ಕಲಬುರಗಿ | ಕೆಕೆಆರ್‌ಡಿಬಿ ಶೈಕ್ಷಣಿಕ ಸುಧಾರಣಾ ಸಮಿತಿ ಅಧ್ಯಕ್ಷರಾಗಿ ಛಾಯಾ ದೇಗಾಂವಕರ್‌ ನೇಮಕ

Date:

ಕಲ್ಯಾಣ ಕರ್ನಾಟ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ವತಿಯಿಂದ ಕಲ್ಯಾಣ ಕರ್ನಾಟಕ ಭಾಗದ ಶಿಕ್ಷಣ ಸುಧಾರಣಾ ತಜ್ಞರ ಸಮಿತಿ ಪುನರ್ ರಚಿಸಿ, ಡಾ.ಛಾಯಾ ದೇಗಾಂವಕರ ಅಧ್ಯಕ್ಷ ನೇತೃತ್ವದ 8 ಜನ ಸದಸ್ಯರು ಹೊಂದಿರುವ ಶಿಕ್ಷಣ ತಜ್ಞರ ಸಮಿತಿ ಪುನರ್ ರಚಿಸಲಾಗಿದೆ ಎಂದು ಕೆಕೆಆರ್‌ಡಿಬಿ ಅಧ್ಯಕ್ಷ ಡಾ. ಅಜಯಸಿಂಗ್ ತಿಳಿಸಿದರು.

ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಶೈಕ್ಷಣಿಕ ಅಭಿವೃದ್ಧಿಗಾಗಿ ಕಲಬುರಗಿ, ಬೀದರ್, ಬಳ್ಳಾರಿ, ರಾಯಚೂರು ಹಾಗೂ ವಿಜಯನಗರ ಜಿಲ್ಲೆಗಳ 11 ಮಂದಿ ಶಿಕ್ಷಣ ತಜ್ಞರ ಪಟ್ಟಿಯ ಪ್ರಸ್ತಾವವನ್ನು ಕೆಕೆಆರ್‌ಡಿಬಿ ಅಧ್ಯಕ್ಷ ಡಾ.ಅಜಯಸಿಂಗ್ ಅವರು ಸರ್ಕಾರಕ್ಕೆ ಸಲ್ಲಿಸಿದ್ದರು. ಪ್ರಸ್ತಾವವನ್ನು ಪರಿಶೀಲಿಸಿದ ಮುಖ್ಯಮಂತ್ರಿ, ಒಬ್ಬರು ಅಧ್ಯಕ್ಷರು ಹಾಗೂ ಏಳು ಮಂದಿ ಸದಸ್ಯರನ್ನು ಆಯ್ಕೆ ಮಾಡಿ ಅನುಮೋದನೆ ನೀಡಿದ್ದಾರೆ.

ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ ಪ್ರಾಧ್ಯಾಪಕಿಯಾಗಿದ್ದ ಛಾಯಾ ದೇಗಾಂವಕರ್‌ ಅವರು ಅಧ್ಯಕ್ಷರಾಗಿದ್ದರೆ, ಬೀದರ್‌ನ ಡಾ.ಅಬ್ದುಲ್ ಖದೀರ್, ಮಲ್ಲಿಕಾರ್ಜುನ ಎಂ.ಎಸ್‌., ಬಳ್ಳಾರಿಯ ಫ್ರಾಂಸಿಸ್ ಬಾಷ್ಯಮ್, ಕಲಬುರಗಿಯ ಎನ್‌.ಬಿ.ಪಾಟೀಲ, ರುದ್ರೇಶ್‌ ಎಸ್‌., ಯಶವಂತ ಹರಸೂರ್ ಹಾಗೂ ನಾಗಾಬಾಯಿ ಬಿ.ಬುಳ್ಳಾ ಅವರು ಸದಸ್ಯರಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸಮಿತಿಯು ಪ್ರತಿ ತಿಂಗಳು ಅಕ್ಷರ ಆವಿಷ್ಕಾರ ಯೋಜನೆ ಹಾಗೂ ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಶೈಕ್ಷಣಿಕ ಅಭಿವೃದ್ಧಿಗೆ ಸಂಬಂಧಿಸಿದಂತೆ ಸಭೆ ನಡೆಸಿ ಸೂಕ್ತ ಸಲಹೆ, ಮಾರ್ಗದರ್ಶನಗಳನ್ನು ಕೆಕೆಆರ್‌ಡಿಬಿಗೆ ನೀಡಬೇಕು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.

ಗುರುರಾಜ ಕರಜಗಿ ನೇತೃತ್ವದ ಸಮಿತಿಗೆ ತೀವ್ರ ವಿರೋಧ:

ಈ ಹಿಂದೆ ಶಿಕ್ಷಣ ತಜ್ಞ ಗುರುರಾಜ ಕರಜಗಿ ನೇತೃತ್ವದಲ್ಲಿ ಆರು ಜನ ತಜ್ಞರ ಸಮಿತಿಯನ್ನು ರಚಿಸಲಾಗಿತ್ತು. ಕರಜಗಿ ಜತೆಗೆ ಸದಸ್ಯರಾಗಿ ಅಜೀಂ ಪ್ರೇಮ್‌ಜಿ ಪ್ರತಿಷ್ಠಾನದ ಡಾ. ರುದ್ರೇಶ್, ಹಿರೇಮಠ ಸ್ವಾಮೀಜಿ, ಬಳ್ಳಾರಿಯ ಫಾದರ್ ಫ್ರಾನ್ಸಿಸ್, ಬೀದರ್‌ನ ಶಹೀನ್ ವಿದ್ಯಾಸಂಸ್ಥೆಗಳ ಮುಖ್ಯಸ್ಥ ಅಬ್ದುಲ್ ಖದೀರ್ ಹಾಗೂ ಸದಸ್ಯ ಕಾರ್ಯದರ್ಶಿಯಾಗಿ ಎನ್.ಬಿ. ಪಾಟೀಲ ಅವರನ್ನು ಕೆಕೆಆರ್‌ಡಿಬಿ ಅಧ್ಯಕ್ಷರು ಆಯ್ಕೆ ಮಾಡಿ ಘೋಷಿಸಿದ್ದರು.

ಈ ಸುದ್ದಿ ಓದಿದ್ದೀರಾ? ಬೆಳಗಾವಿ | ಫೈನಾನ್ಸ್‌ ಕಂಪನಿಯಿಂದ ಮನೆಗೆ ಬೀಗ: ವಿಶೇಷ ಚೇತನ ಮಗುವಿನೊಂದಿಗೆ ಬೀದಿಗೆ ಬಿದ್ದ ಕುಟುಂಬ!

ಆರ್‌ಎಸ್‌ಎಸ್ ಹಿನ್ನೆಲೆಯ ಗುರುರಾಜ ಕರಜಗಿ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳ ಮಾಲೀಕರನ್ನು ಕೈಬಿಡಬೇಕು ಎಂದು ಆಗ್ರಹಿಸಿ ವಿವಿಧ ಸಂಘಟನೆಗಳ ಮುಖಂಡರು ಆಕ್ಷೇಪ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದವು. ಈಗ ಅವರನ್ನು ಕೈಬಿಟ್ಟು ಸಮಿತಿ ಪುನರ್‌ ರಚಿಸಿ ಛಾಯಾ ದೇಗಾಂವಕರ್ ಅವರನ್ನು ನೇಮಕಮಾಡಿ ಜವಾಬ್ದಾರಿ ವಹಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...