ಚನ್ನಪಟ್ಟಣ | ಮುಸ್ಲಿಮರಿಗೆ ಕುರ್‌ಆನಿನ ಪ್ರತಿಯೊಂದಿಗೆ ಹಣ ಹಂಚಿದ ಜೆಡಿಎಸ್‌: ವ್ಯಾಪಕ ಆಕ್ರೋಶ

Date:

ಚನ್ನಪಟ್ಟಣದಲ್ಲಿ ಉಪಚುನಾವಣೆಯ ರಂಗು ದಿನದಿಂದ ದಿನಕ್ಕೆ ರಂಗೇರುತ್ತಿದೆ. ಇದರ ನಡುವೆಯೇ ಜೆಡಿಎಸ್‌ನ ಕೆಲವು ಮುಖಂಡರು, ಮುಸ್ಲಿಮ್ ಮತದಾರರನ್ನು ಒಲೈಸಲು ಮುಂದಾಗಿದ್ದು, ಕುರ್‌ಆನಿನ ಪ್ರತಿಯೊಂದಿಗೆ ಹಣ ಹಂಚಿರುವ ಘಟನೆ ಶನಿವಾರ ಬೆಳಕಿಗೆ ಬಂದಿದೆ.

ಈ ಬೆಳವಣಿಗೆಯ ಸಂಬಂಧ ಚನ್ನಪಟ್ಟಣದ ಮುಸ್ಲಿಂ ಸಮುದಾಯದ ಹಿರಿಯರೋರ್ವರು ನೀಡಿರುವ ಹೇಳಿಕೆಯ ಸೋಷಿಯಲ್ ಮೀಡಿಯಾಗಳಲ್ಲಿ ವೈರಲಾಗಿದ್ದು, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಾಗೂ ಎನ್‌ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ವಿರುದ್ದ ಆಕ್ರೋಶ ಹೊರಹಾಕಿದ್ದಾರೆ.

ಸದ್ಯ ಹರಿದಾಡಿರುವ ಫೋಟೋ ಹಾಗೂ ವಿಡಿಯೋದಲ್ಲಿ ಒಂದು ಕವರ್‌ನಲ್ಲಿ ಒಂದು ಸಾವಿರ ಹಣ, ಮುಸ್ಲಿಮರು ನಮಾಜ್ ಮಾಡುವ ಮುಸಲ್ಲ(ಶುದ್ಧವಾದ ಬಟ್ಟೆ) ಹಾಗೂ ಕುರ್‌ಆನಿನ 36ನೇ ಪವಿತ್ರ ಸೂಕ್ತವಾದ ‘ಸೂರಃ ಯಾಸೀನ್’ನ ಒಂದು ಪ್ರತಿ ಹಾಗೂ ಮತ ನೀಡುವಂತೆ ಕರಪತ್ರ ನೀಡಿರುವುದು ಕಂಡುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬೆಳವಣಿಗೆಗೆ ಸಂಬಂಧಿಸಿ ಎಚ್.ಡಿ.ಕುಮಾರಸ್ವಾಮಿ ವಿರುದ್ಧ ಮುಸ್ಲಿಂ ಬಾಂಧವರು ಆಕ್ರೋಶ ಹೊರಹಾಕಿದ್ದು, “ನಿಮಗೆ ಮತ ನೀಡಲು ನಮ್ಮ ಧಾರ್ಮಿಕ ನಂಬಿಕೆಗಳನ್ನು ಬಳಸಿಕೊಳ್ಳಬೇಡಿ. ಎಚ್.ಡಿ.ಕುಮಾರಸ್ವಾಮಿ ಅವರು ಕುರ್‌ಆನ್‌ನ ಪ್ರತಿಯ ಜೊತೆಗೆ 1000 ರೂ.ಗಳ ಲಂಚ ನೀಡಿದ್ದಾರೆ” ಎಂದು ಆರೋಪಿಸಿದ್ದಾರೆ.

Gb80Q9LbEAA7Nxr

“ದಯವಿಟ್ಟು ಇಂತಹ ರಾಜಕೀಯದಿಂದ ದೂರವಿರಿ. ನಮ್ಮ ಈಮಾನ್‌(ಧರ್ಮ ವಿಶ್ವಾಸ)ವನ್ನು ನಿಮ್ಮ ರಾಜಕೀಯಕ್ಕೆ ಬಳಸಿಕೊಳ್ಳಬೇಡಿ. ನಮ್ಮಲ್ಲಿ ಬಂದು ಮತ ಕೇಳಿ. ಆದರೆ, 1000 ರೂ ಹಣ ತೆಗೆದುಕೊಂಡು, ಕುರಾನ್ ಮೇಲೆ ನಿಮ್ಮ ಮತವನ್ನು ನೀಡಿ ಎಂದು ಪ್ರತಿಜ್ಞೆ ಮಾಡಿಸುವ ನಿಮ್ಮ ಈ ಕೆಲಸವನ್ನು ನಾವು ಯಾರೂ ಒಪ್ಪುವುದಿಲ್ಲ. ನಿಮ್ಮ ಮಗನ ಜಯಕ್ಕಾಗಿ, ಈ ರೀತಿಯ ಕೆಲಸಕ್ಕೆ ಕೈ ಹಾಕಬೇಡಿ. ಇದು ನಮ್ಮ ಧಾರ್ಮಿಕ ನಂಬಿಕೆಯ ವಿಚಾರವನ್ನು ಬಳಸಿಕೊಳ್ಳಬೇಡಿ” ಎಂದು ಚನ್ನಪಟ್ಟಣದ ಮುಸ್ಲಿಂ ಮುಖಂಡರು ಎಚ್.ಡಿ.ಕುಮಾರಸ್ವಾಮಿ ಹಾಗೂ ಬಿಜೆಪಿಯವರಿಗೆ ಎಚ್ಚರಿಕೆ ನೀಡಿದ್ದಾರೆ.

ಈ ಬೆಳವಣಿಗೆ ಸಂಬಂಧ ಚುನಾವಣಾ ಆಯೋಗವು ಕ್ರಮ ಕೈಗೊಳ್ಳಲಿದೆಯೇ ಎಂದು ಕಾದು ನೋಡಬೇಕಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...