ಚಾಮರಾಜನಗರ | ಅಯ್ಯನ್ ಕಾಳಿಯವರ 160ನೇ ಜನ್ಮ ದಿನಾಚರಣೆ

Date:

ದಲಿತ ಚಳುವಳಿಯ ನಾಯಕ ಅಯ್ಯನ್ ಕಾಳಿ ಅವರ 160ನೇ ಜನ್ಕ ದಿನಾಚರಣೆಯನ್ನು ಗುಂಡ್ಲುಪೇಟೆಯಲ್ಲಿ ದಲಿತ ಸಾಹಿತ್ಯ ಪರಿಷತ್ತು ಆಚರಿಸಿದೆ.

ಕಾರ್ಯಕ್ರಮದಲ್ಲಿ ಮಾತನಾಡಿದ ಪರಿಷತ್‌ನ ತಾಲೂಕು ಅಧ್ಯಕ್ಷ ಯೋಗೇಶ ಕೆ, “1863 ಆಗಸ್ಟ್ 28 ರಂದು ಕೇರಳದ ತಿರುವನಂತಪುರಂ ಜಿಲ್ಲೆಯ ವೆಂಗನೂರು ಗ್ರಾಮದಲ್ಲಿ ಅಯ್ಯನ್ ಮತ್ತು ಮಾಲ ದಂಪತಿಗಳ 8 ಜನ ಮಕ್ಕಳಲ್ಲಿ ಮೊದಲನೆ ಮಗನಾಗಿ ಅಯ್ಯನ್ ಕಾಳಿ ಅವರು ಜನಿಸಿದರು. ಅವರು ಬಾಲ್ಯದಲ್ಲಿಯೇ ಜಾತಿ ತಾರತಮ್ಯದ ನೋವನ್ನು ಅನುಭವಿಸಿದ ಕಾರಣದಿಂದ ಜಾತೀಯತೆ ಮತ್ತು ಅಸ್ಪೃಶ್ಯತೆಯನ್ನು ನಿರ್ಮೂಲ ಮಾಡಬೇಕೆಂದು ಪಣತೊಟ್ಟಿದ್ದರು. ಅದಕ್ಕಾಗಿ ಜಾತಿ ನಿರ್ಮೂಲನೆ ಚಳುವಳಿಯನ್ನು ಆರಂಭಿಸಿದ್ದರು” ಎಂದು ತಿಳಿಸಿದರು.

“ಭಾರತದ ದಲಿತ ಚಳುವಳಿಗೆ ಸುದೀರ್ಘ ಹೋರಾಟದ ಇತಿಹಾಸ ಇದೆ. ಇಂತಹ ಚಳುವಳಿಯಲ್ಲಿ ತೊಡಗಿಸಿಕೊಂಡ ಮೊದಲಿಗರಲ್ಲಿ ಮಹಾರಾಷ್ಟ್ರದ ಕೊರೇಗಾಂವ್ ವಿಜಯೋತ್ಸವದ ರುವಾರಿ ಶಿದನಾಕ ಹಾಗೂ ಕೇರಳದ ಅಯ್ಯನ್ ಕಾಳಿ ಪ್ರಮುಖರು. ಅಯ್ಯನ್ ಕಾಳಿ ರವರು ತಾವು ಅಕ್ಷರಾಭ್ಯಾಸ ಮಾಡದಿದ್ದರೂ ನನ್ನ ಸಮುದಾಯದ ಜನರು ವಿದ್ಯೆಯಿಂದ ವಂಚಿತವಾಗಬಾರದೆಂಬ ಸದುದ್ದೇಶದಿಂದ ಅಸ್ಪೃಶ್ಯರಿಗಾಗಿ ಶಾಲೆಗಳನ್ನು ತೆರೆಯಲು ಆಲೋಚಿಸಿದ್ದರು. 1904 ರಲ್ಲಿ ‘ಪುಲಯ’ ಎಂಬ ಶಾಲೆಯನ್ನು ತೆರೆದರು” ಎಂದು ವಿವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮದಲ್ಲಿ ದಲಿತ ಪರ ಹೋರಾಟಗಾರ ಕಂದೇಗಾಲ ಶಿವಣ್ಣ ,ದಸಾಪ ಅಧ್ಯಕ್ಷರಾದ ಯೋಗೇಶ ಕೆ, ಖಜಾಂಚಿ ಕಾಳಸ್ವಾಮಿ,ಚಿಜಲ್ ಗ್ರೂಪ್ ಆಫ್ ಇನ್ಸ್ಟಿಟ್ಯೂಟ್ ನ ಪ್ರಾಂಶುಪಾಲರಾದ ಮಹದೇವ್ ಚಿಜಲ, ದಸಾಪ ನಿರ್ದೇಶಕರಾದ ತೊಂಡವಾಡಿ ಶಿವಣ್ಣ ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಾಮರಾಜನಗರ | ವನ್ಯಜೀವಿ ಸಂರಕ್ಷಣೆ-ಜನರ ಭದ್ರತೆ ಮಹತ್ವದ್ದಾಗಿದೆ: ಅರಣ್ಯ ಸಚಿವ ಈಶ್ವರ್ ಖಂಡ್ರೆ

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆಯ ಬಂಡೀಪುರ ಉಪ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ...

ಚಾಮರಾಜನಗರ | ದೇವಸ್ಥಾನಕ್ಕೆ ದಲಿತರ ಪ್ರವೇಶ ನಿರಾಕರಣೆ, ಜಾತಿ ನಿಂದನೆ: 17 ಮಂದಿ ವಿರುದ್ಧ ಕೇಸ್ ದಾಖಲು

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ವೀರನಪುರ ಗ್ರಾಮದಲ್ಲಿ ಮುಜರಾಯಿ ಇಲಾಖೆಗೆ ಸೇರಿದ...

ಗುಂಡ್ಲುಪೇಟೆ | ಹುಲಿ ಪತ್ತೆಗೆ ಬೋನಿಟ್ಟ ಅರಣ್ಯ ಇಲಾಖೆ; ಸಿಬ್ಬಂದಿಯನ್ನೇ ಕೂಡಿಟ್ಟ ಗ್ರಾಮಸ್ಥರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ತಾಲ್ಲೂಕು, ಬೊಮ್ಮಲಾಪುರ ಗ್ರಾಮ ವ್ಯಾಪ್ತಿಯಲ್ಲಿ ಹುಲಿ ಕಾಣಿಸಿಕೊಂಡಿದ್ದು,...

ಚಾಮರಾಜನಗರ | ಸ್ವಾತಂತ್ರ್ಯ ಚಳವಳಿ ದೇಶದ ಅಸ್ತಿತ್ವ ಇರುವ ಪರ್ಯಂತ : ಕೆ ವೆಂಕಟರಾಜು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಕರ್ನಾಟಕ...