ಚನ್ನಗಿರಿ | ದೃಢೀಕರಣ ಪತ್ರ ನೀಡಲು ರೈತನಿಂದ ಲಂಚ: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಉಪತಹಶೀಲ್ದಾರ್

Date:

ಟ್ರ್ಯಾಕ್ಟರ್ ನೋಂದಣಿಗೆ ರೈತ ದೃಢೀಕರಣ ಪತ್ರ ನೀಡಲು ಲಂಚಕ್ಕೆ ಬೇಡಿಕೆ ಇಟ್ಟು, ಹಣವನ್ನು ಪಡೆಯುವಾಗ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಉಪತಹಶೀಲ್ದಾರ್ ಸುಧಾ ಮೂಡಲಗಿರಿಯಪ್ಪ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಚನ್ನಗಿರಿ ತಾಲೂಕಿನ ದೇವರಹಳ್ಳಿ ನಾಡ ಕಚೇರಿಯಲ್ಲಿ ಉಪ ತಹಶೀಲ್ದಾರ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಸುಧಾ ಮೂಡಲಗಿರಿಯಪ್ಪ, ಲೋಕಾಯುಕ್ತ ದಾಳಿಯ ವೇಳೆ ಲಂಚ ಹಣದ ಜೊತೆಗೆ ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ.

ಟ್ರ್ಯಾಕ್ಟರ್ ಖರೀದಿ ನಂತರ ಸಾರಿಗೆ ಇಲಾಖೆ ನೋಂದಣಿಗೆ ತೆರಿಗೆ ವಿನಾಯಿತಿ ಪಡೆಯಲು ರೈತರು ದೃಢೀಕರಣ ಪತ್ರ ಸಲ್ಲಿಸಬೇಕು. ದೃಢೀಕರಣ (ಬೋನಾಫೈಡ್) ಪತ್ರ ನೀಡುವಂತೆ ಚನ್ನಗಿರಿ ತಾಲೂಕಿನ ಹಿರೇಗಂಗೂರು ಗ್ರಾಮದ ರೈತ ಎಸ್. ಆರ್. ಕುಮಾರ್ ಅವರು ಅರ್ಜಿ ಸಲ್ಲಿಸಿದ್ದರು. ಅದನ್ನು ನಾಡ ಕಚೇರಿಯಿಂದ ತಿರಸ್ಕರಿಸಿದ್ದರು. ನಂತರ ಅರ್ಜಿ ಬಗ್ಗೆ ವಿಚಾರಿಸಿದಾಗ ದೃಢೀಕರಣ ಪತ್ರ ನೀಡಲು 2 ಸಾವಿರ ರೂಪಾಯಿ ಕೇಳಿದ್ದರು. ಸುಧಾ ಅವರು ₹1500 ರೂಪಾಯಿ ಪಡೆಯುವಾಗ ಸಿಕ್ಕಿಬಿದ್ದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಟ್ರ್ಯಾಕ್ಟರ್ ಖರೀದಿಗೆ ಬೇಕಾಗಿದ್ದ ದೃಢೀಕರಣ ಪತ್ರಕ್ಕೆ ಅರ್ಜಿ ಸಲ್ಲಿಸಿದ್ದ ರೈತ ಕುಮಾರ್ ಗೆ ದೃಡೀಕರಣ ಪತ್ರ ಹಸ್ತಾಂತರಕ್ಕೆ ಉಪ ತಹಶೀಲ್ದಾರವರು ಹಣ ಕೇಳಿದ್ದಾರೆ ಎಂದು ಕುಮಾರ್ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಈ ಅಧಿಕಾರಿಗೆ ಮುಂಗಡವಾಗಿ 500 ರೂಪಾಯಿ ಕೊಟ್ಟಿದ್ದ ಅವರು, 1500 ರೂಪಾಯಿ ಹಣ ನೀಡಲು ಇಷ್ಟವಿಲ್ಲದೆ ಲೋಕಾಯುಕ್ತಕ್ಕೆ ದೂರು ನೀಡಿದ್ದರು.

ಲೋಕಾಯುಕ್ತ ಪೊಲೀಸರು ಕಲಂ: 7(3) ಪಿಸಿ ಆಕ್ಟ್-1988 (ತಿದ್ದುಪಡಿ ಕಾಯ್ದೆ-2018) ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಆರೋಪಿ ಉಪತಹಶೀಲ್ದಾರ್ ಸುಧಾ ಮೂಡಲಗಿರಿಯಪ್ಪ ಅವರನ್ನು ವಶಕ್ಕೆ ಪಡೆದು ಮುಂದಿನ ತನಿಖೆ ಕೈಗೊಂಡಿದ್ದಾರೆ ಎಂದು ಲೋಕಾಯುಕ್ತ ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನು ಓದಿದ್ದೀರಾ? ಮಂಗಳೂರು | ಹಜ್ಜ್‌ ಯಾತ್ರಿಕರ ಅನುಕೂಲಕ್ಕಾಗಿ ಜಿಲ್ಲಾ ಮಾಹಿತಿ ಕೇಂದ್ರ ಆರಂಭ

ದಾವಣಗೆರೆ ಲೋಕಾಯುಕ್ತ ಎಸ್‌ಪಿ ಎಂ.ಎಸ್.ಕೌಲಾಪೂರೆ, ಪೊಲೀಸ್ ಉಪಾಧೀಕ್ಷಕಿ ಕಲಾವತಿಯವರ ಮಾರ್ಗದರ್ಶನದಲ್ಲಿ, ಪೊಲೀಸ್ ನಿರೀಕ್ಷಕರಾದ ಮಧುಸೂದನ್ ಸಿ, ಪ್ರಭು ಬಸೂರು ಮತ್ತು ಶ್ರೀಮತಿ ಸರಳ.ಪಿ ಹಾಗೂ ಸಿಹೆಚ್‌ಸಿ ಸಿಬ್ಬಂದಿಗಳಾದ ಆಂಜನೇಯ, ವೀರೇಶಯ್ಯ, ಸುಂದರೇಶ್, ಶ್ರೀಮತಿ ಆಶಾ, ಸಿಪಿಸಿಗಳಾದ ಮಲ್ಲಿಕಾರ್ಜುನ, ಎನ್.ಬಿ. ಅಂಗೇಶ, ಎಸ್.ಎನ್. ಧನರಾಜ್‌, ಗಿರೀಶ ಎಸ್.ಹೆಚ್, ಹಾಗೂ ಚಾಲಕರಾದ ಬಸವರಾಜ್, ಕೃಷ್ಣ, ವಿನಾಯಕ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...