ರಾಜ್ಯ ಯುವ ಬರಹಗಾರರ ಒಕ್ಕೂಟ ಹಾಗೂ ಅನುಪಮ ಟ್ರಸ್ಟ್(ರಿ) ಮತ್ತು ಕನ್ನಡ ಸಂಸ್ಕೃತಿ ಇಲಾಖೆ ವತಿಯಿಂದ ಚಾಮರಾಜನಗರದ ವಾಲ್ಮೀಕಿ ಭವನದಲ್ಲಿ ಏರ್ಪಡಿಸಲಾಗಿದ್ದ ವಿಚಾರ ಸಂಕಿರಣ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಶುಕ್ರದೆಸೆ ನ್ಯೂಸ್ ಮೀಡಿಯಾ ಸಂಪಾದಕ, ಪತ್ರಕರ್ತ ದಾವಣಗೆರೆ ಜಿಲ್ಲೆಯ ಎಂ.ರಾಜಪ್ಪ ವ್ಯಾಸಗೊಂಡನಹಳ್ಳಿ ಇವರಿಗೆ ರಾಜ್ಯಮಟ್ಟದ “ಕರ್ನಾಟಕ ಕಲಾ ಭೂಷಣ” ಪ್ರಶಸ್ತಿ ನೀಡಿ ಗೌರವಿಸಿದೆ.

ದಾವಣಗೆರೆ ಜಿಲ್ಲೆ ಜಗಳೂರು ತಾಲ್ಲೂಕಿನ ಬಿಳಿಚೋಡು ಹೋಬಳಿ ಘಟಕದ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರು ಹಾಗೂ ಪತ್ರಕರ್ತ ಎಂ.ರಾಜಪ್ಪ ವ್ಯಾಸಗೊಂಡನಹಳ್ಳಿ ಇವರಿಗೆ ಚಾಮರಾಜನಗರ ಜಿಲ್ಲೆಯ ಅನುಪಮ ಟ್ರಸ್ಟ್ ಮತ್ತು (ರಿ) ರಾಜ್ಯ ಯುವ ಬರಹಗಾರರ ಒಕ್ಕೂಟದ ಮತ್ತು ಕನ್ನಡ ಸಂಸ್ಕೃತಿ ಇಲಾಖೆ ವತಿಯಿಂದ ಏರ್ಪಡಿಸಲಾಗಿದ್ದ ವಿಚಾರ ಸಂಕಿರಣ ವಿವಿಧ ಸಾಂಸ್ಕೃತಿಕ ವಲಯ ಹಾಗೂ ಸಮಾಜದಲ್ಲಿ ಗಣನೀಯ ಸಾಧನೆಗೈದ ಸಾಧಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ರಾಜ್ಯಮಟ್ಟದ “ಕಲಾಭೂಷಣ ಪ್ರಶಸ್ತಿ” ನೀಡಿ ಗೌರವಿಸಲಾಗಿದೆ.
ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಹೃದಯಾಘಾತಕ್ಕೆ ಯುವಕ ಬಲಿ, ಹೃದಯಕ್ಕೇನಾಗಿದೆ?
ಅನುಪಮ ಟ್ರಸ್ಟ್ ಮತ್ತು (ರಿ) ರಾಜ್ಯ ಯುವ ಬರಹಗಾರರ ಒಕ್ಕೂಟ ನಾಡಿನ ಯುವ ಬರಹಗಾರರು ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯರಿಗೆ ಪ್ರತಿ ವರ್ಷ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ ಎಂದು ಅನುಪಮ ಟ್ರಸ್ಡ್ ನ ಸಂಸ್ಥಾಪಕ ಅಧ್ಯಕ್ಷೆ ಡಾ. ಪ್ರೇಮಾ ರವರು ತಿಳಿಸಿದ್ದಾರೆ. ಕಾರ್ಯಕ್ರಮದಲ್ಲಿ ನಾಡಿನ ಗಣ್ಯರು ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರು ಹಾಜುರಿದ್ದು ಕಾರ್ಯಕ್ರಮದ ಯಶಸ್ಸಿಗೆ ಸಾಕ್ಷಿಯಾದರು ಎಂದು ಸ್ಮರಿಸಿಕೊಂಡಿದ್ದಾರೆ.





