ಚಿಕ್ಕಬಳ್ಳಾಪುರ : ಸಹಾಯಕ ಪ್ರಾಧ್ಯಾಪಕ ರಮೇಶ್ ಕುಮಾರ್(36) ಹೃದಯಾಘಾತದಿಂದ ಗುರುವಾರ ಬೆಳಗ್ಗೆ ಬೆಂಗಳೂರಿನ ಸ್ನೇಹಿತರ ನಿವಾಸದಲ್ಲಿ ಕೊನೆಯುಸಿರೆಳೆದರು.
ಬುಧವಾರ ರಾತ್ರಿ ಸ್ನೇಹಿತರ ನಿವಾಸದಲ್ಲಿ ತಂಗಿದ್ದರು ಬೆಳಗ್ಗೆ ಎದ್ದು ಮೊಬೈಲ್ ಸಂಭಾಷಣೆಯಲ್ಲಿದ್ದಾಗ ಇದ್ದಕ್ಕಿದ್ದಂತೆ ಕುಸಿದು ಬಿದ್ದಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ. ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ. ಚಿಕ್ಕಬಳ್ಳಾಪುರ ಹೊರವಲಯದ ನಾಗಾರ್ಜುನ ಇಂಜಿನಿಯರಿಂಗ್ ಮತ್ತು ತಾಂತ್ರಿಕ ಮಹಾವಿದ್ಯಾಲಯದಲ್ಲಿ 2022ರಿಂದ ಇಂಗ್ಲಿಷ್ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಅವಿವಾಹಿತರಾಗಿದ್ದ ಇವರು ಅಪಾರ ಬಂಧುಬಳಗವನ್ನು ಅಗಲಿದ್ದಾರೆ ಮೃತ ರಮೇಶ್ ಕುಮಾರ್ ಮೂಲತಃ ತಮಿಳುನಾಡಿನವರಾಗಿದ್ದುಅವರ ಸ್ವಗ್ರಾಮದಲ್ಲಿ ಅಂತ್ಯಸಂಸ್ಕಾರ ನೆರವೇರಲಿದೆ.
ಇದನ್ನು ಓದಿದ್ದೀರಾ…? ನಾಗಲಾಪುರ ಬೆಟ್ಟದಲ್ಲಿ ಸಮುದಾಯ ಭವನ ನಿರ್ಮಾಣಕ್ಕೆ 50 ಲಕ್ಷ : ಕೊತ್ತೂರು ಮಂಜುನಾಥ್
ಮೃತರು ಸುಮಾರು 4 ವರ್ಷಗಳಿಂದ ನಮ್ಮ ಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅವರ ಅಗಲಿಕೆ ನೋವುಂಟು ಮಾಡಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಭಗವಂತ ಅವರ ಕುಟುಂಬಕ್ಕೆ ನೋವನ್ನು ಭರಿಸುವ ಶಕ್ತಿ ಕರುಣಿಸಲಿ ಎಂದು ಕಾಲೇಜು ಪ್ರಾಂಶುಪಾಲ ಡಾ. ತಿಪ್ಪೇಸ್ವಾಮಿ ಜಿ ಹಾಗೂ ಸಿಬ್ಬಂದಿ ವರ್ಗ ಸಂತಾಪ ಸೂಚಿಸಿದರು.





