ಚಾಮರಾಜನಗರ | ಆಪರೇಷನ್ 5 ಟೈಗರ್ಸ್​ನಲ್ಲಿ ತಾಯಿ ಹುಲಿ ಸೆರೆ: ಮರಿಗಳ ಸೆರೆಗೆ ಕಾರ್ಯಾಚರಣೆ

Date:

ಚಾಮರಾಜನಗರ ತಾಲೂಕಿನ ನಂಜೇದೇವನಪುರ ಸುತ್ತಮುತ್ತಲು ತಾಯಿ ಹುಲಿ ಜತೆಗೆ ನಾಲ್ಕು ಮರಿಗಳು ಕಾಣಿಸಿಕೊಂಡಿದ್ದು, ಅದರಲ್ಲಿ ಇದೀಗ ತಾಯಿ ಹುಲಿಯನ್ನು ಸೆರೆಹಿಡಿಯಲಾಗಿದೆ.

ನಂಜೇದೇವನಪುರದಲ್ಲಿ ಆಪರೇಷನ್ 5 ಟೈಗರ್ಸ್​ನ ಮೊದಲ‌ ಹಂತ ಯಶ ಕಂಡಿದ್ದು, ತುಮಕೂರು ಮಾದರಿ ಬೋನ್​ ಅಳವಡಿಸಿ ಹಸುವನ್ನು ಕಟ್ಟಲಾಗಿತ್ತು. ಹಸು ಬೇಟೆಗೆ ಬಂದ ತಾಯಿ ಹುಲಿ ಬೋನಿನಲ್ಲಿ ಸೆರೆಯಾಗಿದೆ. ಸೆರೆಯಾದ ತಾಯಿ ಹುಲಿಗೆ 8 ವರ್ಷವಾಗಿರುವುದಾಗಿ ಅಂದಾಜಿಸಲಾಗಿದೆ.

ರೈತ ಕುಮಾರಸ್ವಾಮಿ ಎಂಬುವವರ ಜಮೀನಿನಲ್ಲಿ ಅಳವಡಿಸಿದ್ದ ಸಿಸಿ ಕ್ಯಾಮೆರಾದಲ್ಲಿ ಹುಲಿ ಸಂಚಾರ ದೃಶ್ಯ ಸೆರೆಯಾಗಿತ್ತು. ಬಳಿಕ, ಬಾಳೆ ತೋಟವೊಂದರಲ್ಲಿ ಅಳವಡಿಸಿದ್ದ ತುಮಕೂರು ಮಾದರಿ ಬೋನಿನಲ್ಲಿ ತಾಯಿ ಹುಲಿ ಸೆರೆಯಾಗುವ ಮೂಲಕ ಆಪರೇಷನ್ 5 ಟೈಗರ್ಸ್ ಮೊದಲ ಹಂತದಲ್ಲಿ ಯಶ ಕಂಡಿದ್ದು, 5 ಹುಲಿಗಳ ಪೈಕಿ ತಾಯಿ ಹುಲಿ ಸೆರೆಯಾಗಿದೆ. ಉಳಿದ 4 ಮರಿ ಹುಲಿಗಳ ಸೆರೆಗೆ ಕಾರ್ಯಾಚರಣೆ ಆರಂಭವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸೆರೆ ಸಿಕ್ಕ ತಾಯಿ ಹುಲಿಗೆ ಪಶು ವೈದ್ಯರಿಂದ ಅರವಳಿಕೆ ಮದ್ದು ನೀಡಿ ಅದರ ಆರೋಗ್ಯದ ಸ್ಥಿತಿಗತಿ ಪರಿಶೀಲನೆ ಮಾಡಲಾಗಿದೆ. ತುಮಕೂರು ಮಾದರಿ ಕೇಜ್​ನಿಂದ ನಾರ್ಮಲ್ ಕೇಜ್​ಗೆ ಹುಲಿಯನ್ನು ಸ್ಥಳಾಂತರಿಸಲಾಗಿದೆ. ಇನ್ನು ಅದೇ ಬೋನಿನಲ್ಲಿ ಹುಲಿಯನ್ನು ಇರಿಸಿ ಉಳಿದ ನಾಲ್ಕು ಮರಿ ಹುಲಿಗಳಿಗಾಗಿ ಬಿಆರ್​ಟಿ ಅರಣ್ಯ ಸಿಬ್ಬಂದಿ ಕಾರ್ಯಾಚರಣೆ ನಡೆಸಲಿದ್ದಾರೆ.

