ಚಾಮರಾಜನಗರ | ಶಕ್ತಿ ಯೋಜನೆ; ಸಂಭ್ರಮೋತ್ಸವಕ್ಕೆ ಚಾಲನೆ ನೀಡಿದ ಶಾಸಕ ಸಿ ಪುಟ್ಟರಂಗಶೆಟ್ಟಿ

Date:

ಚಾಮರಾಜನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಪ್ರಮುಖವಾದ ಶಕ್ತಿ ಯೋಜನೆಯಡಿ ಮಹಿಳೆಯರು ಪ್ರಯಾಣಿಸಲು ಉಚಿತವಾಗಿ ರಾಜ್ಯಾದ್ಯಂತ 500 ಕೋಟಿ ಟಿಕೆಟ್ ವಿತರಿಸಲ್ಪಟ್ಟಿರುವ ಹಿನ್ನೆಲೆಯಲ್ಲಿ ಸಂಭ್ರಮೋತ್ಸವ ಕಾರ್ಯಕ್ರಮಕ್ಕೆ ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಚಾಲನೆ ನೀಡಿದರು.

ಬಣ್ಣದ ಹೂಗಳಿಂದ ಶೃಂಗಾರಗೊಂಡಿದ್ದ ಎರಡು ಕೆಎಸ್ಆರ್ಟಿಸಿ ಬಸ್ಸುಗಳಿಗೆ ಪೂಜೆ ಸಲ್ಲಿಸಲಾಯಿತು. ಗಣ್ಯರು ಹಸಿರು ನಿಶಾನೆ ತೋರುವ ಮೂಲಕ ಸಂಭ್ರಮಕ್ಕೆ ಮತ್ತಷ್ಟು ಮೆರಗು ತಂದರು. 500 ಕೋಟಿ ಮಹಿಳಾ ಪ್ರಯಾಣಿಕರು ಉಚಿತವಾಗಿ ಪ್ರಯಾಣಿಸಿದ ಹಿನ್ನೆಲೆಯಲ್ಲಿ ಬಸ್ ನಿಲ್ದಾಣದಲ್ಲಿನ ಪ್ರಯಾಣಿಕರಿಗೆ ಸಿಹಿ ಹಂಚಲಾಯಿತು.

ಇದೇ, ವೇಳೆ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಇಬ್ಬರು ಚಾಲಕರು ಹಾಗೂ ನಿರ್ವಾಹಕರನ್ನು ಸನ್ಮಾನಿಸಿ ಗೌರವಿಸಲಾಯಿತು. ಗಣ್ಯರು 500 ಕೋಟಿ ಉಚಿತ ಟಿಕೆಟ್ ವಿತರಣೆಯ ಅಂಗವಾಗಿ ಹೊರತಂದಿರುವ ಪೋಸ್ಟರ್‍ಗಳನ್ನು ಪ್ರದರ್ಶಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಶಾಸಕ ಸಿ. ಪುಟ್ಟರಂಗಶೆಟ್ಟಿ ” ಚುನಾವಣಾ ಪೂರ್ವದಲ್ಲಿ ನೀಡಿದ ವಾಗ್ದಾನದಂತೆ ಐದು ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೆ ತಂದಿದ್ದೇವೆ. ಈ ಪಂಚ ಗ್ಯಾರಂಟಿ ಯೋಜನೆಗಳ ಪೈಕಿ ಶಕ್ತಿ ಯೋಜನೆಯಡಿ ರಾಜ್ಯಾದ್ಯಂತ ಮಹಿಳೆಯರು ಉಚಿತವಾಗಿ ಪ್ರಯಾಣಿಸಲು ಅನುಕೂಲ ಮಾಡಿಕೊಟ್ಟಿದ್ದೇವೆ. ಈ ಯೋಜನೆ ಇನ್ನಷ್ಟು ಸದುಪಯೋಗವಾಗಲಿ ಎಂದರು. “

