ಚಾಮರಾಜನಗರ | ಅವೈಜ್ಞಾನಿಕ ರಸ್ತೆ ಕಾಮಗಾರಿ; ಮನೆಗಳು ಜಲಾವೃತವಾಗುವ ಆತಂಕ

Date:

ಕೊಳ್ಳೇಗಾಲ-ಹನೂರು ಮುಖ್ಯ ರಸ್ತೆ ಅಭಿವೃದ್ಧಿ ಕಾಮಗಾರಿಯಿಂದಾಗಿ ಮಂಗಲ ಗ್ರಾಮದ ಕೆಲವಡೆ ಮಳೆ ನೀರು ಮನೆಗಳಿಗೆ ನುಗ್ಗಿರುವ ಘಟನೆ ನಡೆದಿದೆ. ಮಳೆಗಾಲದಲ್ಲಿ ತೀವ್ರ ಮಳೆಯಾದರೆ ಮನೆಗಳು ಜಲಾವೃತವಾಗುವ ಭೀತಿ ಎದುರಾಗಿದೆ.

“ಇತ್ತೀಚೆಗೆ ಸುರಿದ ಧಾರಾಕಾರ ಮಳೆಯಿಂದ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಂಗಲ ಗ್ರಾಮದ ದೊಡ್ಡಕೆರೆಯ ಸಮೀಪ ಹಾದು ಹೋಗಿರುವ ಮುಖ್ಯ ರಸ್ತೆಯ ನೀರು ಪಂಕ್ಚರ್‌ ಅಂಗಡಿ, ರೇಷ್ಮೆ ತಯಾರು ಮಾಡುವ ಕಾರ್ಖಾನೆ ಸೇರಿದಂತೆ ಆಸು ಪಾಸಿನ ಮನೆಗಳಿಗೆ ಮಳೆಯ ನೀರು ನುಗ್ಗಿದೆ. ದೊಡ್ಡಕೆರೆಗೆ ಮಳೆಯ ನೀರಿನ ಸಂಪರ್ಕ ಕಲ್ಪಿಸುವ ಬೃಹತ್ ರಾಜಕಾಲುವೆ ಹಾದು ಹೋಗುವ ಸ್ಥಳದಲ್ಲಿ ಈ ಅವಾಂತರ ಸೃಷ್ಟಿಯಾಗಿದ್ದು, ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ” ಎಂದು ಸ್ಥಳೀಯರು ಅಸಮಧಾನ ವ್ಯಕ್ತಪಡಿಸಿದರು.

“ಬಿ ಗುಂಡಾಪುರ, ಮಂಗಲ ಗ್ರಾಮದ ಜಮೀನುಗಳಿಂದ ಬರುವ ನೀರು ಹರಿದು ಹೋಗುವ ರಾಜಕಾಲುವೆಯ ಮೇಲೆ ನಿರ್ಮಿಸಲಾಗಿರುವ ರಸ್ತೆಯ ಒಂದು ಬದಿ ತುಂಬಾ ತಗ್ಗಾಗಿದೆ. ಹೀಗಾಗಿ ರಸ್ತೆಯ ಮತ್ತೊಂದು ಬದಿಯಿಂದ ಹರಿದು ಬರುವ ನೀರು ತಗ್ಗು ರಸ್ತೆಗೆ ನುಗ್ಗಿ ಸಮೀಪದ ಜನವಸತಿ ಪ್ರದೇಶಗಳಿಗೆ ಹರಿಯುತ್ತಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಹನೂರಿನಿಂದ ಕೊಳ್ಳೇಗಾಲ ಮಾರ್ಗವಾಗಿ ತೆರಳುವ ಎಡಬದಿಯಲ್ಲಿ ನಿರ್ಮಾಣ ಮಾಡಿರುವ ತಗ್ಗು ರಸ್ತೆಯಲ್ಲಿ ನೀರು ಹೋಗಲು ತೆರೆಯಲಾಗಿರುವ ಡೆಕ್‌ಗಳು ಕಿರಿದಾಗಿದ್ದು, ಇಲ್ಲಿ ಸಣ್ಣಪುಟ್ಟ ಕಸ-ಕಡ್ಡಿ, ಪ್ಲಾಸ್ಟಿಕ್ ತ್ಯಾಜ್ಯವೂ ಕೂಡ ಹೋಗುವುದಿಲ್ಲ. ಇದರಿಂದಾಗಿ ಮಳೆ ಬಂದಾಗ ನೀರು ಕಟ್ಟಿಕೊಂಡು ಮುಖ್ಯ ರಸ್ತೆಯಲ್ಲಿ ಮೊಣಕಾಲು ಎತ್ತರಕ್ಕೆ ನೀರು ನಿಲ್ಲುತ್ತದೆ” ಎಂದು ಆತಂಕ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಉಡುಪಿ | ಸಮುದ್ರಕ್ಕೆ ಬಿದ್ದು 43 ಗಂಟೆಗಳ ಕಾಲ ಈಜಿ ಬದುಕುಳಿದ ಮೀನುಗಾರ

“ನಿಗದಿತ ಅವಧಿ ಮುಗಿಯುತ್ತಿದ್ದರೂ ಕಾಮಗಾರಿ ಪೂರ್ಣಗೊಳಿಸಿಲ್ಲ, ಅಲ್ಲದೇ ಅಲ್ಲಲ್ಲಿ ಅವೈಜ್ಞಾನಿಕ ಕಾರ್ಯವೈಖರಿಯಿಂದ ಸಾಕಷ್ಟು ಮನೆಗಳು, ಜಮೀನುಗಳ ಮಾಲೀಕರು ಸಂಕಷ್ಟಕ್ಕೆ ತುತ್ತಾಗುವಂತಾಗಿದೆ” ಎಂದು ಸ್ಥಳೀಯರು ಆರೋಪಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...