ಈಗಾಗಲೇ ಥರ್ಮಲ್ ಡ್ರೋನ್ ಕ್ಯಾಮೆರಾ ತರಿಸಿಕೊಂಡಿರುವ ಅರಣ್ಯ ಸಿಬ್ಬಂದಿ ರಾತ್ರಿಯಿಡೀ ನಾಲ್ಕು ಮರಿ ಹುಲಿಗಳಿಗಾಗಿ ಕಾರ್ಯಾಚರಣೆ ನಡೆಸಿದ್ದಾರೆ. ಮುನ್ನೆಚ್ಚರಿಕೆ ಕ್ರಮವಾಗಿ ನಂಜೇದೇವನಪುರ, ವೀರನಪುರ ಸುತ್ತಮುತ್ತಿನ ಗ್ರಾಮಗಳಲ್ಲಿ 144 ಸೆಕ್ಷನ್ ಜಾರಿಗೊಳಿಸಿ ಚಾಮರಾಜನಗರ ತಹಶೀಲ್ದಾರ್ ಗಿರಿಜಾ ಆದೇಶಿಸಿದ್ದರು.

ಈ ಸುದ್ದಿ ಓದಿದ್ದೀರಾ? ಹಾಸನ | ಬಾಲ್ಯ ವಿವಾಹ, ಬಾಲ ಗರ್ಭಾವಸ್ಥೆ ವಿರುದ್ಧ ಜಾಗೃತಿ: ಕಿರುನಾಟಕ

ಕಳೆದೊಂದು ತಿಂಗಳಿನಿಂದ ಬಿಟ್ಟೂಬಿಡದೆ ಮೂರ್ನಾಲ್ಕು ಗ್ರಾಮಸ್ಥರ ನಿದ್ದೆಗೆಡಿಸಿದ್ದ 5 ಹುಲಿಗಳ ಪೈಕಿ ತಾಯಿ ಹುಲಿ ಅರಣ್ಯ ಸಿಬ್ಬಂದಿ ಇರಿಸಿದ್ದ ಕೇಜ್​ನಲ್ಲಿ ಸೆರೆಯಾಗಿರುವುದರಿಂದ ಗ್ರಾಮಸ್ಥರು ನಿಟ್ಟುಸಿರು ಬಿಡುವಂತಾಗಿದೆ. ಆದರೆ ಈಗ ಸೆರೆ ಸಿಕ್ಕಿದ್ದು ಕೇವಲ ತಾಯಿ ಹುಲಿ ಮಾತ್ರ. ಇನ್ನೂ 4 ಮರಿ ಹುಲಿಗಳ ಸೆರೆಗಾಗಿ ಆಪರೇಷನ್ ಚಾಲ್ತಿಯಲ್ಲಿದೆ. ಆದಷ್ಟು ಶೀಘ್ರ ಮರಿಗಳನ್ನೂ ಸೆರೆ ಹಿಡಿಯುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಾಮರಾಜನಗರ | ‘ಬಾರುಕೋಲು’ ರಾಸುಗಳಿಗಷ್ಟೇ ಅಲ್ಲಾ, ಸರ್ಕಾರ ದಾರಿ ತಪ್ಪಿದಾಗಲು ದಂಡನಾಸ್ತ್ರವೇ: ರಾಕೇಶ್ ಟಿಕಾಯತ್

ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸಾಮೂಹಿಕ ನಾಯಕತ್ವದ ಕರ್ನಾಟಕ ರಾಜ್ಯ ರೈತ...

ʼಅಮೃತಭೂಮಿ’ ಸೊಬಗು ಕಂಡಿರಾ?

ದಕ್ಷಿಣ ಕರ್ನಾಟಕದ ತಳಭಾಗದಲ್ಲಿರುವ ಚಾಮರಾಜನಗರ ಜಿಲ್ಲೆಯ ಬಿಳಿಗಿರಿರಂಗನ ಬೆಟ್ಟದ ತಪ್ಪಲಿನ ಹೊಂಡರಬಾಳು...

ಗುಂಡ್ಲುಪೇಟೆ | ಅಂತಾರಾಷ್ಟ್ರೀಯ ಬಿಗ್ ಕ್ಯಾಟ್ ಅಲಯನ್ಸ್ ಶೃಂಗಸಭೆ: ರೈತ ಮುಖಂಡರ ಬಂಧನ

ಬಂಡೀಪುರದಲ್ಲಿ ನಡೆಯುತ್ತಿರುವ ಅಂತಾರಾಷ್ಟ್ರೀಯ ಬಿಗ್ ಕ್ಯಾಟ್ ಅಲಯನ್ಸ್ ಶೃಂಗಸಭೆ ವಿರೋಧಿಸಿ ಸಾಮೂಹಿಕ...