ಗ್ಯಾರಂಟಿ ಭರದಲ್ಲಿ ಅಭಿವೃದ್ಧಿಗೆ ಅನುದಾನ ಕಡಿತ ಸಾಧ್ಯತೆ: ಮಾಜಿ ಸಿಎಂ ಬೊಮ್ಮಾಯಿ ಆತಂಕ

Date:

  • ಶಿಗ್ಗಾವಿ ತಾಲೂಕಿನ ಮಡ್ಲಿ ಗ್ರಾಮದಲ್ಲಿ ನೂತನ ಶಾಲಾ ಕೊಠಡಿ ಉದ್ಘಾಟಿಸಿ ಅಭಿಮತ
  • ‘ವಿದ್ಯುತ್ ದರ ಹೆಚ್ಚಿಗೆ ಮಾಡಿರುವುದರಿಂದ ಜನರು ಬಿಲ್ ಕಟ್ಟಲು ನಿರಾಕರಿಸುತ್ತಿದ್ದಾರೆ’

ಉಚಿತ ಕೊಡುಗೆಗಳ ಭರದಲ್ಲಿ ಸರ್ಕಾರ ಶಾಲಾ‌ ಕೊಠಡಿಗಳ ನಿರ್ಮಾಣಕ್ಕೆ ಅನುದಾನ ಕಡಿತ ಮಾಡಬಾರದು. ಮುಂದಿನ ದಿನಗಳಲ್ಲಿ ಅಭಿವೃದ್ಧಿಗೆ ಅನುದಾನ ಕಡಿತವಾಗುವ ಸಾಧ್ಯತೆ ಇದೆ. ಸರ್ಕಾರ ಅದು ಆಗದಂತೆ ನೋಡಿಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಶಿಗ್ಗಾವಿ ತಾಲೂಕಿನ ಮಡ್ಲಿ ಗ್ರಾಮದಲ್ಲಿ ನಿರ್ಮಾಣವಾಗಿರುವ ನೂತನ ಶಾಲಾ ಕೊಠಡಿಗಳ ಉದ್ಘಾಟನೆ ಮಾಡಿ ಮಾತನಾಡಿದ ಅವರು, “ಮಾಜಿ ಮುಖ್ಯಮಂತ್ರಿ ಎರಡು ಶಾಲಾ ಕೊಠಡಿಗಳ ಉದ್ಘಾಟನೆಗೆ ಬಂದಿದ್ದಾರೆ ಎಂದು ನಿಮಗೆ ಆಶ್ಚರ್ಯ ಆಗಬಹುದು. ನಾನು ರಾಜ್ಯದ ಭವಿಷ್ಯ ಬರೆಯುವ ದೇಗುಲಗಳ ಉದ್ಘಾಟನೆ ಮಾಡಿದ್ದೇನೆ‌” ಎಂದು ಮಾರ್ಮಿಕವಾಗಿ ನುಡಿದರು.

