ಚನ್ನಪಟ್ಟಣ | ನಿಖಿಲ್ ಸೋತಿದ್ದಕ್ಕೆ ಕಾರ್ಯಕರ್ತ ಆತ್ಮಹತ್ಯೆಗೆ ಯತ್ನ

Date:

ಚನ್ನಪಟ್ಟಣ ಉಪಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಪುತ್ರ ನಿಖಿಲ್ ಕುಮಾರಸ್ವಾಮಿ ಹೀನಾಯವಾಗಿ ಸೋತಿದ್ದಾರೆ. ಸತತ ಮೂರು ಪ್ರಯತ್ನಗಳಲ್ಲಿಯೂ ನಿಖಿಲ್ ಗೆಲ್ಲುವಲ್ಲಿ ವಿಫಲರಾಗಿದ್ದಾರೆ ನಿಖಿಲ್‌ ಸೋತಿದ್ದಕ್ಕೆ ಜೆಡಿಎಸ್‌ನ ಕಾರ್ಯಕರ್ತರೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಚನ್ನಪಟ್ಟಿಣ ತಾಲೂಕಿನ ಶ್ರೀರಾಂಪುರ ಗ್ರಾಮದ ಮಂಜುನಾಥ್ ಎಂಬವರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಅವರನ್ನು ಮಂಡ್ಯ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ನೀಡುತ್ತಿದ್ದಾರೆ. ಯಾವುದೇ ಅಪಾಯವಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ.

ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ‘ಡೆತ್‌ ನೋಟ್‌’ ಬರೆದಿಟ್ಟಿದ್ದ ಮಂಜುನಾಥ್, “ನಾನು ನಿಖಿಲ್ ಅಭಿಮಾನಿ. ನನ್ನ ಸಾವಿಗೆ ನಾನೇ ಕಾರಣ. ಜೈ ಜೆಡಿಎಸ್” ಎಂದು ಬರೆದಿದ್ದಾರೆ. ಆ ಪತ್ರವನ್ನು ಪೊಲೀಸರು ವಶಕ್ಕ ಪಡೆದಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ನಿಖಿಲ್ ಕುಮಾರಸ್ವಾಮಿ ಅವರು 2019ರ ಲೋಕಸಭಾ ಚುನಾವಣೆಯಲ್ಲಿ ಮಂಡ್ಯದಿಂದ ಸ್ಪರ್ಧಿಸಿದ್ದರು. ಸ್ವತಂತ್ರ ಅಭ್ಯರ್ಥಿಯಾಗಿದ್ದ ಸುಮಲತಾ ವಿರುದ್ಧ ಸೋಲುಂಡಿದ್ದರು. ಬಳಿಕ, 2023ರ ವಿಧಾನಸಭಾ ಚುನಾವಣೆಯಲ್ಲಿ ರಾಮನಗರದಿಂದ ಸ್ಪರ್ಧಿಸಿ, ಸೋತಿದ್ದರು. ಇದೀಗ, 2024ರ ಉಪಚುನಾವಣೆಯಲ್ಲಿ ಚನ್ನಪಟ್ಟಣದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಯೋಗೇಶ್ವರ್ ವಿರುದ್ಧ ಸ್ಪರ್ಧಿಸಿ, ಮೂರನೇ ಬಾರಿಗೆ ಸೋಲುಂಡಿದ್ದಾರೆ.

ಚನ್ನಪಟ್ಟಣ ಉಪಚುನಾವಣಾ ಫಲಿತಾಂಶ ಶನಿವಾರ ಪ್ರಕಟವಾಗಿದೆ. ನಿಖಿಲ್ ವಿರುದ್ಧ ಸಿ.ಪಿ ಯೋಗೇಶ್ವರ್ 25,515 ಮತಗಳ ಅಂತರದಿಂದ ಗೆದಿದ್ದಾರೆ. ಯೋಗೇಶ್ವರ್​ 1,12,642 ಮತಗಳನ್ನು ಪಡೆದರೆ, ನಿಖಿಲ್‌ 87,229 ಮತಗಳನ್ನು ಪಡೆದು ಸೋಲನುಭವಿಸಿದ್ದಾರೆ.

image 23

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...