ಎಂಎಲ್‌ಸಿ ಯೋಗೇಶ್ವರ್ ಭಾವ ಮಹದೇವಯ್ಯ ಮೃತದೇಹ ಪತ್ತೆ

Date:

ಕಳೆದ ಮುರು ದಿನಗಳಿಂದ ಕಾಣೆಯಾಗಿದ್ದ ಮಹದೇವಯ್ಯ ಅವರ ಮೃತದೇಹ ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ಪತ್ತೆಯಾಗಿದೆ.

ಎಂಎಲ್‌ಸಿ, ಬಿಜೆಪಿ ನಾಯಕ ಸಿ.ಪಿ ಯೋಗೇಶ್ವರ್ ಅವರ ಸಂಬಂಧಿಯಾಗಿರುವ ಮಹದೇವಯ್ಯ ಅವರು ಚನ್ನಪಟ್ಟಣ ತಾಲೂಕಿನ ಚಕ್ಕೆರೆ ಗ್ರಾಮದ ತೋಟದ ಮನೆಯಿಂದ ನಾಪತ್ತೆಯಾಗಿದ್ದರು. ಸೋಮವಾರ (ಇಂದು) ಬೆಳಗ್ಗೆ ಅವರ ಕಾರು ಹನೂರು ಬಳಿಯ ರಾಮಾಪುರ ಗ್ರಾಮದ ಪ್ರಾಥಮಿಕ ಆರೋಗ್ಯದ ಕೇಂದ್ರದ ಬಳಿ ಪತ್ತೆಯಾಗಿತ್ತು.

ಕಾರಿನಲ್ಲಿ ರಕ್ತದ ಕಲೆಗಳು ಪತ್ತೆಯಾಗಿದ್ದವು. ಕಾರಿನ ಗಾಜು ಕೂಡ ಒಡೆದಿತ್ತು. ಈಗ ಮೃತದೇಹ ಪತ್ತೆಯಾಗಿದೆ. ಅವರನ್ನು ಅಪಹರಿಸಿ ಕೊಲೆ ಮಾಡಿರಬಹುದು ಎಂದು ಶಂಕೆ ವ್ಯಕ್ತವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಹದೇವಯ್ಯ ಅವರನ್ನು ಕೊಲೆ ಮಾಡಿರುವ ದುಷ್ಕರ್ಮಿಗಳು, ಮೃತದೇಹವನ್ನು 50 ಅಡಿ ಎತ್ತರದಿಂದ ಬೀಸಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

“ರಾಮಾಪುರದಲ್ಲಿ ಕಾರು ಇರುವ ಬಗ್ಗೆ ಭಾನುವಾರ ಸಂಜೆ ಮಾಹಿತಿ ದೊರೆತಿತ್ತು. ಶನಿವಾರವೇ ಗ್ರಾಮಕ್ಕೆ ಕಾರು ಬಂದಿದೆ. ಆ ಬಗ್ಗೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ತನಿಖೆ ನಡೆಯುತ್ತಿದೆ” ಎಂದು ಚಾಮರಾಜನಗರ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪದ್ಮಿನಿ ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...