ಶಕ್ತಿ ಯೋಜನೆಯಡಿ ಮಹಿಳೆಯರು ಪ್ರಯಾಣಿಸಲು 500 ಕೋಟಿ ಉಚಿತ ಟಿಕೆಟ್ ಗಳು ವಿತರಿಸಲ್ಪಟ್ಟಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸಂಭ್ರಮ ಆಚರಿಸಲಾಗುತ್ತಿದೆ. ಇದೊಂದು ವಿಶೇಷ ಕಾರ್ಯಕ್ರಮವಾಗಿದ್ದು ಸರ್ಕಾರದ ಗ್ಯಾರಂಟಿ ಯಶಸ್ವಿ ಅನುಷ್ಟಾನದ ಸಂತಸದಲ್ಲಿದ್ದೇವೆ. ಮಹಿಳೆಯರು ದೇವಾಲಯಗಳಿಗೆ ಬಸ್ಸುಗಳ ಮೂಲಕ ಉಚಿತವಾಗಿ ಭೇಟಿ ನೀಡುತ್ತಿದ್ದಾರೆ. ಇದರಿಂದ, ದೇವಾಲಯಗಳ ಆದಾಯವು ಗಣನೀಯ ಪ್ರಮಾಣದಲ್ಲಿ ಏರಿಕೆಯಾಗಿದೆ ಎಂದು ಹೇಳಿದರು.

ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಹೆಚ್.ವಿ. ಚಂದ್ರು ಮಾತನಾಡಿ ‘ ಶಕ್ತಿ ಯೋಜನೆಯಡಿ 500 ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದು ಸ್ತ್ರೀ ಸ್ವಾವಲಂಬಿ ಕನಸು ಇಂದು ನನಸಾಗಿದೆ. ಜಿಲ್ಲೆಯಲ್ಲೂ ಶಕ್ತಿ ಯೋಜನೆಗೆ ಅಭೂತಪೂರ್ವ ಸ್ಪಂದನೆ ಸಿಕ್ಕಿದ್ದು ಯೋಜನೆ ಸಾರ್ಥಕತೆ ಪಡೆದಿದೆ ‘ ಎಂದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಕಬಿನಿ ಜಲಾಶಯದಿಂದ ಕಟ್ಟು ನೀರು ಪದ್ಧತಿಯಲ್ಲಿ ಕಾಲುವೆಗಳಿಗೆ ನೀರು : ಸಚಿವ ಮಹದೇವಪ್ಪ

ಕಾಡಾ ಅಧ್ಯಕ್ಷ ಪಿ. ಮರಿಸ್ವಾಮಿ, ಚೂಡಾ ಅಧ್ಯಕ್ಷ ಮಹಮ್ಮದ್ ಅಸ್ಗರ್ ಮುನ್ನಾ, ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಮೋನಾ ರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ. ಟಿ. ಕವಿತಾ, ಚಾಮರಾಜನಗರ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಸಮಿತಿಯ ಅಧ್ಯಕ್ಷ ಹಾಗೂ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯ ಸೋಮೇಶ್ವರ, ಸದಸ್ಯೆ ಭಾಗ್ಯ, ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಸದಸ್ಯರಾದ ಕುಮಾರ ಮಾದಾಪುರ, ಮರಿಯಾಲದ ಹುಂಡಿ ಕುಮಾರ್, ರಾಜೇಶ್, ಜಡೆಯಪ್ಪ, ಮಂಜುಳಾ, ಸಿದ್ದಿಕ್ ವುಲ್ಲಾ, ರಮೇಶ್, ಗಣೇಶ್ ಕುಮಾರ್, ಚಿನ್ನಸ್ವಾಮಿ, ಕೆಎಸ್ಆರ್ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಅಶೋಕ್ ಕುಮಾರ್, ತಾಲೂಕು ಪಂಚಾಯತ್ ಕಾರ್ಯ ನಿರ್ವಾಹಕ ಅಧಿಕಾರಿ ಶ್ರೀಕಂಠರಾಜೇ ಅರಸ್ ಸೇರಿದಂತೆ ಇನ್ನಿತರರು ಕಾರ್ಯಕ್ರಮದಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...