ಚಿಕ್ಕಬಳ್ಳಾಪುರ | ಕ್ರೀಡೆಯೊಳಗಿನ ಶಿಸ್ತು ಬದುಕಿನ ಭಾಗವಾಗಲಿ : ಡಾ.ನಿರ್ಮಲಾನಂದನಾಥ ಸ್ವಾಮೀಜಿ

Date:

ಚಿಕ್ಕಬಳ್ಳಾಪುರ ನಗರ ಹೊರವಲಯದ ಎಸ್‌ ಜೆ ಸಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ನಡೆದ ಚುಂಚಾದ್ರಿ ಕ್ರೀಡೋತ್ಸವ – 2024

ಭಾಗವಹಿಸುವಿಕೆ ಅತೀ ಮುಖ್ಯ, ಸೋಲು ಗೆಲುವಿನ ಲೆಕ್ಕಾಚಾರ ಆನಂತರ. ಕ್ರೀಡೆಗಳಲ್ಲಿ ಭಾಗವಹಿಸಿದವರ ಶಿಸ್ತು ಬೇರೆಯವರಲ್ಲಿ ಇರುವುದಿಲ್ಲ. ಹಾಗಾಗಿ ಕ್ರೀಡೆಯೊಳಗಿನ ಶಿಸ್ತು ನಿಮ್ಮ ಬದುಕಿನ ಭಾಗವಾಗಲಿ ಎಂದು ಆದಿಚುಂಚನಗಿರಿ ಪೀಠಾಧ್ಯಕ್ಷ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಆಶಿಸಿದರು.

ಚಿಕ್ಕಬಳ್ಳಾಪುರ ನಗರ ಹೊರವಲಯದ ಎಸ್.ಜೆ.ಸಿ. ತಾಂತ್ರಿಕ ಮಹಾವಿದ್ಯಾಲಯದಲ್ಲಿ ಶುಕ್ರವಾರ ಆಯೋಜಿಸಿದ್ದ 27ನೇ ವರ್ಷದ ರಾಜ್ಯಮಟ್ಟದ ಚುಂಚಾದ್ರಿ ಕ್ರೀಡೋತ್ಸವದ ವೇದಿಕೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

sjcit ಕ್ರೀಡ

ಕ್ರೀಡೆಯಲ್ಲಿ ಸೋಲು ಗೆಲುವು ಸಹಜ. ಸೋತಾಗ ಕುಗ್ಗದೇ, ಗೆದ್ದಾಗ ಬೀಗದೆ ಗುರುಗಳ ಮಾರ್ಗದರ್ಶನದಲ್ಲಿ ಮುನ್ನಡೆಯಿರಿ ಎಂದು ಸಲಹೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮಕ್ಕಳ ಭವಿಷ್ಯಕ್ಕಾಗಿ ಪೋಷಕರು ತಮ್ಮ ಭವಿಷ್ಯವನ್ನು ಲೆಕ್ಕಿಸದೇ ದುಡಿಯುತ್ತಾರೆ. ಅದಕ್ಕೆ ಪ್ರತಿಯಾಗಿ ತಾವುಗಳು ತಮ್ಮ ಕರ್ತವ್ಯವನ್ನು ಚಾಚೂ ತಪ್ಪದೆ ಮಾಡಬೇಕೆಂದು. ಈ ದೇಶದ ಮುಖ್ಯ ಸಂಪತ್ತಾದ ಮಾನವ ಸಂಪತ್ತನ್ನು ನಾವುಗಳು ಸರಿಯಾಗಿ ಉಪಯೋಗಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

sjcit12 1

ಸುಪ್ರೀಂ ಕೋರ್ಟ್ ನಿವೃತ್ತ ನ್ಯಾ.ವಿ.ಗೋಪಾಲ್‌ ಗೌಡ ಮಾತನಾಡಿ, ವಿದ್ಯಾರ್ಥಿಗಳು ಜವಾಬ್ದಾರಿಯುತ ನಾಗರೀಕರಾಗಿ ದೇಶ ಸೇವೆಗಾಗಿ ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು ಎಂದು ಆಶಯ ವ್ಯಕ್ತಪಡಿಸಿದರು.

