ಚನ್ನಗಿರಿ | ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ; ಬಂದ್ ಯಶಸ್ವಿ

Date:

ಬಾಲಕಿಯರು, ಮಹಿಳೆಯರು, ಯುವತಿಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿ ವಿಡಿಯೋ ಮಾಡಿ ಸಾಮಾಜಿಕ ಮಾಧ್ಯಮಗಳಲ್ಲಿ ಹರಿಬಿಟ್ಟಿರುವ ಆರೋಪ ಎದುರಿಸುತ್ತಿರುವ ಮೆಡಿಕಲ್ ಶಾಪ್ ಮಾಲೀಕ ಅಮ್ಜದ್‌ಗೆ ಕಠಿಣ ಶಿಕ್ಷೆ ವಿಧಿಸಬೇಕೆಂದು ವಿವಿಧ ಸಂಘಟನೆಗಳು ಒತ್ತಾಯಿಸಿ ನಡೆಸಿದ್ದ ದಾವಣಗೆರೆಯ ಚನ್ನಗಿರಿ ಬಂದ್‌ ಯಶಸ್ವಿಯಾಗಿದೆ.

ಮಹಿಳಾ ಸಂಘಟನೆಗಳು, ಹಿಂದೂ ಪರ ಸಂಘಟನೆಗಳು ಸೇರಿದಂತೆ ಕನ್ನಡಪರ ಸಂಘಟನೆಗಳು ಕರೆ ನೀಡಿದ್ದ ಬಂದ್‌ಗೆ ಜನರು ಸ್ವಯಂ ಪ್ರೇರಿತರಾಗಿ ಸಹಕರಿಸಿದರು. ಅತ್ಯಾಚಾರ ಆರೋಪಿ ಅಮ್ಜದ್‌ ಎಸಗಿರುವುದು ಹೀನ ಕೃತ್ಯವಾಗಿದ್ದು, ಮರಣದಂಡನೆಯನ್ನು ವಿಧಿಸಬೇಕು ಎಂದು ಆಗ್ರಹಿಸಿದವು. ನಗರದ ಕೇಂದ್ರ ಬಸ್ ನಿಲ್ದಾಣದ ಮುಂದೆ ಟೈರ್ ಹಚ್ಚಿ, ಆತನ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.

“ಚನ್ನಗಿರಿಯ ಮೆಡಿಕಲ್ ಶಾಪ್ ಮತ್ತು ಮನೆಯಲ್ಲಿ ಅಪ್ರಾಪ್ತ ಬಾಲಕಿಯರು, ಯುವತಿಯರು ಹಾಗೂ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯವೆಸಗಿ, ಸುಮಾರು 60ಕ್ಕೂ ಹೆಚ್ಚು ವೀಡಿಯೋ ಚಿತ್ರೀಕರಿಸಿದ್ದ ಎನ್ನುವ ಮಾಹಿತಿ ಇದೆ. ಇವುಗಳಲ್ಲಿ ಕೆಲವು ವಿಡಿಯೋಗಳು ಸೋರಿಕೆಯಾಗಿದ್ದು, ಅಮಾಯಕ ಮಹಿಳೆಯರ, ಬಾಲಕಿಯರ ಗೌರವ, ಮರ್ಯಾದೆಗೆ ಧಕ್ಕೆಯಾಗಿದೆ. ಈ ಪ್ರಕರಣದಿಂದ ಚನ್ನಗಿರಿಯಲ್ಲಿ ಮಹಿಳೆಯರು ತಲೆಯೆತ್ತಿ ಓಡಾಡದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರಾಜ್ಯಮಟ್ಟದಲ್ಲಿ ಚನ್ನಗಿರಿಗೆ ಕಳಂಕ ತಂದಿಟ್ಟಿದ್ದಾನೆ. ಆರೋಪಿ ಪ್ರಕರಣದಿಂದ ತಪ್ಪಿಸಿಕೊಳ್ಳದಂತೆ ಸೂಕ್ತ ತನಿಖೆ ನಡೆಸಿ ಪೊಲೀಸರು ಚಾರ್ಜ್‌ಶೀಟ್ ಸಲ್ಲಿಸಿ ಕಾನೂನಿನ ಕುಣಿಕೆಯಿಂದ ತಪ್ಪಿಸಿಕೊಳ್ಳದಂತೆ ಉಗ್ರ ಶಿಕ್ಷೆ ಕೊಡಿಸಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
WhatsApp Image 2025 02 03 at 5.32.11 PM

ಈ ಸುದ್ದಿ ಓದಿದ್ದೀರಾ?: ಚನ್ನಗಿರಿ | ದೃಢೀಕರಣ ಪತ್ರ ನೀಡಲು ರೈತನಿಂದ ಲಂಚ: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಉಪತಹಶೀಲ್ದಾರ್

ಪ್ರತಿಭಟನೆಯಲ್ಲಿ ಔಷಧಿ ವ್ಯಾಪಾರಿಗಳ ಸಂಘ ಕೂಡ ಪಾಲ್ಗೊಂಡು ಆರೋಪಿಗೆ ಕಠಿಣ ಶಿಕ್ಷೆಗೆ ಒತ್ತಾಯಿಸಿತು. ಪ್ರತಿಭಟನೆಗೆ ಚನ್ನಗಿರಿ ತಾಲೂಕು ವಕೀಲರು ಕೂಡ ಬೆಂಬಲ ವ್ಯಕ್ತಪಡಿಸಿದ್ದು, ಈತನ ವಿರುದ್ಧ ದಾಖಲಾಗಿರುವ ಲೈಂಗಿಕ ಪ್ರಕರಣದಲ್ಲಿ ಚನ್ನಗಿರಿಯ ಯಾವುದೇ ವಕೀಲರು ವಕಾಲತ್ತು ವಹಿಸದಂತೆ ನಿರ್ಧರಿಸಲಾಗಿದೆ ಎಂದು ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...