ಎಂಎಲ್‌ಸಿ ಯೋಗೇಶ್ವರ ಭಾವ ನಾಪತ್ತೆ ಪ್ರಕರಣ; ಹನೂರು ತಾಲೂಕಿನಲ್ಲಿ ಕಾರು ಪತ್ತೆ

Date:

ವಿಧಾನ ಪರಿಷತ್ ಬಿಜೆಪಿ ಸದಸ್ಯ ಸಿ.ಪಿ ಯೋಗೇಶ್ವರ್ ಅವರ ಭಾವ ಮಹದೇವಯ್ಯ ಕಳೆದ ಕೆಲವು ದಿನಗಳಿಂದ ನಾಪತ್ತೆಯಾಗಿದ್ದಾರೆ. ಅವರಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ. ಇದೀಗ, ಅವರ ಕಾರು ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ರಾಮಪುರದಲ್ಲಿ ಪತ್ತೆಯಾಗಿದೆ.

ರಾಮಪುರದ ಪ್ರಾಥಮಿಕ ಆರೋಗ್ಯದ ಕೇಂದ್ರದ ಎದುರು ಕಾರು ಪತ್ತೆಯಾಗಿದೆ ಕಾರಿನ ಬಳಿ ಗಾಜಿನ ಚೂರುಗಳು ಮತ್ತು ರಕ್ತದ ಕಲೆಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ.

ಮೂರು ದಿನಗಳ ಹಿಂದೆ ಚನ್ನಪಟ್ಟಣ ತಾಲೂಕಿನ ಚಕ್ಕೆರೆ ಗ್ರಾಮದ ತೋಟದ ಮನೆಯಿಂದ ಮಹದೇವಯ್ಯ ಕಾಣೆಯಾಗಿದ್ದರು. ಚನ್ನಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮಹದೇವಯ್ಯ ಅವರ ಮೊಬೈಲ್‌ ಲೋಕೇಷನ್‌ ಆಧರಿಸಿ ಪರಿಶೀಲನೆ ನಡೆಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಲೋಕೇಶನ್‌ನಲ್ಲಿ ಅವರು ಮಲೆಮಹದೇಶ್ವರ ಬೆಟ್ಟದ ಸುತ್ತಮುತ್ತಲ ಪ್ರದೇಶದಲ್ಲಿ ಇದ್ದಾರೆಂದು ತಿಳುದುಬಂದಿತ್ತು. ಇದೀಗ, ರಾಮಪುರ ಪೊಲೀಸ್ ಠಾಣೆಯ ನೈಟ್ ಬೀಟ್ ಪೊಲೀಸರು ಕಾರನ್ನು ಪತ್ತೆ ಮಾಡಿದ್ದಾರೆ. ಸ್ಥಳಕ್ಕೆ ಬೆರಳಚ್ಚು ತಜ್ಞರ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಕಾರಿನ ಕಾಜು ಒಡೆದಿರುವುದು ಕಂಡುಬಂದಿದೆ.

ಸಿ.ಪಿ ಯೋಗೇಶ್ವರ ಕೂಡ ಕಾರು ಪತ್ತೆಯಾದ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

“ಮಹದೇವಯ್ಯ ನಾಪತ್ತೆ ಬಗ್ಗೆ ಅವರ ಮಗ ಪ್ರಕರಣ ದಾಖಲಿಸಿದ್ದಾರೆ. ನಾಲ್ಕು ತಂಡಗಳನ್ನು ರಚಿಸಿ ಹುಡುಕಾಟ ನಡೆಸಿದ್ದೇವೆ. ಅವರ ಕಾರು ಚಾಮರಾಜನಗರ ಜಿಲ್ಲೆಯಲ್ಲಿ ಪತ್ತೆಯಾಗಿದೆ. ತನಿಖೆ ಮುಂದುವರಿದಿದೆ” ಎಂದು ರಾಮನಗರ ಎಸ್‌ಪಿ ಕಾರ್ತಿಕ್ ರೆಡ್ಡಿ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...