ಪ್ರಸ್ತುತ ವಿದ್ಯಾರ್ಥಿ ಯುವಜನರು ಅತ್ಯಾಧುನಿಕತೆಯ ಭರಾಟೆಯಲ್ಲಿ ಮೊಬೈಲ್‌ ಬಳಕೆ, ದುಶ್ಚಟಗಳ ದಾಸರಾಗುತ್ತಿದ್ದಾರೆ. ಇದು ದೇಶದ ಅಭಿವೃದ್ಧಿಗೆ ಮಾರಕ. ಆದ್ದರಿಂದ, ಶ್ರದ್ಧಾ ಭಕ್ತಿಯಿಂದ ಕೆಲಸ ಮಾಡಿದಲ್ಲಿ ಯಶಸ್ಸು ನಮ್ಮದಾಗುತ್ತದೆ ಎಂದು ಸಲಹೆ ನೀಡಿದರು.

ಆದಿಚುಂಚನಗಿರಿ ಮಠದ ಪ್ರಧಾನ ಕಾರ್ಯದರ್ಶಿ ಪ್ರಸನ್ನನಾಥ ಸ್ವಾಮೀಜಿ ಸೇರಿದಂತೆ ಇತರೆ ಗಣ್ಯರು ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

sjcit1234

ಬೆಳಗ್ಗೆ 9 ಗಂಟೆಗೆ ಆರಂಭವಾದ ಕ್ರೀಡಾಕೂಟದಲ್ಲಿ ರಾಜ್ಯದ 21 ಜಿಲ್ಲೆಗಳಿಂದ 6000ಕ್ಕೂ ಹೆಚ್ಚು ವಿದ್ಯಾರ್ಥಿಗಳು 30ಕ್ಕೂ ಹೆಚ್ಚು ಸ್ಪರ್ಧೆಗಳಲ್ಲಿ ಭಾಗವಹಿಸಿದ್ದರು.

ಇದನ್ನೂ ಓದಿ : ಈ ದಿನ ಸಂಪಾದಕೀಯ | ಪೋಕ್ಸೊ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ನ್ಯಾಯಾಂಗದ ನಿರಾಸಕ್ತಿ; ಸದನದ ಚರ್ಚೆ ಸ್ವಾಗತಾರ್ಹ

sjcit ಭರತ ನಾಟ್ಯ

ಸಮಾರಂಭದಲ್ಲಿ ಪುರುಷೋತ್ತಮನಂದನಾಥ ಸ್ವಾಮೀಜಿ, ಪ್ರಸನ್ನನಾಥ ಸ್ವಾಮೀಜಿ, ಆದಿಚುಂಚನಗಿರಿ ಮಹಾಸಂಸ್ಥಾನ ಮಠ, ಪ್ರಕಾಶನಾಥ ಸ್ವಾಮೀಜಿ, ಸೌಮ್ಯನಾಥ ಸ್ವಾಮೀಜಿ, ಸೋಮೇಶ್ವರನಾಥ ಸ್ವಾಮೀಜಿ,‌ ಆದಿಚುಂಚನಗಿರಿ ವಿವಿ ಉಪಕುಲಪತಿ ಡಾ.ಎಂ.ಎ ಶೇಖರ್‌, ಅಕ್ಕ ಸಮ್ಮೇಳನದ ಅಧ್ಯಕ್ಷ ಅಮರನಾಥ ಗೌಡ, ಜಿಲ್ಲಾಧಿಕಾರಿ ಪಿ ಎನ್‌ ರವೀಂದ್ರ, ಎಸ್ಪಿ ಕುಶಾಲ್‌ ಚೌಕ್ಸೆ, ಅಂತರಾಷ್ಟ್ರೀಯ ಕಬಡ್ಡಿ ಕ್ರೀಡಾಪಟು ಉಷಾರಾಣಿ, ಡಾ.ಶಿವರಾಮರೆಡ್ಡಿ, ಪ್ರಾಂಶುಪಾಲರಾದ ಡಾ.ಜಿ.ಟಿ.ರಾಜು, ಕುಲಸಚಿವ ಸುರೇಸ್‌ ಜೆ ಸೇರಿದಂತೆ ವಿವಿಧ ಶಾಖಾ ಮಠಗಳ ಸ್ವಾಮೀಜಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...