ಚಿಕ್ಕಬಳ್ಳಾಪುರ | ಮೊಬೈಲ್‌ ಗೀಳು ಬಿಡು ಎಂದಿದ್ದಕ್ಕೆ ಬಾಲಕ ಆತ್ಮಹತ್ಯೆ

Date:

ಮೊಬೈಲ್ ಗೀಳಿನಿಂದ ಹೊರಬಂದು ಚೆನ್ನಾಗಿ ಓದಬೇಕೆಂದು ಪೋಷಕರು ಬುದ್ದಿ ಹೇಳಿದ್ದನ್ನು ಸಹಿಸದ ವಿದ್ಯಾರ್ಥಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ.

ಜಿಲ್ಲೆಯ ಗೌರಿಬಿದನೂರು ತಾಲೂಕಿನ ಚಿಟ್ಟಾವಲಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ 15 ವರ್ಷದ ಬಾಲಕ ಲೋಕೇಶ್‌ ಆತ್ಮಹತ್ಯೆಗೆ ಶರಣಾದ ದುರ್ದೈವಿ.

ಲೋಕೇಶ್ ಗೌರಿಬಿದನೂರು ನಗರದ ಎಸ್ಇಎಸ್ ಸರ್ಕಾರಿ ಶಾಲೆಯಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಶಾಲೆಯಿಂದ ಬಂದ ಕೂಡಲೇ ಮೊಬೈಲ್‌ ಹಿಡಿದು, ಅದರಲ್ಲೇ ತಲ್ಲೀನನಾಗುತ್ತಿದ್ದ. ಯಾವಾಗಲೂ ವಿಡಿಯೋ ಗೇಮ್‌ ಆಡುವುದರಲ್ಲೇ ಕಾಲ ಕಳೆಯುತ್ತಿದ್ದ. ಆತನಿಗೆ ಮೊಬೈಲ್ ಬಳಸದಂತೆ ಹಲವು ಬಾರಿ ಬುದ್ದಿ ಹೇಳಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅದೇ ರೀತಿ, ಭಾನುವಾರ ರಜೆ ಇದ್ದದ್ದರಿಂದ ಆತ ಹೆಚ್ಚಾಗಿ ಮೊಬೈಲ್ ಬಳಸುತ್ತಿದ್ದ. ಹೀಗಾಗಿ, ಪೋಷಕರು ಆತನಿಗೆ ಮೊಬೈಲ್ ಬಳಸದೆ, ಓದಿನ ಕಡೆ ಗಮನಕೊಡು ಎಂದು ಬುದ್ದಿ ಹೇಳಿದ್ದಾರೆ. ಇದರಿಂದ ಬೇಸರಗೊಂಡ ಲೋಕೇಶ್ ತಮ್ಮ ಜಮೀನಿನ ಬಳಿಯ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಘಟನಾ ಸ್ಥಳಕ್ಕೆ ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಬಾಲಕನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಗೌರಿಬಿದನೂರು ಆಸ್ಪತ್ರೆಗೆ ಹಸ್ತಾಂತರಿಸಿದ್ದಾರೆ.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಆದಾಗ್ಯೂ, ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ಬೆಳಗ್ಗೆ 10ರಿಂದ ಸಂಜೆ 8ರವರೆಗೆ, ಆರೋಗ್ಯ ಸಹಾಯವಾಣಿ 104.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...

ಗದಗ | ಆದ್ಯ ವಚನಕಾರ ದೇವರ ದಾಸಿಮಯ್ಯ: ರಾಘವೇಂದ್ರ ಕೊಪ್ಪಳ

"ಆದ್ಯ ವಚನಕಾರ ನೇಕಾರ ಸಂತ ದೇವರ ದಾಸಿಮಯ್ಯನವರು 10 ನೇ ಶತಮಾನದಲ್ಲಿ...

ಮಾರ್ಚ್ 25ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಬಲಗೈ ಜಾತಿಗಳ ಬೃಹತ್ ಹೋರಾಟ

ಬಾಗೇಪಲ್ಲಿ:-ಕರ್ನಾಟಕ ರಾಜ್ಯ ಬಲಗೈ ಜಾತಿಗಳ ಮಹಾ ಒಕ್ಕೂಟದ ವತಿಯಿಂದ ಒಳ ಮೀಸಲಾತಿ...

ಯುಪಿಎಸ್ಸಿ ರ‍್ಯಾಂಕ್‌ ವಿಜೇತ ವರುಣ್ ಗೌಡಗೆ ಸನ್ಮಾನ

ಕೋಲಾರ: ಯುಪಿಎಸ್ಸಿ ಪರೀಕ್ಷೆಯಲ್ಲಿ 462 ನೇ ರ‍್ಯಾಂಕ್‌ ಪಡದ ತಾಲೂಕಿನ ತ್ಯಾವನಹಳ್ಳಿ...