ಚಾಮರಾಜನಗರ | ಸಾರ್ವಜನಿಕ ಆಸ್ಪತ್ರೆಗೆ ಹೊಸ ಡಯಾಲಿಸಿಸ್ ಉಪಕರಣ

Date:

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ಸಾರ್ವಜನಿಕ ಆಸ್ಪತ್ರೆಗೆ ‌ʼಒನ್ ಟ್ರಸ್ʼ ಸಂಸ್ಥೆ ಡಯಾಲಿಸಿಸ್ ಉಪಕರಣವನ್ನು ಕೊಡುಗೆಯಾಗಿ ನೀಡಿದೆ. ಶಾಸಕ ಎಚ್.ಎಂ. ಗಣೇಶ್ ಪ್ರಸಾದ್ ಡಯಾಲಿಸಿಸ್ ಉಪಕರಣವನ್ನು ಉದ್ಘಾಟನೆ ಮಾಡಿದ್ದಾರೆ.

ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದು ಶಾಸಕ, “ಆಸ್ಪತ್ರೆಯಲ್ಲಿ ‌ಈಗಾಗಾಲೇ ಎರಡು  ಡಯಾಲಿಸಿಸ್ ಉಪಕರಣಗಳಿವೆ. ಈಗ ಒನ್ ಟ್ರಸ್ಟ್ ಸಂಸ್ಥೆ ಒಂದು ಡಯಾಲಿಸಿಸ್ ಉಪಕರಣವನ್ನು ನೀಡಿದ್ದು, ಇದು ಸೇರಿ ‌ಒಟ್ಟಾರೆ ಮೂರು ಉಪಕರಣಗಳು ಕಾರ್ಯ ನಿರ್ವಹಿಸಲಿವೆ” ಎಂದು ಹೇಳಿದ್ದಾರೆ.

ತಾಲ್ಲೂಕಿನಲ್ಲಿ ಡಯಾಲಿಸಿಸ್ ರೋಗಿಗಳ ಸಂಖ್ಯೆ ಹೆಚ್ಚಿರುವುದರಿಂದ ಎಲ್ಲರಿಗೂ ‌ನಿಗದಿತ ಸಮಯದಲ್ಲಿ ಡಯಾಲಿಸಿಸ್ ‌ಮಾಡಲು ತೊಂದರೆ ಉಂಟಾಗುತಿತ್ತು. ಇದನ್ನು ಅರಣ್ಯ ಸಚಿವರ ಗಮನಕ್ಕೆ ತಂದಾಗ ‌ಸಮಸ್ಯಗೆ ಸ್ಪಂದಿಸಿದ ಸಚಿವರು ತಮ್ಮ ಎನ್ ಜಿಒ‌ ಮೂಲಕ ಡಯಾಲಿಸಿಸ್ ಉಪಕರಣವನ್ನು ಕೊಡುಗೆಯಾಗಿ ನೀಡಿದ್ದಾರೆ ಎಂದು ‌ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಸ್ಪತ್ರೆಯಲ್ಲಿ ಮೂರು ಡಯಾಲಿಸಿಸ್ ಉಪಕರಣಗಳು ಇರುವುದರಿಂದ ರೋಗಿಗಳು ಕಾಯದೇ, ಸರಿಯಾದ ಸಮಯಕ್ಕೆ ‌ಡಯಾಲಿಸಿಸ್ ಮಾಡಿಸಿಕೊಳ್ಳಲು ಅನುಕೂಲವಾಗಲಿದೆ. ಸುಮಾರು 10-12 ಲಕ್ಷ ಮೌಲ್ಯದ ಮಷಿನ್ ಇದಾಗಿದ್ದು‌, ಇಬ್ಬರೂ ಸ್ಟಾಫ್ ನರ್ಸ್ ಮತ್ತು ಒಬ್ಬರು ಡಿ ಗ್ರೂಪ್ ನೌಕರ ಸೇರಿದಂತೆ ಮೂರು ಸಿಬ್ಬಂದಿಗಳು ಕರ್ತವ್ಯ ನಿರ್ವಹಸಲಿದ್ದಾರೆ.

ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಮಂಜುನಾಥ್ ಮಾತನಾಡಿ, ತಾಲೂಕಿನಲ್ಲಿ ಮೂತ್ರಕೋಶದ ತೊಂದರೆಯಿಂದ ಬಳಲುತ್ತಿರುವ ಬಡ ರೋಗಿಗಳಿಗೆ ಈ ಕೇಂದ್ರ ಹೆಚ್ಚು ಅನುಕೂಲವಾಗಲಿದೆ. ರಾಜ್ಯ ಸರ್ಕಾರ ತಾಲೂಕು ಕೇಂದ್ರದ ಆಸ್ಪತ್ರೆಗಳಲ್ಲಿ ಬಡವರಿಗೆ ಡಯಾಲಿಸಿಸ್ ಸೌಲಭ್ಯ ದೊರಕಿಸಿಕೊಡುವ ಸಲುವಾಗಿ ಈ ಸೇವೆಯನ್ನು ಆರಂಭಿಸಿದೆ. ಕೇಂದ್ರಕ್ಕೆ ಅಗತ್ಯವಿರುವ ಸೌಲಭ್ಯ ಹಾಗೂ ಸಿಬ್ಬಂದಿಯನ್ನು ಒದಗಿಸಲಾಗಿದ್ದು, ಅಗತ್ಯ ವಿರುವವರು ಇದರ ಸದುಪಯೋಗ ಮಾಡಿಕೊಂಡು ಆರೋಗ್ಯ ಸುಧಾರಿಸಿಕೊಳ್ಳುವಂತೆ ಹೇಳಿದರು.

ಕಾರ್ಯಕ್ರಮದಲ್ಲಿ ಮಾಜಿ ಕಾಡ ಅಧ್ಯಕ್ಷ ಹಂಗಳ ನಂಜಪ್ಪ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಬೊಮ್ಮಯ್ಯ, ಚೆನ್ನಪ್ಪ, ತಾಲೂಕು ಆರೋಗ್ಯ ವೈದ್ಯಾಧಿಕಾರಿ ಅಲೀಂ ಪಾಷಾ, ಹಿರಿಯ ಮಕ್ಕಳ ತಜ್ಞ ಮಹೇಶ್, ಕಿವಿ, ಮೂಗು ಮತ್ತು ಗಂಟಲು ತಜ್ಞ ಹರ್ಷದ್ ಅಲಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...