ಚಾಮರಾಜನಗರ | ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ ಕೆಳಗಡೆ ಹಾರಿ ವ್ಯಕ್ತಿ ಆತ್ಮಹತ್ಯೆ

Date:

ಚಾಮರಾಜನಗರದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಬಳಿ ಬುಧವಾರ ಮಧ್ಯಾಹ್ನ ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನ ಕೆಳಗಡೆ ಹಾರಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡವರು ತಾಲೂಕಿನ ಯಲಕ್ಕೂರು ಗ್ರಾಮದ ರಂಗಸ್ವಾಮಿ (34) ಎಂದು ತಿಳಿದುಬಂದಿದೆ.

ಮಧ್ಯಾಹ್ನ 12.20ಕ್ಕೆ ಈ ಘಟನೆ ನಡೆದಿದ್ದು, ಗುಂಡ್ಲುಪೇಟೆ ಕಡೆಗೆ ತೆರಳುತ್ತಿದ್ದ ಬಸ್‌, ನಿಲ್ದಾಣದಿಂದ ಡೀವಿಯೇಷನ್‌ ರಸ್ತೆಗೆ ಬಂದು 100 ಮೀಟರ್‌ ಮುಂದಕ್ಕೆ ಹೋದಾಗ (ಮಯೂರ ಹೋಟೆಲ್‌ ಎದುರು) ರಸ್ತೆ ಬದಿಯಲ್ಲಿ ನಿಂತಿದ್ದ ರಂಗಸ್ವಾಮಿ ಎಂಬಾತ ಏಕಾಏಕಿ ಹಿಂಬದಿ ಚಕ್ರದ ಬಳಿ ಹಾರಿದ್ದಾರೆ. ಚಕ್ರವು ರಂಗಸ್ವಾಮಿಯವರ ಮೇಲೆ ಹರಿದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತೀವ್ರವಾಗಿ ಗಾಯಗೊಂಡಿದ್ದ ರಂಗಸ್ವಾಮಿಯವರನ್ನು ಕೂಡಲೇ ಆಂಬುಲೆನ್ಸ್‌ನಲ್ಲಿ ಸಿಮ್ಸ್‌ ಬೋಧನಾ ಆಸ್ಪತ್ರೆಗೆ ಕಳುಹಿಸಿದ್ದಾರೆ. ಆದರೆ ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಬಸ್‌ ನಿರ್ವಾಹಕ ನೀಡಿದ ದೂರಿನ ಮೇರೆಗೆ ಪಟ್ಟಣ ಠಾಣೆಯಲ್ಲಿ ದೂರು ದಾಖಲಾಗಿದೆ.

ಈ ಸುದ್ದಿ ಓದಿದ್ದೀರಾ? ಉಡುಪಿ ಪ್ರಕರಣ | ಆರೋಪಿ ಪ್ರವೀಣ್ ಚೌಗಲೆಯನ್ನು 14 ದಿನ ಪೊಲೀಸ್ ಕಸ್ಟಡಿಗೊಪ್ಪಿಸಿದ ನ್ಯಾಯಾಲಯ

“ಮೇಲ್ನೋಟಕ್ಕೆ ಆತ್ಮಹತ್ಯೆಯ ರೀತಿ ಕಂಡುಬಂದಿದೆ. ವ್ಯಕ್ತಿ ಬಸ್‌ ಕೆಳಗಡೆ ಹಾರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪ್ರಕರಣ ದಾಖಲಿಸಿಕೊಂಡಿದ್ದೇವೆ” ಎಂದು ಪಟ್ಟಣ ಠಾಣೆ ಇನ್ಸ್‌ಪೆಕ್ಟರ್‌ ರಾಜೇಶ್‌ ತಿಳಿಸಿದ್ದಾರೆ. ಕೌಟುಂಬಿಕ ಸಮಸ್ಯೆಗಳಿಂದ ರಂಗಸ್ವಾಮಿ ಮನನೊಂದಿದ್ದರು ಎನ್ನಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...