“ಒಂದು ಗ್ರಾಮಕ್ಕೆ ಕುಡಿಯುವ ನೀರು ಆರೋಗ್ಯದ ಜೊತೆಗೆ ಶಾಲಾ ಕೊಠಡಿಗಳು ಮುಖ್ಯವಾಗಿದೆ. ಅದಕ್ಕಾಗಿ ನಾನು ಶಾಲಾ ಕೊಠಡಿ ನಿರ್ಮಾಣಕ್ಕೆ ಆದ್ಯತೆ ನೀಡಿದ್ದೇನೆ. ವಿವೇಕ ಯೋಜನೆ ಅಡಿಯಲ್ಲಿ ಸುಮಾರು 9,235 ಶಾಲಾ ಕೊಠಡಿಗಳನ್ನು ನಿರ್ಮಾಣ ಮಾಡಲು ಆದೇಶ ಮಾಡಿದ್ದೇವೆ. ರೈತನ ಭೂಮಿ ಎಷ್ಟಿದೆ ಅಷ್ಟೇ ಇದೆ. ಆದರೆ, ಕುಟುಂಬದ ಸದಸ್ಯರ ಸಂಖ್ಯೆ ಹೆಚ್ಚುತ್ತಿದೆ. ಹೀಗಾಗಿ ಶಿಕ್ಷಣ ಅತ್ಯಂತ ಮುಖ್ಯ ಆದ್ದರಿಂದ ನಾನು ಶಿಕ್ಷಣಕ್ಕೆ 13% ಅನುದಾನ ನೀಡಿದ್ದೇನೆ. ಆರೋಗ್ಯ ಕ್ಷೇತ್ರಕ್ಕೆ 12% ಅನುದಾನ ನೀಡಿದ್ದೇನೆ. ನಮ್ಮ ಅವಧಿಯಲ್ಲಿ 15000 ಶಿಕ್ಷಕರ ನೇಮಕಾತಿ ಮಾಡಲಾಗಿದೆ. ಶಿಗ್ಗಾವಿ ಕ್ಷೇತ್ರದಲ್ಲಿ ಶಿಕ್ಷಕರ ಕೊರತೆ ಉಂಟಾದರೆ ನಮ್ಮ ಸ್ವಂತ ಟ್ರಸ್ಟ್‌ ನಿಂದ ಶಿಕ್ಷಕರ ನೀಡಲಾಗುವುದು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಬೆಲೆ ಏರಿಕೆಯಿಂದ ತತ್ತರಿಸಿದ ಜನರ ನೆರವಿಗಾಗಿ ಗ್ಯಾರಂಟಿಗಳನ್ನು ತರಬೇಕಾಯ್ತು: ದಿನೇಶ್ ಗುಂಡೂರಾವ್

ಕುಡಿಯುವ ನೀರಿಗೆ ಹಾಹಾಕಾರ

“ನಿರಂತರವಾಗಿ ವಿದ್ಯುತ್ ಸರಬರಾಜು ಮಾಡದಿದ್ದರೆ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗಲಿದೆ. ವಿದ್ಯುತ್ ದರ ಹೆಚ್ಚಿಗೆ ಮಾಡಿರುವುದರಿಂದ ಜನರು ಬಿಲ್ ಕಟ್ಟಲು ನಿರಾಕರಿಸುತ್ತಿದ್ದಾರೆ. ದರ ಕಟ್ಟಲಿಲ್ಲಾ ಎಂದರೆ ಕರೆಂಟ್ ಸಪ್ಲೆ ಆಗುವುದಿಲ್ಲ. ರಾಜ್ಯದಲ್ಲಿ ಮಳೆ ಇಲ್ಲ, ಬರ ಆಗಿದೆ
ರೈತರಿಗೂ ಹಾಗೂ ಜನರಿಗೆ ಕುಡಿಯುವ ನೀರಿಗೆ ಸಮಸ್ಯೆ ಆಗಿದೆ” ಎಂದರು.

ಜನಗಳಿಗೆ ಕುಡಿಯುವ ನೀರು ಸರಬರಾಜು ಆಗಲು ವಿದ್ಯುತ್ ಬೇಕು. ಬೋರ್ ವೆಲ್ ಗಳಿಂದ ಹಾಗೂ ಅನೇಕ ಕೆಲಸಗಳಿಗೆ ವಿದ್ಯುತ್ ಬೇಕೆ ಬೇಕು. ಸರ್ಕಾರ ವಿದ್ಯುತ್ ನೀಡದಿದ್ದರೆ ಕುಡಿಯುವ ನೀರಿಗೆ ಆಹಾಕಾರ ಆಗುತ್ತದೆ. ಹೈಡ್ರೊ ಎಲೆಕ್ಟ್ರಿಕ್ ಪವರ್ ಕೊರತೆ ಇದೆ. ಹೀಗಾಗಿ ವಿದ್ಯುತ್ ಇಲಾಖೆಯ ಎಲ್ಲಾ ನಿಗಮಗಳಿಗೆ ಹಣ ಬಿಡುಗಡೆ ಮಾಡಬೇಕು. ಇವರು ಸರಿಯಾದ ಕ್ರಮ ತಗೆದಕೊಳ್ಳದಿದ್ದರೆ, ವಿದ್ಯುತ್ ಶಕ್ತಿಯ ಕ್ಷಾಮ ಎದುರಾಗಲಿದೆ” ಎಂದು ಆತಂಕ ವ್ಯಕ್ತಪಡಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...