ಚಿಕ್ಕಬಳ್ಳಾಪುರ | 19 ವರ್ಷಗಳೇ ಕಳೆದರೂ ಬಡಾವಣೆಗಿಲ್ಲ ಮೂಲ ಸೌಕರ್ಯ

Date:

ಬಡಾವಣೆ ನಿರ್ಮಾಣಗೊಂಡು ಬರೋಬ್ಬರಿ 19 ವರ್ಷಗಳೇ ಕಳೆದಿವೆ. ಆದರೆ, ಅಗತ್ಯವಿರುವ ಮೂಲಭೂತ ಸೌಕರ್ಯಗಳು ಮಾತ್ರ ಇನ್ನೂ ಮರೀಚಿಕೆಯಾಗಿಯೇ ಉಳಿದಿವೆ. ವಸತಿ ವಂಚಿತರು ಸರ್ಕಾರ ನೀಡಿದ ಬಡಾವಣೆಯಲ್ಲಿನ ನಿವೇಶನಗಳಲ್ಲಿ ಮನೆ ಕಟ್ಟಿಕೊಂಡು ವಾಸಿಸುತ್ತಿದ್ದಾರೆ. ಆದರೆ, ಅಗತ್ಯ ಮೂಲ ಸೌಕರ್ಯಗಳಿಲ್ಲದೆ ಪರಾಡುತ್ತಿದ್ದಾರೆ – ಇದು ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೆಪಲ್ಲಿಯ ಹೊಸ ಬಡಾವಣೆಯ ಪರಿಸ್ಥಿತಿ.

ವಸತಿ ವಂಚಿತರಿಗಾಗಿ 19 ವರ್ಷಗಳ ಹಿಂದೆ ಬಾಗೆಪಲ್ಲಿಯ ತಿಮ್ಮಾಕಲಪಲ್ಲಿ ಬಳಿ ಈ ಹೊಸ ಬಡಾವಣೆಯನ್ನು ನಿರ್ಮಾಣ ಮಾಡಲಾಗಿತ್ತು. ಬಡಾವಣೆಯಲ್ಲಿ ಸುಮಾರು 400 ನಿವೇಶನಗಳನ್ನು ನಿರ್ಮಿಸಿ, ಮನೆ ಕಟ್ಟಿಕೊಳ್ಳಲು ಆರ್ಥಿಕ ನೆರವನ್ನೂ ಸರ್ಕಾರ ನೀಡಿತ್ತು. ಈ ಪೈಕಿ, 300 ನಿವೇಶನಗಳಲ್ಲಿ ವಸತಿ ವಂಚಿತರು ಮನೆ ಕಟ್ಟಿಕೊಂಡು ವಾಸಿಸುತ್ತಿದ್ದಾರೆ. ಆದರೆ, ಬಡಾವಣೆಗೆ ಅಗತ್ಯ ಮೂಲ ಸೌಕರ್ಯಗಳನ್ನು ಬಾಗೆಪಲ್ಲಿ ಪುರಸಭೆ ಒದಗಿಸಿಲ್ಲ ಎಂಬ ಆರೋಪಗಳಿವೆ.

