ಕೊಪ್ಪಳ | ಅಂಗನವಾಡಿಯಲ್ಲಿ ಅವ್ಯವಸ್ಥೆ : ಇಲಾಖೆ ಉಪನಿರ್ದೇಶಕ ಅಮಾನತು

Date:

ಕೊಪ್ಪಳ ಜಿಲ್ಲೆಯ ಅಂಗನವಾಡಿಗಳಲ್ಲಿನ ಸಾಲು ಸಾಲು ಅಕ್ರಮ, ಅವ್ಯವಸ್ಥೆಗಳನ್ನು ಸರಿಪಡಿಸುವಲ್ಲಿ ಸೂಕ್ತ ಕ್ರಮಕೈಗೊಳ್ಳಲು ನಿರ್ಲಕ್ಷ್ಯ ತೋರಿದ್ದಾರೆ ಎಂಬ ಆರೋಪದಡಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ತಿಪ್ಪಣ್ಣ ಸಿರಸಗಿ ಅವರನ್ನು ಅಮಾನತು ಮಾಡಲಾಗಿದೆ.

ಅಂಗನವಾಡಿ ಮಕ್ಕಳಿಗೆ ನೀಡಬೇಕಾದ ಮೊಟ್ಟೆಗಳನ್ನು ವಿಡಿಯೊ ಮಾಡುವವರೆಗೆ ಮಾತ್ರ ನೀಡಿ, ಮರಳಿ ಪಡೆದಿದ್ದು. ಅಂಗನವಾಡಿ ಆಹಾರ ಪದಾರ್ಥಗಳು ಹೋಟೆಲ್​ನಲ್ಲಿ ಸಿಕ್ಕಿದ್ದು, ಅಂಗನವಾಡಿ ಮೇಲ್ಛಾವಣಿ ಕುಸಿದು ಬಿದ್ದು ಮಕ್ಕಳು ಗಾಯಗೊಂಡಿದ್ದು ಸೇರಿದಂತೆ ಹತ್ತಾರು ಅವಾಂತರ, ಅಕ್ರಮಗಳು ನಡೆದಿದ್ದವು. ಈ ವರದಿಗಳಿಗೆ ಕಾರಣ ಕೇಳಿ ಕೆಲ ದಿನಗಳ ಹಿಂದೆಯೇ ಉಪ ನಿರ್ದೇಶಕರಿಗೆ ನೋಟಿಸ್ ಜಾರಿ ಮಾಡಲಾಗಿತ್ತು.

ಉಪನಿರ್ದೇಶಕ ತಿಪ್ಪಣ್ಣ ಸಿರಸಂಗಿ ತಮ್ಮ ಕರ್ತವ್ಯ ನಿರ್ವಹಣೆಯಲ್ಲಿ ಪದೇ ಪದೇ ತೀವ್ರ ತೆರನಾದ ಕರ್ತವ್ಯಲೋಪ ಎಸಗಿದ್ದು, ಇಲಾಖೆ ವಿಚಾರಣೆಯನ್ನು ಬಾಕಿಯಿರಿಸಿ ಸೇವೆಯಿಂದ ಅಮಾನತು ಮಾಡಲಾಗಿದೆ. ಇವರು ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿ ಪಡೆಯದೆ ಕೇಂದ್ರ ಸ್ಥಾನ ಬಿಡುವಂತಿಲ್ಲʼ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಕೆ ಸರ್ಕಾರದ ಅಧೀನ ಕಾರ್ಯದರ್ಶಿ ರಶ್ಮಿ ಆದೇಶ ಹೊರಡಿಸಿದ್ದಾರೆ. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...