20 ಲಕ್ಷ ರೂ. ಹಣವನ್ನು ಪರಿಹಾರದ ರೂಪದಲ್ಲಿ ನೀಡಲಿದೆ. ಆಕಸ್ಮಿಕ ಘಟನೆ ಇದಾಗಿದ್ದು, ಧೈರ್ಯ ತಂದುಕೊಳ್ಳುವಂತೆ ಮೃತನ ಕುಟುಂಬಕ್ಕೆ ಸಚಿವರು ಸಾಂತ್ವನ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಾಮರಾಜನಗರ | ‘ಬಾರುಕೋಲು’ ರಾಸುಗಳಿಗಷ್ಟೇ ಅಲ್ಲಾ, ಸರ್ಕಾರ ದಾರಿ ತಪ್ಪಿದಾಗಲು ದಂಡನಾಸ್ತ್ರವೇ: ರಾಕೇಶ್ ಟಿಕಾಯತ್

ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸಾಮೂಹಿಕ ನಾಯಕತ್ವದ ಕರ್ನಾಟಕ ರಾಜ್ಯ ರೈತ...

ʼಅಮೃತಭೂಮಿ’ ಸೊಬಗು ಕಂಡಿರಾ?

ದಕ್ಷಿಣ ಕರ್ನಾಟಕದ ತಳಭಾಗದಲ್ಲಿರುವ ಚಾಮರಾಜನಗರ ಜಿಲ್ಲೆಯ ಬಿಳಿಗಿರಿರಂಗನ ಬೆಟ್ಟದ ತಪ್ಪಲಿನ ಹೊಂಡರಬಾಳು...

ಗುಂಡ್ಲುಪೇಟೆ | ಅಂತಾರಾಷ್ಟ್ರೀಯ ಬಿಗ್ ಕ್ಯಾಟ್ ಅಲಯನ್ಸ್ ಶೃಂಗಸಭೆ: ರೈತ ಮುಖಂಡರ ಬಂಧನ

ಬಂಡೀಪುರದಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ಬಿಗ್ ಕ್ಯಾಟ್ ಅಲಯನ್ಸ್ ಶೃಂಗಸಭೆ ವಿರೋಧಿಸಿ ಸಾಮೂಹಿಕ...