ಪಟ್ಟಣದ ಹೊರವಲಯದಲ್ಲೇ ಇರುವ ಬಡಾವಣೆಗೆ ಸರಿಯಾದ ರಸ್ತೆ ಮಾರ್ಗವಿಲ್ಲ. ಬೀದಿದೀಪಗಳೂ ಇಲ್ಲ. ಮನೆಗಳಿಗೂ ವಿದ್ಯುತ್ ಸಂಪರ್ಕವಿಲ್ಲ. ಕುಡಿಯುವ ನೀರಿಗಾಗಿ ಒಂದು ಕಿ.ಮೀ ಹೋಗಿ ನೀರು ತರಬೇಕಾದ ಪರಿಸ್ಥಿತಿಯಿದೆ. ಕೊಳಚೆ ನೀರು ಹರಿದು ಹೋಗಲು ಚರಂಡಿ ವ್ಯವಸ್ಥೆಯೂ ಇಲ್ಲ ಎಂದು ಅಲ್ಲಿನ ನಿವಾಸಿಗಳು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಡಾವಣೆಗೆ ಸರಿಯಾಗ ವಿದ್ಯುತ್ ಸೌಕರ್ಯವಿಲ್ಲದ ಕಾರಣ, ರಾತ್ರಿ ವೇಳೆ ಹೊರ ಬರುವುದೇ ಕಷ್ಟವಾಗಿದೆ. ಹಾಲು, ಚೇಳುಗಳ ಕಾಟವಿದ್ದು, ರಾತ್ರಿ ವೇಳೆ ಕಚ್ಚಿದರೆ ಏನು ಗತಿ ಎಂಬ ಆತಂಕವಿದೆ” ಎಂದು ಬಡಾವಣೆಯ ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬಡಾವಣೆಯಲ್ಲಿ 1,500ಕ್ಕೂ ಹೆಚ್ಚು ಜನರು ವಾಸಿಸುತ್ತಿದ್ದರೂ, ಅಂಗನವಾಡಿ, ಸರ್ಕಾರಿ ಶಾಲೆಯೂ ಇಲ್ಲ. ಹೀಗಾಗಿ, ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ ಅಲ್ಲಿನ ನಿವಾಸಿಗಳು ಬೇಸರ ವ್ಯಕ್ತಪಡಿಸಿದ್ದಾರೆ.

“ಬಡಾವಣೆಯ ಅಭಿವೃದ್ಧಿಗೆ 1ಕೋಟಿ ರೂ. ಬಿಡುಗಡೆ ಮಾಡಿದ್ದೇನೆ. ಆದರೆ ಬಡಾವಣೆ ಪುರಸಭೆ ವ್ಯಾಪ್ತಿಯಲ್ಲಿವೆ. ಜಮೀನು ಪರಗೋಡು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿವೆ. ಹೀಗಾಗಿ, ಅಭಿವೃದ್ಧಿ ಕೆಲಸಗಳನ್ನು ಮಾಡಲು ಸಾಧ್ಯವಾಗುತ್ತಿಲ್ಲ. ಇದನ್ನು ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಪ್ರತ್ಯೇಕವಾಗಿ ಗೆಜಟ್‌ ನೋಟಿಫಿಕೆಷನ್‌ ಮಾಡಿಸಿ, ಎಲ್ಲ ಸೌಕರ್ಯಗಳನ್ನು ಒದಗಿಸುತ್ತೇವೆ” ಎಂದು ಶಾಸಕ ಎಸ್‌.ಎಸ್‌ ಸುಬ್ಬಾರೆಡ್ಡಿ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಂಡ್ಲುಪೇಟೆ | ಸಿಡಿಪಿಒ ವಿರುದ್ಧ ಜಾರಕಿಹೊಳಿ ಬ್ರಿಗೇಡ್ ಭ್ರಷ್ಟಾಚಾರ ಆರೋಪ; ದೂರು

ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ...

ಗದಗ | SC ST ಜನರ ನಡುವೆ ಗಲಾಟೆ; ಗಾಯಾಳುಗಳು ಆಸ್ಪತ್ರೆಗೆ ದಾಖಲು

ನೀರು ಕುಡಿದ ವಿಚಾರಕ್ಕೆ ಪರಿಶಿಷ್ಟ ಜಾತಿ(SC) ಪರಿಶಿಷ್ಟ(ST) ಜನಾಂಗದವರ ನಡುವೆ ಗಲಾಟೆ...

ದಾವಣಗೆರೆ | ರಾಜಕಾಲುವೆ ಚರಂಡಿ ಹಾಗೂ ತಡೆ ಗೋಡೆ ನಿರ್ಮಾಣ ಕಾಮಗಾರಿ ಸ್ಥಗಿತಕ್ಕೆ ತಹಶೀಲ್ದಾರ್ ಆದೇಶ

ರಾಜಕಾಲುವೆ ಭೂಮಾಪನ ಕಾರ್ಯ ಸಂಪೂರ್ಣಗೊಳ್ಳುವವರೆಗೆ ಹರಿಹರ ನಗರದ ರಾಜ ಕಾಲುವೆಯಲ್ಲಿ ಸಣ್ಣ...

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...