ಚಿಕ್ಕಬಳ್ಳಾಪುರ | ಶಾಲೆಯಿಂದ ಹೊರಗುಳಿದಿದ್ದಾರೆ 181 ಮಕ್ಕಳು

Date:

2023-24ನೇ ಶಿಕ್ಷಣಿಕ ಸಾಲಿನಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 181 ಮಕ್ಕಳು ಶಾಲೆಯಿಂದ ಹೊರಗುಳಿದಿದ್ದಾರೆ ಎಂದು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ತಿಳಿಸಿದೆ.

ಇಲಾಖೆಯು ಕಳೆದ ಅಕ್ಟೋಬರ್ 26 ರಿಂದ ನವೆಂಬರ್ 9 ರವರೆಗೆ ಜಿಲ್ಲೆಯಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳ ಗಣತಿಯನ್ನು ನಡೆಸಿದೆ. ಶಾಲೆಯಿಂದ ಹೊರಗೆ ಉಳಿದ 1ರಿಂದ 10ನೇ ತರಗತಿ ಮಕ್ಕಳನ್ನು ಗುರುತಿಸಲು ಶಾಲಾ, ಕ್ಲಸ್ಟರ್‌, ಜಿಲ್ಲಾ ಮಟ್ಟದಲ್ಲಿ ಈ ಗಣತಿ ನಡೆದಿದೆ. ಇದೀಗ, ಗಣತಿಯ ವರದಿ ಬಿಡುಗಡೆಯಾಗಿದ್ದು, ಇಲ್ಲೆಯಲ್ಲಿ 181 ಮಕ್ಕಳು ಶಾಲೆಯಿಂದ ದೂರ ಉಳಿದಿದ್ದಾರೆ ಎಂದು ತಿಳಿಸಿದೆ.

ಜಿಲ್ಲೆಯಲ್ಲಿ ಶಾಲೆಯಿಂದ ಹೊರಗುಳಿದವರ ಪೈಕಿ ಜಿಲ್ಲಾ ಕೇಂದ್ರವಾಗಿರುವ ಚಿಕ್ಕಬಳ್ಳಾಪುರ ತಾಲೂಕಿನಲ್ಲಿಯೇ ಹೆಚ್ಚು ಮಕ್ಕಳು ಶಿಕ್ಷಣ ವಂಚಿತರಾಗಿದ್ದಾರೆ. ತಾಲೂಕಿನಲ್ಲಿ 51 ಮಕ್ಕಳು ಶಾಲೆಯಿಂದ ದೂರವಿದ್ದಾರೆ. ಇನ್ನು, ಗೌರಿಬಿದನೂರು, ಗುಡಿಬಂಡೆ, ಚಿಂತಾಮಣಿ ತಾಲೂಕಿನಲ್ಲಿ ಅನುಕ್ರಮವಾಗಿ 40, 37, 29 ಮಕ್ಕಳು ಶಾಲೆಯಿಂದ ಹೊರಗುಳಿದಿದ್ದಾರೆ. ಬಾಗೇಪಲ್ಲಿ ಮತ್ತು ಶಿಡ್ಲಘಟ್ಟ ತಾಲೂಕಿನಲ್ಲಿ ಒಟ್ಟು 24 ಮಕ್ಕಳು ಶಾಲೆಯಿಂದ ಹೊರಗಿದ್ದಾರೆ ಎಂದು ವರದಿ ಹೇಳಿದೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಿಲ್ಲೆಯಲ್ಲಿ ಶಾಲೆಯಿಂದ ಹೊರಗಿರುವ 181 ಮಕ್ಕಳಲ್ಲಿ 12 ಮಕ್ಕಳನ್ನು ಶಾಲೆಗೆ ಮರಳಿ ಕರೆತರಲಾಗಿದೆ. ಅವರಲ್ಲಿ ಚಿಕ್ಕಬಳ್ಳಾಪುರ ತಾಲೂಕಿನಲ್ಲಿ 8 ಚಿಂತಾಮಣಿಯಲ್ಲಿ 3 ಹಾಗೂ ಶಿಡ್ಲಘಟ್ಟದಲ್ಲಿ 1 ವಿದ್ಯಾರ್ಥಿ ಶಾಲೆಗೆ ಮರಳಿದ್ದಾರೆ.

“ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ 181 ಮಕ್ಕಳು ಶಾಲೆಯಿಂದ ದೂರ ಉಳಿದಿದ್ದಾರೆ. ಅವರಲ್ಲಿ 12 ಮಕ್ಕಳನ್ನು ಶಾಲೆಗೆ ಕರೆತರಲಾಗಿದೆ. ಉಳದಿ 169 ಮಕ್ಕಳನ್ನೂ ಶಾಲೆಗೆ ಕರೆತರಲು ಕ್ರಮ ಕೈಗೊಳ್ಳಲಾಗುತ್ತದೆ. ಶಾಲೆಯಿಂದ ಹೊರಗೆ ಉಳಿದ ಮಕ್ಕಳ ಕುಟುಂಬಗಳಲ್ಲಿ ಏನಾದರೂ ಆರ್ಥಿಕ ಹಾಗೂ ಸಾಮಾಜಿಕ ಸಮಸ್ಯೆ ಇದ್ದರೆ ಗುರುತಿಸಿ ಅವರನ್ನು ಹಾಸ್ಟಲ್‌ಗೆ ಸೇರಿಸುವ ವ್ಯವಸ್ಥೆ ಮಾಡಲಾಗುತ್ತದೆ” ಎಂದು ಜಿಲ್ಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಬೈಲಾಂಜನಪ್ಪ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...