ಉಡುಪಿ | 2025ನೇ ಸಾಲಿನ ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿಗೆ ಹಿರಿಯ ಪತ್ರಕರ್ತ ಚಿದಂಬರ ಬೈಕಂಪಾಡಿ ಆಯ್ಕೆ

Date:

ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘ ವತಿಯಿಂದ ಕೊಡಮಾಡುವ ಮುಂಗಾರು ಪತ್ರಿಕೆಯ ಸಂಪಾದಕ, ಹಿರಿಯ ಪತ್ರಕರ್ತ ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿಗೆ ವಡ್ಡರ್ಸೆಯವರ ಒಡನಾಡಿ, ಹಿರಿಯ ಪತ್ರಕರ್ತ ಚಿದಂಬರ ಬೈಕಂಪಾಡಿ ಆಯ್ಕೆಯಾಗಿದ್ದಾರೆ.

ಕಳೆದ 9 ವರ್ಷಗಳಿಂದ ನಾಡಿನ ಗಣ್ಯ ಪತ್ರಕರ್ತರಿಗೆ ಬ್ರಹ್ಮಾವರ ಪತ್ರಕರ್ತರ ಸಂಘ ಈ ಪ್ರಶಸ್ತಿ ನೀಡುತ್ತ ಬಂದಿದ್ದು 2025ನೇ ಸಾಲಿನ ಪ್ರಶಸ್ತಿಗೆ ಬೈಕಂಪಾಡಿಯವರನ್ನು ಆಯ್ಕೆ ಮಾಡಿದೆ ಹಾಗೂ 2025 ಡಿಸೆಂಬರ್ 27 ರಂದು ಶನಿವಾರ ಸಂಜೆ ಬ್ರಹ್ಮಾವರ ಬಂಟರ ಭವನದಲ್ಲಿ ಗಣ್ಯರ ಉಪಸ್ಥಿತಿಯಲ್ಲಿ ಪ್ರಶಸ್ತಿ ಪ್ರದಾನ ನೆರವೇರಲಿದೆ.

ಬೈಕಂಪಾಡಿಯವರು ವಡ್ಡರ್ಸೆಯವರ ಒಡನಾಡಿಯಾಗಿ ಹತ್ತು ವರ್ಷ ಕಾಲ ಮುಂಗಾರು ಪತ್ರಿಕೆಯಲ್ಲಿ ಸೇವೆ ಸಲ್ಲಿಸಿ ಅವರ ಆಶಯಗಳಿಗೆ ಜೀವ ತುಂಬಿದ್ದರು. ಪತ್ರಿಕೋದ್ಯಮ ಕ್ಷೇತ್ರದಲ್ಲಿ ಅಮೃತ ವಾರಪತ್ರಿಕೆಯಲ್ಲಿ 2 ವರ್ಷ, ದಿವ್ಯವಾಣಿ ವಾರಪತ್ರಿಕೆಯಲ್ಲಿ 3 ವರ್ಷ, ಮುಂಗಾರು ದಿನಪ್ರತಿಕೆ 10 ವರ್ಷ ಮುಖ್ಯ ವರದಿಗಾರರಾಗಿ, ಕನ್ನಡಪ್ರಭ ದಿನಪ್ರತಿಕೆಯಲ್ಲಿ 15 ವರ್ಷ ಪ್ರಧಾನ ವರದಿಗಾರರಾಗಿ ‘ಬಿಂಬದ್ವನಿ’ ಪತ್ರಿಕೆಯ ಪ್ರಧಾನ ಸಂಪಾದಕರಾಗಿ ಹೀಗೆ ಹತ್ತು ಹಲವು ಮಜಲುಗಳಲ್ಲಿ ಪತ್ರಿಕಾ ರಂಗದಲ್ಲಿ ಸೇವೆ ಸಲ್ಲಿಸಿದ್ದಾರೆ‌. ಮುಂಗಾರು ಎನ್ನುವ ಪತ್ರಿಕೋದ್ಯಮದ ಕುರಿತ ಪುಸ್ತಕ, ಪ.ಗೋ ಪ್ರಪಂಚ – ಪತ್ರಿಕೋದ್ಯಮ ಕುರಿತ ಪುಸ್ತಕ, ರಾಜಕೀಯ ಒಳಸುಳಿಗಳು ಲೇಖನಗಳು ಸೇರಿದಂತೆ ಸಾಹಿತ್ಯ ಕ್ಷೇತ್ರದಲ್ಲೂ ಹಲವು ಕೃತಿ ಹೊರತಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪತ್ರಿಕೋದ್ಯಮ, ಸಾಹಿತ್ಯ ಕ್ಷೇತ್ರದ ಇವರ ಸಾಧನೆ ಪರಿಗಣಿಸಿ ವಡ್ಡರ್ಸೆ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಬ್ರಹ್ಮಾವರ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಗಾಣಿಗ ಅಚ್ಲಾಡಿ, ಪ್ರಧಾನ ಕಾರ್ಯದರ್ಶಿ ಹರೀಶ್ ಕಿರಣ್ ತುಂಗ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...